22/02/2022
ರಾಷ್ಠ ದ್ವಜ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ರಾಜ್ಯ ಸರ್ಕಾರ ಕೂಡಲೇ ಸಂಪುಟದಿ0ದ ಕೈ ಬಿಡುವಂತೆ ರಾಜ್ಯ ಬಿಜೆಪಿ ಸರ್ಕಾರವನ್ನು ಆಗ್ರಹಿಸಿ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗೊಟ್ಟಿಗೆರೆ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಷ್ಮಣ್ ಶ್ರೀಧರ್, ಉತ್ತರಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರ್, ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಂತೋಣಿ ಕಿರಣ್, ಜಿಗಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಕಾಂಗ್ರೆಸ್ ಮುಖಂಡರಾದ ಆರ್.ಕೆ.ರಮೇಶ್, ರಾಜಗೋಪಾಲರೆಡ್ಡಿ, ಡಿ.ಕೆ.ವಿನೋದ್, ಸುಜಯ್, ಕಮ್ಮನಹಳ್ಳಿ ಮಂಜುನಾಥ್, ಹೆಚ್.ಆರ್. ದೀಪಿಕಾರೆಡ್ಡಿ, ನಾಗವೇಣಿ, ಜಿ.ಕೆ.ರವಿ, ಬಾರ್ ಚಂದ್ರಪ್ಪ, ಅಚ್ಚುತ್ ರಾಜ್, ನಟರಾಜ್, ಇಂಜಿಯರ್ ರಾಜಪ್ಪ, ಆನಂದ್ ಗೌಡ, ಹೊಸರೋಡು ಬಾಬು ಮತ್ತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.