Praja Samaya

Praja Samaya ಬದಲಾವಣೆಯ ಜೊತೆ ಜೊತೆ ಸವಾಲುಗಳನ್ನು ಸ್ವೀಕರಿಸುವುದೇ ನಮ್ಮ ಗುರಿ

11/03/2024

CM &DCM: ಕುಡಿಯುವ ನೀರಿನ ಸಮಸ್ಯೆ. ರಾಜ್ಯದ ವಿವಿಧಡೆ ಬರದ ಬವಣೆಯಿಂದ ತತ್ತರಿಸಿರುವ ಸುಮಾರು 98 ತಾಲೂಕುಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದೆ. ಕರಾವಳಿ, ಮಲೆನಾಡು, ಬಯಲು ಸೀಮೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲೂ ಬಿಸಿಲಿನ ಧಗೆಗೆ ಜನರು, ಜಾನುವಾರುಗಳು ತತ್ತರಿಸಿ ಹೋಗುತ್ತಿದ್ದಾರೆ ಕುಡಿಯುವ ನೀರು ಎಲ್ಲರ ಅಗತ್ಯ ತೆ ಮತ್ತು ಕೊರತೆಯಾಗದಂತೆ ಸರಕಾರ ತುರ್ತುಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರೂ ಸರ್ಕಾರವನ್ನು ದೂರುತ್ತಿದ್ದಾರೆ ಮತ್ತೊಂದು ಕಡೆ ಸರ್ಕಾರ ನೀರು ಮಿತವ್ಯಯಕ್ಕೆ ಆದ್ಯತೆ ನೀಡಬೇಕು ಎಂದು ಎಚ್ಚರಿಕೆ ನೀಡಿ, ವಿನಾಕಾರಣ ನೀರಿನ ಬಳಕೆಯದಲ್ಲಿ ದಂಡ ವಿಧಿಸುವಂತೆ ಆದೇಶಿಸಿದೆ.

27/01/2024
https://prajasamaya.com/in-2024-we-must-change-for-a-sustainable-society/  ಎಸ್ ಪಟೇಲ್. ಸಂಪಾದಕರು.
27/01/2024

https://prajasamaya.com/in-2024-we-must-change-for-a-sustainable-society/ ಎಸ್ ಪಟೇಲ್. ಸಂಪಾದಕರು.

2024 ರಲ್ಲಿ ! ‘ಸುಸ್ಧಿತ ಸಮಾಜಕ್ಕೆ ನಾವು ಬದಲಾಗಬೇಕು’ ನಾನು ನನ್ನದೆಂಬ ವ್ಯಾಮೋಹ ಮನುಷ್ಯನಲ್ಲಿ ಯಾವಾಗ ಹುಟ್ಟುತ್ತೆ, ಹೇಗೆ, ಏಕೆ ಹುಟ್ಟ.....

31/10/2023

ಚಿಕ್ಕಮುಕ್ಕೋಡ್ಲು ಗ್ರಾಮ : ಸಾಮೂಹಿಕ: ಇಷ್ಟಲಿಂಗ ಪೂಜೆ, ಶಿವಯೋಗ ಕಾರ್ಯಕ್ರಮ.
ರಾಮನಗರ ಜಿಲ್ಲೆ : ಸಂತೆಕೋಡಿಹಳ್ಳಿ ಹೋಬಳಿ, ಚಿಕ್ಕಮುಕೋಡ್ಲು ಗ್ರಾಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮತ್ತು ಶಿವಯೋಗ ಕಾರ್ಯಕ್ರಮವನ್ನು ಚಿಕ್ಕ ಮುಕ್ಕೋಡ್ಲು ಗ್ರಾಮದ ಲಿಂಗಾಯಿತ ಸಮುದಾಯದ ವತಿಯಿಂದ ಕಾರ್ಯಕ್ರಮ ವನ್ನುಆಯೋಜಿಸಲಾಗಿತು. ಈ ಕಾರ್ಯಕ್ರಮವು ಹಾರೋಹಳ್ಳಿ ತಾ, ದೊಡ್ಡಮರಳವಾಡಿ ಹೋಬಳಿ, ಶ್ರೀ ಬಸವ ಗುರುಕುಲ ಶಿವಮಠದ ಪೂಜ್ಯ ಶ್ರೀ.ನಿ.ಪ್ರ.ಸ್ವ. ಶ್ರೀ ಮೃತ್ಯುಂಜಯ ಸ್ವಾಮಿಗಳ ಆಶಯದಲ್ಲಿ
ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮಿಗಳು ಷ.ಬ್ರ.ಶ್ರೀ ಚಂದ್ರಶೇಖರ ಶ್ರೀ ಬಸವಯೋಗಿ ಪ್ರಭು ಸ್ವಾಮಿ, ಬಸವ ಕೇಂದ್ರ ಚಿಕ್ಕಮಂಗ ಳೂರು, ಷ ಬ್ರ. ಶ್ರೀ ಶಿವಾಚಾರ್ಯ ಸ್ವಾಮಿ ಉಡುಬರಾಣೆ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ಅಜ್ಜ ಬಸವನ ಹಳ್ಳಿ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಲಿಂಗಾಯಿತ ಸಮುದಾಯದವರು ಇಷ್ಟಲಿಂಗ ಆರಾಧನೆ, ಇಷ್ಟಲಿಂಗ ದೀಕ್ಷೆ, ಪೂಜಾ ವಿಧಿ ವಿಧಾನ, ವಚನಾಮೃತಗಳ ಬಗ್ಗೆ ಅರ್ಥೈಸಿವ ಮೂಲಕ ಬಸವ ಶಿವಶರಣೆ ಅಕ್ಕಮಹಾದೇವಿ ವಚನಾಮೃತಗಳು, ಇಷ್ಟಲಿಂಗ ಆರಾಧನೆ ಬಗ್ಗೆ ಮಾಹಿತಿ ನೀಡುವ ಮೂಲಕ, ಮಕ್ಕಳ ವ್ಯಕ್ತಿತ್ವ ವಿಕಾಸನ, ಮಕ್ಕಳಿಗೆ ಶಿವಶರಣರ ಶಿವ ಶರಣರ ತತ್ವ, ವೇಶ ಭೂಷಣ, ವಚನಗಳ ಕಂಠಪಾಠ, ಶಿವ ಸ್ತೋತ್ರ, ಪದ್ಯಗಳನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಲಿಂಗಾಯಿತ ಸಮುದಾಯದ ಯುವಕ ಯುವತಿ ಯರು,ಮಕ್ಕಳು ಮಹಿಳೆಯರು, ಹಿರಿಯರು ಭಾಗವಹಿಸುವ ಮೂಲಕ 12ನೇ ಶತಮಾನದ ಶರಣ ಬಸವ ಅಕ್ಕಮಹಾದೇವಿ ಗತವೈಭವವನ್ನು ಸಾರುವಂತೆ ಚಿಕ್ಕಮುಕ್ಕೋಡ್ಲು ಗ್ರಾಮ ಕಲ್ಯಾಣ ಪಟ್ಟಣ ಎಂಬುದನ್ನು ಮತ್ತೆ ಮರುಕಳಿಸುವಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳಾದ ಹುಣಸನಹಳ್ಳಿ,ಕೋಡಿಹಳ್ಳಿ,ಗಂಗನಹಳ್ಳಿ, ಬನ್ನಿ ಮುಕ್ಕೋಡ್ಲು, ಬೆಲ್ದಾಳೆ ಗ್ರಾಮಗಳ ಲಿಂಗಾಯತ ಸಮುದಾಯದ ಹಿರಿಯ, ಹಿರಿಯರು ಯುವಕರು, ಚಿಕ್ಕ ಮುಕ್ಕೋಡ್ಲು ಗ್ರಾಮದ ವೀರಶೈವ ಯುವಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಲಿಂಗಾಯಿತ ಭಕ್ತರ ಸಮೂಹ ಭಾಗವಹಿಸುವ ಮೂಲಕ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಿ ಗ್ರಾಮದಲ್ಲಿ ನಡೆಸಿಕೊಡಲಾಯಿತು, ಇದೇ ವೇಳೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ಉಡುಗೊರೆ ನೀಡುವ ಮೂಲಕ ಇಷ್ಟಲಿಂಗ ಆರಾಧನೆ ಮತ್ತು ಇಷ್ಟಲಿಂಗ ದೀಕ್ಷೆ ಬಗ್ಗೆ ಅರಿವನ್ನು ಮೂಡಿಸಲಾಯಿತು.

07/10/2023

ಕಾವೇರಿ ವಿವಾದ: ನಮ್ಮನ್ನಾಳುವ ಸರ್ಕಾರಗಳಿಗೆ ಇಚ್ಛಾಶಕ್ತಿ ಕೊರತೆ ? ಕರ್ನಾಟಕ ರಾಜ್ಯ ನೆರೆ ರಾಜ್ಯಗಳೊಂದಿಗೆ ಸಹಕಾರದಿಂದ ಕೂಡಿದರು ನೆ...

ಉಡುಪಿ ಜಿಲ್ಲೆಯ ವ್ಯಾಪ್ತಿಯ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸಭೆಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ ಮು...
05/10/2023

ಉಡುಪಿ ಜಿಲ್ಲೆಯ ವ್ಯಾಪ್ತಿಯ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸಭೆ
ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಕಾನೂನುಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆ ಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾ ಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗ ದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.
ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾ ಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.
8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ.ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹ ನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.
ಕೆಂಪುಕಲ್ಲಿನ( Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.
ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

02/10/2023

ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಚಿವ ಸಿ.ಟಿ ರವಿ ಅವರು ಮಾಧ್ಯಮ ಪ್ರತಿಕ್ರಿಯೆ.
ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಿರುವುದು ದುರದೃಷ್ಟಕರ.
ಅಮಾಯಕರನ್ನ ಗುರಿಯಾಗಿಟ್ಟುಕೊಂಡು ಟಾರ್ಗೆಟ್ ಮಾಡಿ ಗಲಭೆ ಹುಟ್ಟುಹಾಕುವ ಉದ್ದೇಶದಿಂದಲೇ.‌ಪೂರ್ವ ನಿಯೋಜಿತವಾಗಿ ಗಲಭೆ ಮಾಡಲಾಗಿದೆ ಎಂದಿರುವ ಸಿಟಿ ರವಿ , ಇತ್ತೀಚಿನ ವರ್ಷಗಳಲ್ಲಿ ಸೂಕ್ಷ್ಮ ಪ್ರದೇಶ ಅಂತ ಗೊತ್ತಿದ್ರೂ.
ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ಕೆಲ ಪ್ರಶ್ನೆ ಕೇಳಿದ್ದಾರೆ.

02/10/2023

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಶಾಸಕರಾದ ವಿನಯ್ ಕುಲಕರ್ಣಿ, ಬೇಳೂರು ಗೋಪಾಲಕೃಷ್ಣ, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.

28/09/2023

ಕಾವೇರಿ ನೀರು ಬಿಡುಗಡೆ ಮಾಡಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ) ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಜಿನ ಮೆರವಣಿಗೆ ನಡೆಸಿತ್ತು..
https://youtu.be/ekNbJqmiZRM?si=r08eCOxy90eSwXxU

26/09/2023

ರೈತರ ಗೋಳು ಕೇಳುವವರು ಯಾರು? ಎಂ ಲೋಕೇಶ್ ಪ್ರಾಧ್ಯಾಪಕರು, ಅಂಕಣ ಬರಹಗಾರರು, ಬೆಂಗಳೂರಿನ ಸುತ್ತಲ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ...

26/09/2023

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸು ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ. *ತಮಿಳುನಾಡು ಬೇಡಿಕೆ ತಿರಸ್ಕಾರ‌ ಮಾಡಿದ್ದು ಸಂತಸ ತಂದಿದೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.
ಬೆಂಗಳೂರು:
ನಿತ್ಯ 12,500 ಕ್ಯೂಸೆಕ್ಸ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಿರಸ್ಕಾರ ಮಾಡಿದ್ದು ಸಂತಸ ತಂದಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ನಿತ್ಯ 3000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸ್ಸು ಬಳಿಕ ಸದಾಶಿವನಗರದ ನಿವಾಸದ ಬಳಿ ಮಂಗಳವಾರ ಸಂಜೆ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.

12,500 ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮಿತಿಗೆ ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ. ರಾಜ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡ ಸಮಿತಿಗೆ ಧನ್ಯವಾದ ಎಂದರು.

ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್‌ಎಸ್, ಕಬಿನಿ, ಹೇಮಾವತಿ ಆಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲ ಆಗುತ್ತದೆ‌‌. ಕಳೆದ ವಾರ ಸುಪ್ರೀಂಕೋರ್ಟ್ ತೀರ್ಪು ನೀಡುವ ಹೊತ್ತಿನಲ್ಲಿ " ಕರ್ನಾಟಕದವರು ಎಷ್ಟು ಬೇಕಾದರೂ ಅಣೆಕಟ್ಟು ಕಟ್ಟಿಕೊಳ್ಳಲಿ, ನಿಮಗೆ ತೊಂದರೆ ಏನು? ನಿಮ್ಮ ಪಾಲಿನ ನೀರು 177 ಟಿಎಂಸಿ ನಿಮಗೆ ಸಿಗುತ್ತದೆ" ಎಂದು ಸ್ಪಷ್ಟವಾಗಿ ಹೇಳಿದೆ.

ಮೇಕೆದಾಟು ಅಣೆಕಟ್ಟು ನೀರನ್ನು ಕನಕಪುರದವರು ಬಳಸಿಕೊಳ್ಳುತ್ತಾರೆ ಎಂದು ಯಾರೋ ಹೇಳುತ್ತಿದ್ದರು. ಅಣೆಕಟ್ಟು ಇರುವುದೇ ತಮಿಳುನಾಡು ಗಡಿಯಲ್ಲಿ ಎಂದು ಛೇಡಿಸಿದರು.

ಕಾವೇರಿ ನೀರಿನ ಎರಡೂ ಸಮಿತಿಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಸುಪ್ರೀಂ ಕೋರ್ಟಿನ ತೀರ್ಪಿನಿಂದ ಮತ್ತೊಮ್ಮೆ ಭರವಸೆ ಮೂಡಿದೆ, ಆದ ಕಾರಣ ನಮ್ಮ ಸಂಸದರು, ಕೇಂದ್ರ ಸಚಿವರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಎಂದು ಮನವಿ ಮಾಡುತ್ತೇನೆ."

"ರಾಜ್ಯದ ಜನರು ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಮ್ಮೆ ಬಂದ್‌ ಮಾಡಲು ನ್ಯಾಯಾಲಯ ಬಿಡುವುದಿಲ್ಲ, ಆದ ಕಾರಣ ಸೆ.29 ರ ಬಂದ್‌ಗೆ ಅವಕಾಶವಿಲ್ಲ" ಎಂದರು.

"ಕಾವೇರಿ ಹೋರಾಟದ ಜೊತೆಗೆ ರಾಜಕೀಯ ಟೀಕೆ ಕುರಿತ ಮಾಧ್ಯಮಗಳ ಪ್ರಶ್ನೆಗೆ "ಟೀಕೆ ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಅವರು ತಮ್ಮ ಅಸ್ತಿತ್ವಕ್ಕೆ ಮಾಡುತ್ತಾರೆ. ವಿರೋಧ ಪಕ್ಷಗಳ ಬಾಯಿ ಮುಚ್ಚಿಸಲು ಆಗುವುದಿಲ್ಲ. ಬೇಸರ ಮಾಡಿಕೊಳ್ಳಲೂ ಹೋಗುವುದಿಲ್ಲ. ಪ್ರಜಾಪ್ರಭುತ್ವದ ಹಕ್ಕನ್ನು ನಾವು ಪ್ರಶ್ನಿಸಬಾರದು. ಮಾಧ್ಯಮಗಳು ಸಹ ನಮ್ಮ‌ ಮೇಲೆ ಇಲ್ಲಸಲ್ಲದ ಕಥೆಗಳನ್ನು ಹೇಳುತ್ತಾರೆ,‌ ಇದೆಲ್ಲಾ ರಾಜಕೀಯದ ಒಂದು ಭಾಗ" ಎಂದು ಉತ್ತರಿಸಿದರು.

ನಿಮ್ಮ ಆಡಳಿತವಾಧಿಯಲ್ಲಿ ಮೇಕೆದಾಟು ಯೋಜನೆ ಆಗುತ್ತದೆಯೇ ಎನ್ನುವ ಪ್ರಶ್ನೆಗೆ "ಕಾಲವೇ ಉತ್ತರ ಕೊಡುತ್ತದೆ" ಎಂದರು.
ಜಯನಗರದ ಶಾಸಕರ ನೇತೃತ್ವದಲ್ಲಿ ದಾಂಧಲೆ ನಡೆದಿದೆ ಎನ್ನುವ ಪ್ರಶ್ನೆಗೆ "ಸಾರ್ವಜನಿಕರ ಆಸ್ತಿ ಹಾನಿ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ನಾನು ಇದನ್ನು ಮಾಡುವುದಿಲ್ಲ, ನ್ಯಾಯಾಲಯ ಮಾಡುತ್ತದೆ. ಬಂದ್ ಮಾಡುವ ಮುಂಚಿತವಾಗಿ ಸೂಚನೆಯನ್ನೂ ನೀಡಿದೆ. ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ‌. ರಾಜ್ಯದ ಜನರೆಲ್ಲರೂ ಮಳೆಗಾಗಿ ಪ್ರಾರ್ಥನೆ ಮಾಡೋಣ" ಎಂದರು.
ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ತಮಿಳುನಾಡಿಗೆ ಅ.15 ರ ತನಕ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಶಿಫಾರಸ್ಸು ಮಾಡಿದೆ.

26/09/2023

ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ. ಜನರ ಹಿತದೃಷ್ಟಿಯಿಂದ ಅಲ್ಲ-ಮುಖ್ಯ ಮಂತ್ರಿ ಸಿದ್ದರಾಮಯ್ಯ.

ಮೈಸೂರು, ಸೆಪ್ಟೆಂಬರ್ 26:
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದರು.

144 ಸೆಕ್ಷನ್ ಜಾರಿ
ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ ಎಂದರು.

ಬಿಜೆಪಿ ವತಿಯಿಂದ ಚಡ್ಡಿ ಮೆರವಣಿಗೆ*
ಬಿಜೆಪಿ ಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು. ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿಷಯವನ್ನು ರಾಜಕಾರಣ ಮಾಡಬಾರದು ಎಂದರು.

ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ.
ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಎಂಕೆ ತಮಿಳುನಾಡಿನವರು. ಬಿಜೆಪಿ ಎಐಎಡಿಎಂಕೆ ಜೊತೆಗಿತ್ತು. ಅವರನ್ನು ಏನೆಂದು ಹೇಳಬೇಕು ಎಂದು ಪ್ರಶ್ನಿಸಿದರು. ರಾಜಕಾರಣಕ್ಕೆ ಏನೇನೋ ಹೇಳಬಾರದು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣ ಎಂದರು.

ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ.
ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು ಎಂದರು.

ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುತ್ತಿವೆ
ಎಐಎಡಿಎಂಕೆ ಹೊರಗೆ ಬರುತ್ತಿದ್ದಾರೆ, ಮತ್ತೊಂದೆಡೆ ಜಿಡಿಎಸ್ ನಿಂದ ಮುಸ್ಲಿಂ ರು ಹೊರಗೆ ಬರುತ್ತಿದ್ದು, ಬಿಜೆಪಿ ವಿರುದ್ಧ ಧ್ರುವೀಕರಣ ವಾಗಿಟ್ಟಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಡೀ ದೇಶದಲ್ಲಿ ಬಿಜೆಪಿ ವಿರುದ್ಧ ವಾದ ಶಕ್ತಿಗಳು ಒಂದುಗೂಡುವ ಕೆಲಸವಾಗುತ್ತಿದೆ. ಏಕೆಂದರೆ ಬಿಜೆಪಿ ಕಳೆದ 9 ವರ್ಷಗಳಲ್ಲಿ ನುಡಿದಂತೆ ನಡೆದಿಲ್ಲ. ಭಾವನಾತ್ಮಕ ವಿಷಯಾಗಳನ್ನು ಮುಂದಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಈ ಸತ್ಯ ಗೊತ್ತಾದ ಮೇಲೆ ಅನೇಕ ಶಕ್ತಿಗಳು ಒಂದಾಗಿ ಬಿಜೆಪಿಯೇತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿ, ಯಾವ ಬಂದ್ ಬೇಕಾದರೂ ಮಾಡಲಿ ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ಮಾಡಿದೆ. ನಾವೇನು ಅಡ್ಡಿಪಡಿಸಲು ಹೋಗುವುದಿಲ್ಲ ಎಂದರು.

ಸಂಕಷ್ಟ ಪರಿಹಾರ ಸೂತ್ರ ರೂಪಿಸಲು ಒತ್ತಡ.
ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು

*ಮೇಕೆದಾಟು ಜಲಾಶಯದಿಂದ ಪರಿಹಾರ :*
ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

*ರಾಜ್ಯದ ಸಂಸದರು ಕಾವೇರಿ ವಿವಾದ ಪರಿಹಾರಕ್ಕೆ ಪ್ರಯತ್ನಿಸಬೇಕು :*
ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಬಗ್ಗೆ ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಸಕಾರಾತ್ಮಕ ಸೂಚನೆ ಬಂದಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಈ ಬಗ್ಗೆ ಕೇಂದ್ರಕ್ಕೆ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ಶ್ರೀ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಈ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡೋಣ. ರಾಜ್ಯಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯವರ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.

*ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳ ಮಧ್ಯಸ್ಥಿಕೆ ಅಗತ್ಯ :*
ಕಾವೇರಿ ವಿವಾದದ ವಿಷಯವಾಗಿ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಿಕೊಳ್ಳಲು ಸಿದ್ಧವಿದೆಯೆ ಎಂಬುದಕ್ಕೆ ಉತ್ತರಿಸಿ, ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ಧ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದಕ್ಕೆ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು, ರಾಜ್ಯ ಸರ್ಕಾರ ಕಾವೇರಿ ಬಗ್ಗೆ ವಾದವನ್ನು ಸಮರ್ಥವಾಗಿ ಮಂಡಿಸಿಲ್ಲ ಎಂಬ ಟೀಕೆಗೆ ಉತ್ತರಿಸುತ್ತಾ, ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಾಸ್ತವ ಪರಿಸ್ಥಿತಿಯ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದರೂ ಕೂಡ 5000 ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಿದ್ದಾರೆ. ಇಂದು ಪುನ: ಕಾವೇರಿ ವಿವಾದದ ವಿಚಾರಣೆ ಇದ್ದು, ರಾಜ್ಯ ಸರ್ಕಾರ ಸಮರ್ಥ ವಾದಮಂಡನೆ ಮಾಡಲಿದೆ ಎಂದರು.
ಕೇಂದ್ರದಿಂದ ಕೇವಲ ವೋಟ್ ಬ್ಯಾಂಕಿಗಾಗಿ ಮಹಿಳಾ ಮೀಸಲಾತಿ ಮಸೂದೆ ಜಾರಿ :*
ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯ ದೃಷ್ಟಿಯಿಂದ ಕೇಂದ್ರ ಈ ಮಸೂದೆಯನ್ನು ಜಾರಿ ಮಾಡಿದೆ. ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂಬ ಪ್ರಮಾಣಿಕತೆಯಿದ್ದಿದ್ದರೆ, ಈ ಮಸೂದೆಗೆ 15 ವರ್ಷದ ಆಯಸ್ಸನ್ನು 15 ವರ್ಷಕ್ಕೆ ನಿಗದಿಪಡಿಸುತ್ತಿರಲಿಲ್ಲ. ಡಿಲಿಮಿಟೇಷನ್ ಮತ್ತು ಜಾತಿಗಣತಿ ನಂತರ ಈ ಮಸೂದೆ ಜಾರಿ ಎಂದಿದ್ದು, ಈ ಬಾರಿಯ ಹಾಗೂ ಮುಂದಿನ ಲೋಕಸಭೆ ಚುನಾವಣೆ ಅವಧಿಯಲ್ಲಿ ಸಾಧ್ಯವಿಲ್ಲ. ಈಗ ಚಾಲ್ತಿಯಲ್ಲಿರುವ ಜಾತಿಗಣತಿಯ ಆಧಾರದ ಮೇಲೆಯೇ ಮೀಸಲಾತಿಯನ್ನು ಜಾರಿಮಾಡಬಹುದಿತ್ತು. ಈ ಮಸೂದೆಯನ್ನು ಕೇಂದ್ರ ಸರ್ಕಾರ ಕೇವಲ ವೋಟ್ ಬ್ಯಾಂಕಿಗಾಗಿ ಮಾಡಿರುವುದೇ ಹೊರತು, ಮಹಿಳೆಯರ ಪರ ಯಾವುದೇ ಕಾಳಜಿಯಿಲ್ಲ ಎಂದು ತಿಳಿಸಿದರು.
https://youtu.be/rHjKAzhvxk8?si=IQ8TyXxjuxgRRnvo

26/09/2023

ಜಾತಿಯ ಆಧಾರಿತ ಸಮಾಜ ಸ್ಟೃಷ್ಟಿಸುತ್ತಿರುವ ರಾಜಕೀಯ ಪಕ್ಷಗಳು ಡಿ.ಸಿ.ಶಿವಕುಮಾರ್ ಪ್ರಾಧ್ಯಾಪಕರು, ಅಂಕಣ ಬರಹಗಾರರು,ರಾಜಕೀಯ ವಿಶ್ಲೇಷ....

26/09/2023

ನಿಮ್ಮ ಕನಸುಗಳ ಅರ್ಥ ನಿಮಗೆ ಗೊತ್ತೆ..? ಟವಿಕುಮಾರ್. ಮನಶಾಸ್ತ್ರಜ್ಞರು ತುಮಕೂರು. ಕನಸು ಕನಸು ಎಂದರೇನು?… ಕನಸು ಎಂದರೆ ನಾವು ನಮ್ಮ ಜೀವನ...

26/09/2023

ಆನಂದಿಸಲು ಅಂತಸ್ತುಗಳ ಹಂಗೇತಕೆ? ಅಂತರಾತ್ಮ ಶುದ್ಧವಿರಲು… ಕೆ.ನರಸಿಂಹಪ್ಪ ಮೂಡಲಗೊಲ್ಲಹಳ್ಳಿ. ಮುಖ್ಯ ಶಿಕ್ಷಕರು ಕವಿಗಳು ಅಂಕಣ ಬರಹಗ....

25/09/2023

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ನಂತರ ಜೆಡಿಎಸ್ ಯುವನಾಯಕರಾದ ನಿಖಿಲ್ ಕುಮಾರಸ್ವಾಮಿ ರವರು ಮಾಜಿ ಡಿಸಿಎಂ ನಾರಾಯಣ ರವರನ್ನು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಯಾಗಿ ಆಶೀರ್ವಾದ ಪಡೆದುಕೊಂಡರು ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದರು.
https://youtu.be/Ow3qyrTLEfw?si=veibf0Cv-SRfVZu6

25/09/2023

ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ನನ್ನ ರಾಜೀನಾಮೆ ಕೇಳದ ಬಿಜೆಪಿ ಈಗ ಕೇಳುತ್ತಿರುವುದರ ಹಿಂದೆ ರಾಜಕೀಯವಿದೆ: ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಸೆಪ್ಟೆಂಬರ್ 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದರು.

*ಪ್ರತಿಭಟನೆಗೆ ಅವಕಾಶವಿದೆ*
ಕಾವೇರಿ ನೀರಿನ ಸಂಬಂಧ ನಾಳೆ ಬೆಂಗಳೂರು ಬಂದ್ ಹಾಗೂ ನಾಡಿದ್ದು ಕರ್ನಾಟಕ ಬಂದ್ ಕರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಅದನ್ನು ನಾವು ಹತ್ತಿಕ್ಕಲು ಹೋಗುವುದಿಲ್ಲ ಎಂದು ತಿಳಿಸಿದರು.

ಇನ್ನಷ್ಟು ಬಲವಾಗಿ ವಾದ ಮಂಡನೆ

ಕಾವೇರಿ ನೀರು ಹರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶ ಇದೆ. ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ನಮ್ಮ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ ಎರಡರ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೆವು. ಸುಪ್ರೀಂಕೋರ್ಟ್ ನಮ್ಮ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರ ಮಾಡಿದೆ. ತಮಿಳುನಾಡು 24,000 ಕ್ಯೂಸೆಕ್ಸ್ ನೀರು ಕೇಳಿದ್ದರು. ನಂತರ 7200 ಕ್ಯೂಸೆಕ್ಸ್ ಕೇಳಿದರು. ನಾವು 5000 ಕ್ಯೂಸೆಕ್ಸ್ ನೀರು ಕೂಡ ಕೊಡಲಾಗುವುದಿಲ್ಲ. ನಮ್ಮ ಬಳಿ ನೀರಿಲ್ಲ ಎಂದು ವಾದಿಸಿದ್ದು, ಅದನ್ನು ನ್ಯಾಯಾಲಯ ಒಪ್ಪಿಲ್ಲ. ಪುನಃ ಸೆಪ್ಟೆಂಬರ್ 26 ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಲಿದ್ದು. ನಮ್ಮ ವಾದವನ್ನು ಇನ್ನಷ್ಟು ಬಲವಾಗಿ ಮಂಡಿಸಲಾಗುವುದು ಎಂದರು.
https://youtu.be/bMlwd8D6neo?si=Zakzwwymg5o_9czy

25/09/2023

ಮೋಡ ಬಿತ್ತನೆಗೆ ಚಿಂತನೆ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:

"ಮೋಡ ಬಿತ್ತನೆ ಮಾಡಲು ಎರಡು- ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ" ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತ್ರಿಕೆಯೆ ನೀಡಿದ ಅವರು ಹೇಳಿದ್ದಿಷ್ಟು;

"ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತಾಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಮೋಡ ಬಿತ್ತನೆಯಿಂದ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಂಬಿಕೆ ಇದೆ. ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ" ಎಂದು ತಿಳಿಸಿದರು.

ಎರಡು ಪಕ್ಷಗಳ ಅಸಮಧಾನಿತ ನಾಯಕರ ಸೇರ್ಪಡೆಗೆ ಚರ್ಚೆ

ವಿರೋಧ ಪಕ್ಷಗಳ ಮೈತ್ರಿಯಿಂದ ಅಸಮಾಧಾನಿತರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದಾಗ, "ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಎರಡೂ ಪಕ್ಷಗಳ ಅಸಮಾಧಾನಿತರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳ ಜೊತೆ ಈ ವಿಚಾರ ಚರ್ಚೆ ನಡೆಸಲಾಗುತ್ತದೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದೇವೆ. ಪಕ್ಷಾಂತರ ಕಾಯ್ದೆ ಬಗ್ಗೆಯೂ ನಮಗೆ ಎಚ್ಚರಿಕೆ ಇದೆ.
ಸಚಿವರುಗಳನ್ನು ಲೋಕಸಭೆ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಿಸಿರುವ ಬಗ್ಗೆ ಕೇಳಿದಾಗ, "28 ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಕ‌ ಮಾಡಲಾಗಿದೆ. ಇಬ್ಬರು -ಮೂವರು ಸಚಿವರನ್ನು ನೇಮಕ ಮಾಡಲು ಆಗಿಲ್ಲ. ಎಂ.ಬಿ. ಪಾಟೀಲರು ವಿದೇಶದಲ್ಲಿ, ಕೆ.ಜೆ.ಜಾರ್ಜ್ ಅವರು ಪಕ್ಷದ ಕೇಂದ್ರ ಸಮಿತಿಯಲ್ಲಿ ಇರುವ ಕಾರಣ ನೇಮಕ ಮಾಡಲು ಆಗಲಿಲ್ಲ. ಎಲ್ಲಾ ಕ್ಷೇತ್ರಗಳ ವರದಿ 10 ದಿನಗಳಲ್ಲಿ ಕೈ ಸೇರಲಿದ್ದು, ಎರಡು ಅಥವಾ ಮೂರು ಹೆಸರುಗಳನ್ನು ಸೂಚಿಸಬಹುದೆಂದು ನಿರೀಕ್ಷೆಯಿದೆ. ಜನವರಿ ಮುಂಚಿತವಾಗಿ ಮೊದಲ‌ ಪಟ್ಟಿ ಬಿಡುಗಡೆ ಮಾಡುತ್ತೇವೆ" ಎಂದು ತಿಳಿಸಿದರು.

ಪ್ರತಿಭಟನೆಗೆ ಸಹಕಾರ
ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ "ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು". ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ.
ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ.
ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ, ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ?"
ಹೋರಾಟಗಳಿಂದ ಕಾನೂನಾತ್ಮಕ ತೊಂದರೆ ಆಗುವುದಿಲ್ಲವೇ ಎನ್ನುವ ಪ್ರಶ್ನೆಗೆ "ಮಂತ್ರಿಯಾಗಿ ಇದಕ್ಕೆ ಉತ್ತರ ನೀಡಲು ಆಗುವುದಿಲ್ಲ. ನ್ಯಾಯಾಲಯಕ್ಕೆ ಹಾಗೂ ಜನ ಇಬ್ಬರಿಗೂ ಗೌರವ ಕೊಡಬೇಕು. ಜನ ಸಹಕಾರ ಕೊಡದೆ ಇದ್ದರೆ 'ಬಂದ್' ಎನ್ನುವ ಹೋರಾಟಕ್ಕೆ ಮರ್ಯಾದೆ ಇರುವುದಿಲ್ಲ" devil and the deep blue sea ಪರಿಸ್ಥಿತಿಯಲ್ಲಿದ್ದೇವೆ, ಹೇಗೆ ಉತ್ತರಿಸಲಿ? ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ವಿಚಾರ ಬಹಿರಂಗವಾಗಿ ಚರ್ಚೆ ಮಾಡುವಂತಿಲ್ಲ ಎಂದು ಹೈಕಮಾಂಡಿನಿಂದ ಪತ್ರ ಬಂದಿದೆ ಎನ್ನುವ ಪ್ರಶ್ನೆಗೆ "ಇದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ" ಎಂದರು.
https://youtu.be/qoEIARCG6MI?si=edQ05oN4s6CxehH3

23/09/2023

ಶುಭಾಶಯಗಳು

23/09/2023

ಕಾವೇರಿ ಸಮಸ್ಯೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ: ಡಿಸಿಎಂ.ಡಿ.ಕೆ. ಶಿವಕುಮಾರ್ ಮಾಧ್ಯಮಗಳು ಮುಂದೆ ಆರೋಪ.

23/09/2023

ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಇಂದು ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ವೇಳೆ ಶಾಸಕ ಜಿಟಿ ದೇವೇಗೌಡ , ಮಾಜಿ ಶಾಸಕರರಾದ ಡಿಸಿ ತಮ್ಮಣ್ಣ ಸೇರಿದಂತೆ ಹಲವಾರು ಮುಖಂಡ ಉಪಸ್ಥಿತರಿದ್ದರು

23/09/2023

ಕಾವೇರಿ ನೀರು ಬಿಡುವ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು.
https://youtu.be/pDuDMJta9pI?si=mger8jTWZFAjNzJ4

23/09/2023

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ವಿವಿಧ ಕನ್ನಡ ಹೋರಾಟಗಾರರು ರೈತ ಸಂಘಟನೆಗಳು ಹಾಗೂ ರೈತರು ಬೀದಿಗೆ ಇಳಿದು ಹೋರಾಟ

22/09/2023

ಮಾಜಿ ಪ್ರಧಾನಿ ದೇವೇಗೌಡ್ರು ಇಂದು ನವದೆಹಲಿಯಲ್ಲಿ ಕಾವೇರಿ ನೀರು ಬಿಡುಗಡೆ ಕುರಿತಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಗಳಿಗೆ ಪ್ರತಿಕ್ರಿಯೆ ನೀಡಿದರು.
https://youtu.be/bWUM50w0cXg?si=9dwuO_8qpvfrquj_

22/09/2023

ಕಲೆಯಲ್ಲಿ ವಿಶ್ವಕರ್ಮ ಸಮಾಜ ಶ್ರೀಮಂತವಾಗಿದೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ವಿಶ್ವಕರ್ಮ ಸಮಾಜ ಹಿಂದುಳಿದ ಸಮಾಜವಲ್ಲ, ಅತ್ಯಂತ ಮುಂದುವರಿದ ಸಮಾಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಕಾಪು ತಾಲೂಕಿನ ಪಡುಕುತ್ಯಾರುವಿನಲ್ಲಿರುವ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಕ್ಕೆ ಇಂದು ಭೇಟಿ ನೀಡಿ, ಮಾತನಾಡಿದ ಸಚಿವರು, ಇಂದು ಹೊಸ ಹೊಸ ವಿನ್ಯಾಸಗಳು ಮಾರುಕಟ್ಟೆಗೆ ಬಂದಿರಬಹುದು, ವಿಶ್ವಕರ್ಮನ ಕಲೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ವಿಶ್ವಕರ್ಮನ ಕಲೆಯನ್ನು ಇಡೀ ವಿಶ್ವವೇ ಮೆಚ್ಷಿದೆ ಎಂದರು. ಹೆಣ್ಣು ಅಂಧವಾಗಿ ಕಾಣಲು ವಿಶ್ವಕರ್ಮ ಕೈಚಳಕವೇ ಕಾರಣ. ಮೂಗುತಿ, ಕೈಬಳೆಯನ್ನು ತಯಾರಿಸುವ ಮೂಲಕ ಹೆಣ್ಣು ಚೆಂದವಾಗಿ ಕಾಣಲು ಪ್ರಥಮ ಪಾತ್ರವಹಿಸಿದ್ದಾನೆ ಎಂದು ಸಚಿವರು ತಿಳಿಸಿದರು. ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ 2013 ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿಶ್ವಕರ್ಮ ಸಮಾಜಕ್ಕೆ ನಿಗಮ ಮಂಡಳಿಯನ್ನು ಸ್ಥಾಪಿಸಿದ್ದರು. ವಿಶ್ವಕರ್ಮ ಸಮಾಜವನ್ನು ಶೈಕ್ಷಣಿಕವಾಗಿ ಮುಂದೆ ತರಬೇಕಿದೆ, ಉಳಿದಂತೆ ಯಾವ ಕ್ಷೇತ್ರದಲ್ಲೂ ಸಮಾಜ‌ ಹಿಂದೆ ಉಳಿದಿಲ್ಲ ಎಂದರು.
ಪಡುಕುತ್ಯಾರುವಿನಲ್ಲಿರುವ ಆನೆಗುಂದಿ ಕ್ಷೇತ್ರವನ್ನು ಪ್ರವಾಸೋದ್ಯಮ ಸ್ಥಳವಾಗಿಸಲು ಶ್ರಮಿಸುವುದಾಗಿ ಸಚಿವರು ಭರವಸೆ ನೀಡಿದರು. ಈ ವೇಳೆ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಸಚಿವರನ್ನು ಆಶೀರ್ವದಿಸಿದರು. ಈ ವೇಳೆ ಪ್ರತಿಷ್ಠಾನದ‌‌ ಅಧ್ಯಕ್ಷರಾದ ವಡೆರೊಬಳಿ ಶ್ರೀಧರ್ ಆಚಾರ್ಯ, ಹಳೆಯಂಗಡಿ ಸೂರ್ಯಕುಮಾರ್ ಸೇರಿದಂತೆ ಮಠದ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.
https://youtu.be/StGpnckBDtQ?si=zxKOJLpT6BklwB_9

22/09/2023

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

https://youtu.be/wDWzr1DiVNM?si=brYfnIL-DKQFxLnQ

31/08/2023

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ಇಂದು ಕೆಂಪೇಗೌಡ ಏರ್ಪೊಟ್ ನಲ್ಲಿ
ಶಿವಮೊಗ್ಗ ಏರ್ಪೊಟ್ ಉದ್ಘಾಟನೆ ಕುರಿತು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ.





https://youtu.be/IvFFQMdirlo?si=ectL2JPjlZ40vqrN

Address

No 2877, 16th Cross, 2nd B Main Banashankari 2nd Stage
Bangalore
560070

Alerts

Be the first to know and let us send you an email when Praja Samaya posts news and promotions. Your email address will not be used for any other purpose, and you can unsubscribe at any time.

Contact The Business

Send a message to Praja Samaya:

Videos

Share


Other Media/News Companies in Bangalore

Show All