Janataa Tv Kannada

Janataa Tv Kannada ಕನ್ನಡದ ಫಸ್ಟ್ ಇನ್ಫೋಟೈನ್ಮೆಂಟ್ ಚ?

21/03/2024

Janata Exclusive : ವಿ ಸೋಮಣ್ಣಗೆ ಕೈ ಕೊಡ್ತಾವಾ ಈ ತಾಲ್ಲೂಕುಗಳು..!? | V.Somanna | JC MAdhuswamy | Loksabha Election 2024
https://youtu.be/cznuOGS0z3E

Janata Exclusive : ವಿ ಸೋಮಣ್ಣಗೆ ಕೈ ಕೊಡ್ತಾವಾ ಈ ತಾಲ್ಲೂಕುಗಳು..!?
21/03/2024

Janata Exclusive : ವಿ ಸೋಮಣ್ಣಗೆ ಕೈ ಕೊಡ್ತಾವಾ ಈ ತಾಲ್ಲೂಕುಗಳು..!?

Exclusive # ...

09/02/2024

ಚಿತ್ರದುರ್ಗ : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರೋ ಆರೋಪಗಳು ಮತ್ತೆ ಪ್ರತಿಧ್ವನಿಸಿದ್ದು,ಈ ಸಂಬAಧ ಸಿಎಂ ಸಿದ್ರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆಂಪಣ್ಣ ಕೇವಲ ಅಧಿಕಾರಿಗಳ ವಿರುದ್ಧ ಆರೋಪ ಮಾಡ್ತಿದ್ದಾರೆ ಅಷ್ಟೆ ಅಂತ ಸ್ಪಷ್ಟಪಡಿಸಿದ್ರು..
ಇದಲ್ಲದೆ, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ತನಿಖೆ ಮಾಡಲು ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶ ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಕೆಂಪಣ್ಣನವರಾಗಲೀ ಬೇರೆ ಯಾರೇ ಗುತ್ತಿಗೆದಾರನಾಗಲೀ ಆಯೋಗಕ್ಕೆ ದೂರು ಸಲ್ಲಿಸಲು ಮುಕ್ತರಾಗಿದ್ದಾರೆ. ಜೊತೆಗೆ ಅಧಿಕಾರಿಗಳು ಕಮೀಶನ್ ಡಿಮ್ಯಾಂಡ್ ಮಾಡಿದ್ದರೂ ಕೆಂಪಣ್ಣ ಆಯೋಗಕ್ಕೆ ದೂರು ಸಲ್ಲಿಸಲು ಸ್ವತಂತ್ರರು ಅಂತ ಹೇಳಿದ್ರು..

07/02/2024

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು.

06/02/2024

ಮುಖ್ಯಮಂತ್ರಿ ಸಿದ್ದರಾಮಯ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಉಪಸ್ಥಿತರಿದ್ದರು.

05/02/2024

ಬೆಂಗಳೂರು: ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವ ರಾಜಕೀಯ ಸ್ಟಂಟ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಳೆ ಚಾಳಿ ಬಿಟ್ಟಿಲ್ಲ ತಮ್ಮ ತಪ್ಪು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೊಪ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ.
ರೈತ ವಿರೋಧಿ ಸರಕಾರ ರಾಜ್ಯದಲ್ಲಿದೆ. ಒಂಬತ್ತು ತಿಂಗಳಿಂದ ಒಂದು ರೂಪಾಯಿನೂ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ.14ನೇ ಹಣಕಾಸಿಗಿಂತ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ _ಹಣ ಕಡಿಮೆ ಆಗಿದೆ ಅಂತ ಹೇಳಿದ್ದಾರೆ. 15 ನೇ ಹಣಕಾಸು ಆಯೋಗದ ಸಮಿತಿ ಬಂದಾಗ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಆಗ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಆಯೋಗಕ್ಕೆ ಸರಿಯಾಗಿ ಮಾಹಿತಿ ನೀಡಿಲ್ಲ ಹೀಗಾಗಿ 15 ನೇ ಹಣಕಾಸು ಆಯೋಗದಲ್ಲಿ 4.7 % ನಿಂದ 3.6 % ಗೆ ಕಡಿಮೆಯಾಗಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದರು.

05/02/2024

ಬೆಂಗಳೂರು:ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ 2021 ರಲ್ಲಿ ಪ್ರವಾಹ ಬಂದಾಗಲೂ ಅಗತ್ಯ ಹಣ ಕೊಟ್ಟಿಲ್ಲ. ಪರಿಹಾರ ಹಂಚಿಕೆ ಮಾಡುವಾಗ 6 ಮಾನದಂಡಗಳಾದ ಜನಸಂಖ್ಯೆ, ವಿಸ್ತೀರ್ಣ, ವರಮಾನದ ಅಂತರ, ಅರಣ್ಯ ಪ್ರದೇಶ, ತೆರಿಗೆ ಹಣಕಾಸಿನ ಪರಿಸ್ಥಿತಿಗಳನ್ನು ಪರಿಗಣಿಸುತ್ತಾರೆ. ಈ ಮಾನದಂಡಗಳ ಪ್ರಕಾರವೂ ನಮಗೆ ಪರಿಹಾರದ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಬಾರದು. ಪತ್ರ ಬರೆದರೆ ಉತ್ತರ ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಮಂತ್ರಿಗಳಿಗೆ ಭೇಟಿಗೆ ಅವಕಾಶವಿಲ್ಲದಿರುವುದು, ಬರಗಾಲಕ್ಕೆ ಹಣಕಾಸು ಬಿಡುಗಡೆ ಮಾಡದಿರುವುದು, ಹಂಚಿಕೆಯಲ್ಲಿ ಅನ್ಯಾಯವಾಗಿರುವುದು ನೋಡಿದರೆ ಇದು ಒಕ್ಕೂಟ ವ್ಯವಸ್ಥೆಯ ಅಪಮಾನ ಅಲ್ಲವೇ ಎಂದು ಪ್ರಶ್ನಿಸುತ್ತಿದ್ದೇವೆ. ಉತ್ತರ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ ಎಂದರು.

04/02/2024

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿ ನೀಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

02/02/2024

ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತೇವೆ

01/02/2024

ಬೆಂಗಳೂರು : ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದರು.

31/01/2024

ಆಂಕರ್: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎನ್ನವ ಸುದ್ದಿ ಹರಿದಾಡುತ್ತಿದೆ.
ಸದ್ಯ ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಅಧಿವೇಶನ ನಿಗದಿ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ ಅಂತ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸುಗ್ರೀವಾಜ್ಞೆ ಕಳಿಸಿದಾಗ ಅಧಿವೇಶನ ನಿಗದಿಯಾಗಿರಲಿಲ್ಲ. ಸುಗ್ರೀವಾಜ್ಞೆ ರಾಜ್ಯಪಾಲರ ಕೈಸೇರುವ ವೇಳೆಗೆ ಅಧಿವೇಶನ ನಿಗದಿಯಾಗಿದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸುವುದಾಗಿ ಹೇಳಿದ್ದಾರೆ.
ಇನ್ನು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ನೀಡಿರೋ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಸಿಎಂ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅಂತ ಸಷ್ಟಪಡಿಸಿದ್ದಾರೆ.
,

30/01/2024

ಬೆAಗಳೂರು: ಮಂಡ್ಯ ಘಟನೆಯ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ನನ್ನ ತಪ್ಪಿದ್ದರೆ ನೇಣಿಗೆ ಹಾಕಲಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಯವರೇ ಪ್ರಚೋದನೆ ಮಾಡಿ ಗಲಾಟೆ ಮಾಡಿಸಿದ್ದಾರೆ.
ಜೆಡಿಎಸ್ - ಬಿಜೆಪಿ ಜನರಿಗೆ ಪ್ರಚೋದನೆ ನೀಡಿ ಗಲಾಟೆ ಶಾಂತಿ ಕದಡಿದ್ದಾರೆ. ಕುಮಾರಸ್ವಾಮಿ ಹಾಗೂ ಬಿಜೆಪಿ ತಪ್ಪು ಎನ್ನುವುದು ಸ್ಪಷ್ಟವಾಗಿದೆ.ಪಂಚಾಯತಿಯಲ್ಲಿ ಧ್ವಜಸ್ತಂಭದ ಮೇಲೆ ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಿ ಎಂದು ಅನುಮತಿ ನೀಡಲಾಗಿದೆ. ಈ ಬಗ್ಗೆ ಮುಚ್ಚಳಿಕೆಯನ್ನು ಅವರು ಬರೆದುಕೊಟ್ಟಿದ್ದಾರೆ.ಅದರೊಂದಿಗೆ ಯಾವುದೇ ಪಕ್ಷದ, ಧರ್ಮದ ಧ್ವಜವನ್ನು ಹಾರಿಸಬಾರದು ಎಂದೂ ಕೂಡು ತಿಳಿಸಲಾಗಿದೆ.ಆದರೆ ಇವರು ಭಗವಧ್ವಜ ಹಾರಿಸಿದ್ದಾರೆ. ಅದರಿಂದ ಅಶಾಂತಿ ನಿರ್ಮಾಣವಾಗುವಂತೆ ಮಾಡಿದ್ದಾರೆ. ಇದರ ಪರವಾಗಿ ಬಂದಿರುವವರು ಹೆಚ್.ಡಿ.ಕುಮಾರಸ್ವಾಮಿ, ಸಿ.ಟಿ.ರವಿಯವರು. ತಪ್ಪು ಯಾರದ್ದು ಹಾಗಾದರೆ ಎಂದು ಪ್ರಶ್ನಿಸಿದರು.

29/01/2024

ಬೆಂಗಳೂರು: ಹನುಮನ ಕಿಚ್ಚು ಕೇವಲ ಮಂಡ್ಯಕ್ಕೆ ಸಿಮೀತವಾಗದೇ ರಾಜ್ಯದ ಜಿಲ್ಲೆ ಜಿಲ್ಲೆಗೂ ವ್ಯಾಪಿಸಿದೆ. ಬೆಂಗಳೂರು, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ ಸೇರಿದಂತೆ ಹಲವೆಡೆ ಕೇಸರಿ ವೀರರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದ ಘಟನೆಯೂ ನಡೆಯಿತು. ಇಷ್ಟಾದ್ರೂ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಸರ್ಕಾರದ ಕ್ರಮವನ್ನ ಸಮರ್ಥಿಸಿಕೊಂಡು ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.
ಪ್ರಸುತ್ತ ಚುನಾವಣೆ ಸಮೀಪ ಇರುವಾಗಲೇ ಹನುಮ ಧ್ವಜ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪೇಚಿಗೆ ಸಿಲುಕಿದೆ. ಇದೇ ವಿಚಾರ ಇಟ್ಕೊಂಡು ಕೈ ಕಟ್ಟಿ ಹಾಕಲು ಬಿಜೆಪಿ-ಜೆಡಿಎಸ್ ನಾಯಕರು ಅಖಾಡಕ್ಕಿಳಿದಿದ್ದಾರೆ. ಇದು ಸಹಜವಾಗಿಯೇ ಲೋಕ ಸಮರದಲ್ಲಿ ಹಸ್ತ ಪಡೆ ವಿರುದ್ಧ ಪ್ರತಿಕೂಲ ಪರಿಣಾಮ ಬೀರಲಿದೆ.
ಅದರಲ್ಲೂ ಮಾಜಿ ಸಿಎಂ ಹೆಚ್‌ಡಿಕೆ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಆರೋಪ- ಪ್ರತ್ಯಾರೋಪ ನಡೆಯಿತು.

29/01/2024

ಮAಡ್ಯ: ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬAಧಿಸಿದAತೆ ಕಾಳಿಕಾಂಬ ದೇವಾಲಯದ ಬಳಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ಕಾಂಗ್ರೆಸ್‌ನ ಬ್ಯಾನರ್ ಕಾಣುತ್ತಿದ್ದಂತೆ ಯುವಕರು ಹರಿದು ಹಾಕಿ ಕಲ್ಲುಗಳನ್ನು ಎಸೆದಿದ್ದಾರೆ. ಈ ವೇಳೆ ವ್ಯಕ್ತಿಯೋರ್ವನಿಗೆ ಕಲ್ಲೇಟು ಬಿದ್ದು ಗಾಯವಾಗಿದೆ. ಕೆಲ ಪ್ಲೆಕ್ಸ್ಗಳಿಗೆ ಬೆಂಕಿ ಕೂಡ ಹಚ್ಚಲಾಗಿದೆ. ಇದರಿಂದ ಪೊಲೀಸರು ಕೆಲವರಿಗೆ ಲಾಠಿ ಏಟು ಕೊಟ್ಟಿದ್ದಾರೆ. ಹೀಗಾಗಿ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಪೊಲೀಸರು ಮತ್ತು ಹಿಂದೂ ಯುವಕರ ನಡುವೆ ಬಿರುಸಿನ ವಾಗ್ವಾದವೇ ನಡೆಯಿತು.

28/01/2024

ಮಂಡ್ಯ: ಹನುಮ ಧ್ವಜ ತೆರವು ವಿವಾದಕ್ಕೆ ಮಂಡ್ಯ ತಾಲೂಕು ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹನುಮ ಧ್ವಜ ತೆರವುಗೊಳಿಸಲು ಮುಂದಾದ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧ್ವಜಕಂಬದ ಬಳಿ ಕುಳಿತ್ತಿದ್ದ ಮಹಿಳೆಯರು, ಯುವಕರನ್ನ ಪೊಲೀಸರು ಎಳೆದಾಡಿದ್ದು, ಲಘು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಪೊಲೀಸರು ಹಾಗೂ ಗ್ರಾಮಸ್ಥರ ಜಟಾಪಟಿಯಿಂದ ಕೆರಗೋಡು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

28/01/2024

ಮಂಡ್ಯ: ಹನುಮ ಧ್ವಜ ಇಳಿಸೋ ಜಿಲ್ಲಾಡಳಿತದ ನಿರ್ಧಾರಕ್ಕೆ ಕೆರಗೋಡು ಗ್ರಾಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಜಿಲ್ಲಾಡಳಿತ, ಪೊಲೀಸರ ವಿರುದ್ಧ ಆಕ್ರೋಶಗೊಂಡಿರುವ ಗ್ರಾಮಸ್ಥರು, ಹನುಮ ಧ್ವಜ ಇಳಿಸದಂತೆ ಪಟ್ಟು ಹಿಡಿದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಕೆರಗೋಡಿನಲ್ಲಿ ಪರಿಸ್ಥಿತಿ ಕೈ ಮೀರಿದಾಗ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಬೀಸಿ ಧ್ವಜ ಕಂಬದಿAದ ಗ್ರಾಮದಿಂದ ದೂರ ಓಡಿಸಿದ್ದು, ಧ್ವಜ ಕಂಬಕ್ಕೆ ಕಟ್ಟಿದ್ದ ಶ್ರೀರಾಮನ ಫ್ಲೆಕ್ಸ್ ತೆರವುಗೊಳಿಸಿದರು. ಪ್ರತಿಭಟನಾಕಾರರನ್ನು ಎಳೆದಾಕಿದ್ದರಿಂದ ಪೊಲೀಸರ ಜೊತೆ ಗ್ರಾಮಸ್ಥರು ಮಾತಿನ ಚಕಮಕಿ ನಡೆಸಿದರು. ಹನುಮ ಧ್ವಜ ತೆರವಿಗೆ ಯುವಕ, ಮಹಿಳೆಯರು ಕಣ್ಣೀರು ಹಾಕಿದ್ದು, ಪೊಲೀಸರ ವಿರುದ್ದ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದೇ ಪ್ರತಿಭಟನಾ ನಿರತ ಗ್ರಾಮಸ್ಥರು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಭಾವಚಿತ್ರಕ್ಕೆ ಚಪ್ಪಲಿ ಏಟು ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

28/01/2024

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಡೋಲ್ ಬಾರಿಸಿದ್ದು ಹೀಗೆ..

27/01/2024

ಬೆAಗಳೂರು:ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ ೯ ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್ ಮುದ್ರಣ ಮಾಧ್ಯಮ ವಿ ವಿ ಕಪ್* ೨೦೨೪ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಹೆಚ್ಚು ಜನಪ್ರಿಯವಾದ ಪಂದ್ಯ ಹಾಗೂ ಹೆಚ್ಚು ಶ್ರೀಮಂತ ಪಂದ್ಯವೆAದು ಕ್ರಿಕೆಟ್ ಖ್ಯಾತಿ ಪಡೆದಿದೆ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಚಟುವಟಿಕೆ ಅಗತ್ಯ ಬೊಜ್ಜು ಬೆಳೆಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಸೋಲು ಗೆಲುವು ಯಾವುದೇ ಪಂದ್ಯದಲ್ಲಿ ಸಹಜ. ಗೆದ್ದವರಿಗೂ, ಸೋತವರಿಗೂ ಶುಭಾಶಯ ಹೇಳಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಆರು ತಂಡಗಳಿಗೂ ಅಭಿನಂದಿಸಿದರು.
ನಾನು ಕ್ರಿಕೆಟ್ ಆಡುವುದಿಲ್ಲ. ಆದರೆ ಕ್ರಿಕೆಟ್ ವೀಕ್ಷಕ. ಟೆಸ್ಟ್ ಪಂದ್ಯಾವಳಿಯನ್ನು ನೋಡಿ ಅಭ್ಯಾಸವಿದೆ ಎಂದರು. ಸಮಯವಿದ್ದರೆ ಬೆಂಗಳೂರಿನಲ್ಲಿ ಕ್ರಿಕೆಟ್ ನೋಡುತ್ತೇನೆ ಎಂದರು.
ವಿಶ್ವೇಶ್ವರ ಭಟ್ ಅವರು ಸ್ವಂತ ಪತ್ರಿಕೆ ಪ್ರಾರಂಭಿಸಿ ಒಂಭತ್ತು ವರ್ಷಗಳಾಗಿವೆ. ಅದರ ಭಾಗವಾಗಿ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಿದ್ದು, ಇದನ್ನು ಉದ್ಘಾಟಿಸಲು ಆಹ್ವಾನ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಹೇಳಿದರು.
ಈ ವೇಳೆ ವಿಶ್ವವಾಣಿ ಪತ್ರಿಕೆ ಸಂಪಾದಕ, ವಿಶ್ವೇಶ್ವರ ಭಟ್, ಶಾಸಕ ಪ್ರದೀಪ್ ಈಶ್ವರ್, ಪಿ.ಇ. ಎಸ್ ವಿದ್ಯಾಸಂಸ್ಥೆಯ ಕುಲಪತಿ ಸೂರ್ಯಪ್ರಸಾದ್, ಮೊದಲಾದವರು ಉಪಸ್ಥಿತರಿದ್ದರು.

26/01/2024

ಬೆಂಗಳೂರು: ಬೆಂಗಳೂರಿನಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಭಾಗಿಯಾಗಿದ್ರು.ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್‌ಗೆ ನಮನ ಸಲ್ಲಿಸಲಾಯಿತು. ನಂತರ ತೆರೆದ ಜೀಪ್ ನಲ್ಲಿ ಪರೇಡ್ ತಂಡಗಳ ಪರಿವೀಕ್ಷಣೆ ಮಾಡಿದರು.

25/01/2024

ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಕೊಡಗು ಜಿಲ್ಲೆಗೆ ಹೆಲಿಕಾಫ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ತಮ್ಮದೇ ಕಾರಿನಲ್ಲಿ ಸ್ವತಃ ತಾವೇ ಚಾಲನೆ ಮಾಡಿಕೊಂಡು ಕಾರ್ಯಕ್ರಮಕ್ಕೆ ಕರೆ ತಂದರು.ಮಾರ್ಗ ಮಧ್ಯೆ ಸಾವಿರಾರು ಮಂದಿ ಕೊಡಗಿನ ಜನ ಹೂಮಳೆಗರೆದು ಜಯಘೋಷಗಳ ಜತೆಗೆ ಮುಖ್ಯಮಂತ್ರಿಗಳನ್ನು ತಮ್ಮ ಜಿಲ್ಲೆಗೆ ಸ್ವಾಗತಿಸಿದರು.

24/01/2024

ಮಂಡ್ಯ: ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಮರ್ಡರ್ ಮಾಡಿ ಹೆಣ ಹೂತಿಟ್ಟಿದ್ದು ಯಾಕೆ ಎಂಬುದರ ಬಗ್ಗೆ ಆರೋಪಿ ಕೊನೆಗೂ ಬಾಯಿಬಿಟ್ಟಿದ್ದು, ಆರೋಪಿಯನ್ನು ಬಂಧಿಸಿರುವ ಮೇಲುಕೋಟೆ ಪೊಲೀಸರು ರೀಲ್ಸ್ ಟೀಚರ್ ದೀಪಿಕಾ ಕೊಲೆಯ ಇಂಚಿAಚು ಮಾಹಿತಿಯನ್ನು ಕಲೆ ಹಾಕಿದ್ದಾರೆ.
22 ವರ್ಷದ ನಿತೇಶ್ ದೀಪಿಕಾರನ್ನು ಅಕ್ಕ ಅಕ್ಕ ಎಂದೇ ಕರೆಯುತ್ತಿದ್ದ. ಆಕೆಗೆ ಹಲವು ರೀತಿಯಲ್ಲಿ ನೆರವಾಗುತ್ತಿದ್ದ. ಆಕೆಯ ರೀಲ್ಸ್ಗೆ ಕೂಡಾ ನೆರವಾಗುತ್ತಿದ್ದ ಎನ್ನಲಾಗಿದೆ. ಆದರೆ, ಇತ್ತೀಚೆಗೆ ಅವರಿಬ್ಬರ ನಡುವಿನ ಸಂಬAಧದ ಬಗ್ಗೆ ಗಾಸಿಪ್ ಗಳು ಹರಿದಾಡುತ್ತಿದ್ದವು. ನಿತೇಶ್ ಅಕ್ಕನೆಂದು ಕರೆಯುತ್ತಿದ್ದ ದೀಪಿಕಾ ಅವರ ವಿಚಾರದಲ್ಲಿ ಬೇರೆ ಭಾವನೆಗಳನ್ನು ವ್ಯಕ್ತಪಡಿಸಲು ಶುರು ಮಾಡಿದ್ದ ಎನ್ನಲಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ಜನರ ಬಾಯಿಗೆ ಅವರು ಆಹಾರವಾಗಿದ್ದರು.
ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ ದೀಪಿಕಾ ಆತನಿಂದ ಅಂತರ ಕಾಯ್ದುಕೊಂಡಿದ್ದರು. ಮೊದಲಿನಷ್ಟು ಮಾತುಕತೆ, ಭೇಟಿ ಮಾಡುತ್ತಿರಲಿಲ್ಲ ಎನ್ನಲಾಗಿದೆ. ಇದು ದೀಪಿಕಾಳನ್ನು ಅತಿಯಾಗಿ ಹಚ್ಚಿಕೊಂಡಿದ್ದ ನಿತೇಶ್‌ಗೆ ಭಾರಿ ಆಕ್ರೋಶವನ್ನು ಉಂಟು ಮಾಡಿತ್ತು ಎನ್ನಲಾಗಿದೆ.
ಇದಾದ ಬಳಿಕ ಮೇಲುಕೋಟೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ದೀಪಿಕಾ, ನಿತೀಶ್ ಒಂದೇ ಊರಿನವರು. ಸ್ವಗ್ರಾಮದವನಾಗಿದ್ದರಿಂದ ದೀಪಿಕಾ ಕೂಡ ಸಲುಗೆಯಿಂದ ಮಾತನಾಡಿದ್ದಾರೆ. ಕಳೆದ ಜನವರಿ 20ರಂದು ತನ್ನ ಹುಟ್ಟುಹಬ್ಬ ಇದ್ದಿದ್ದರಿಂದ ನಿತೀಶ್, ದೀಪಿಕಾ ಟೀಚರ್‌ಗೆ ಕರೆ ಮಾಡಿ ಮೇಲುಕೋಟೆ ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದಾನೆ. ಬರ್ತ್ಡೇ ದಿನವೇ ದೀಪಿಕಾ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ.

24/01/2024

ಪಿರಿಯಾಪಟ್ಟಣ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ಸಹಿತ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

24/01/2024

ಪಿರಿಯಾಪಟ್ಟಣ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಗದೀಶ್ ಶೆಟ್ಟರ್ ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದರು.

23/01/2024

ಶಿವಮೊಗ್ಗ:ಇಂದು ಹಿರೆಮಗಳೂರು ಕಣ್ಣನ್‌ಗೆ ಮುಜರಾಯಿ ಇಲಾಖೆ ನೋಟಿಸ್ ಜಾರಿ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿರೋ ಮಾಜಿ ಸಚಿವ ಈಶ್ವರಪ್ಪ ಸರ್ಕಾರದ್ದು ಹಿಂದೂ ವಿರೋಧಿ ಧೋರಣೆಯಾಗಿದ್ದು,ಕೂಡಲೇ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

23/01/2024

ಶಿವಮೊಗ್ಗ : ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಕೂಗಿದ ಸಿಎಂ ಸಿದ್ದರಾಮಯ್ಯ ಬಗ್ಗೆ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

23/01/2024

ಬೆಂಗಳೂರು : ಪಾದಯಾತ್ರೆ ಮಟ್ಟು ಹಾಕುವುದು ಸ್ವಾತಂತ್ರ‍್ಯವನ್ನು ಕಸಿದ ಹಾಗೆ. ದೇಶದ ಸಮಸ್ಯೆಗಳಿಗಾಗಿ ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಅದನ್ನು ತಡೆಯುವ ಕೆಲಸ ಬಿಜೆಪಿ, ಹಲವು ಪುಂಡರು ಮಾಡುತ್ತಿದ್ದಾರೆ. ಇದಕ್ಕಾಗಿ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

23/01/2024

ಬೆಂಗಳೂರು: ನಿಗಮ ಮಂಡಳಿಗಳಿಗೆ ಕಾಂಗ್ರೆಸ್ ಶಾಸಕರ ನೇಮಕವೆಲ್ಲ ಫೈನಲ್ ಆಗಿದೆ. ಆದರೆ ಕಾರ್ಯಕರ್ತರ ನೇಮಕದ ಬಗ್ಗೆ ಚರ್ಚೆಯಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಚರ್ಚೆ ನಡೆಸುತ್ತಿದ್ದೇವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಪಟ್ಟಿಗೆ ಸಹಿ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Address

Bangalore

Opening Hours

Monday 10am - 7pm
Tuesday 10am - 7pm
Wednesday 10am - 7pm
Thursday 10am - 7pm
Friday 10am - 7pm
Saturday 10am - 7pm

Telephone

+919742266519

Alerts

Be the first to know and let us send you an email when Janataa Tv Kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to Janataa Tv Kannada:

Videos

Share


Other Broadcasting & media production in Bangalore

Show All