Hi Belagavi

Hi Belagavi "FOR THE SUBJECT THAT MATTER TO U"
HiBelagavi Media 24*7.
ಕುಂದಾನಗರಿ NEWS Li

25/07/2023

ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ

ಬೆಳಗಾವಿ, ಜು.25(ಕರ್ನಾಟಕ ವಾರ್ತೆ): ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು ಕಾಲೇಜುಗಳಿಗೂ ರಜೆ ನೀಡಲಾಗಿದೆ.

ಅಂಗನವಾಡಿ ಕೇಂದ್ರಗಳಿಗೂ ರಜೆ:

ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳಿಗೂ ಬುಧವಾರ (ಜು.26) ರಜೆ ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
***

08/07/2022

ರಸ್ತೆ, ಸಂಚಾರ ನಿಯಮ ಉಲ್ಲಂಘನೆ- ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿತೇಶ್ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಹಾಗೂ ವಾಹನ ದಟ್ಟಣೆ ....

೬೬ ನೇ ಕರ್ನಾಟಕ ರಾಜ್ಯೋತ್ಸವ: ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ---------------------------------------------------------...
01/11/2021

೬೬ ನೇ ಕರ್ನಾಟಕ ರಾಜ್ಯೋತ್ಸವ: ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ
------------------------------------------------------------ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.

(ಸಮಾಜ ಸೇವೆ), ಕಿರಣ ಮಾಳನ್ನವರ(ಸಾಮಾಜಿಕ ಜಾಲತಾಣ) ಹಾಗೂ ನಾಗರಾಜ ಮುರಗೋಡ(ಸಾಹಿತ್ಯ) ಅವರನ್ನು ಸನ್ಮಾನಿಸಲಾಯಿತು.

ಸಂಸದರಾದ ಮಂಗಲ ಅಂಗಡಿ, ಶಾಸಕರಾದ‌ ಅನಿಲ್ ಬೆನಕೆ, ಅಭಯ್ ಪಾಟೀಲ, ಬುಡಾ‌ ಅಧ್ಯಕ್ಷ ಸಂಜಯ ಬೆಳಗಾಂವಕರ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಉತ್ತರ ವಕಯ ಐಜಿಪಿ ಎನ್.ಸತೀಶಕುಮಾರ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಸಿಇಒ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ನಿಯಾಜ್ ಹೋಟೆಲ್ ‌ಮಾಲೀಕನ  ವಿರುದ್ಧ ಎಫ್ ಐ ಆರ್ ದಾಖಲು ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಧರ್ಮದ ಸಾದು, ಸಂತರನ್ನ ಅವಮಾನಿಸಲಾಗಿದೆ ಎಂದು ಬೆಳಗಾ...
13/08/2021

ನಿಯಾಜ್ ಹೋಟೆಲ್ ‌ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲು

ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಧರ್ಮದ ಸಾದು, ಸಂತರನ್ನ ಅವಮಾನಿಸಲಾಗಿದೆ ಎಂದು ಬೆಳಗಾವಿ ನಗರದ ಮಾರ್ಕೆಟ ಠಾಣೆಯಲ್ಲಿ ಹೊಟೇಲ ಮಾಲೀಕನ ವಿರುದ್ದ ಬಜರಂಗದಳ, ವಿಶ್ವ ಹಿಂದೂ ಪರಿಷತ್ತ್ ಹಾಗೂ ವಿವಿಧ ಹಿಂದು ಪರ ಸಂಘಟನೆಗಳು ದೂರು ದಾಖಲಿಸಿದ್ದಾರೆ....

25/05/2021

25/05/2021

24/05/2021

ಜಿಲ್ಲೆಯಾದ್ಯಂತ ಏಕಕಾಲಕ್ಕೆ 135 ಗ್ರಾಮಗಳಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್)ಗೆ ಚಾಲನೆ
------------------------------------------------------------------
ಎಲ್ಲ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ, ಮೇ 24(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ತ್ವರಿತ ಪತ್ತೆಗಾಗಿ ಆಯಾ ಗ್ರಾಮಗಳಲ್ಲಿಯೇ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್) ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಹುಕ್ಕೇರಿ ತಾಲ್ಲೂಕಿನ ಹುಲ್ಲೊಳ್ಳಿ ಹಾಗೂ‌ ಹತ್ತರಗಿ ಗ್ರಾಮದಲ್ಲಿ ಸೋಮವಾರ (ಮೇ 24) ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್)ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ತ್ವರಿತ ಪತ್ತೆಗಾಗಿ ಎಲ್ಲ ಗ್ರಾಮಗಳಲ್ಲಿ ರ್ಯಾಟ್ ನಡೆಸಲು ನಿರ್ಧರಿಸಲಾಗಿದ್ದು, ಮೊದಲ ದಿನವೇ (ಮೇ 24) ಜಿಲ್ಲೆಯ 135 ಗ್ರಾಮಗಳಲ್ಲಿ ಏಕಕಾಲಕ್ಕೆ ರ್ಯಾಟ್ ಶಿಬಿರ ನಡೆಸಲಾಗಿದೆ.
ಉಳಿದ ಗ್ರಾಮಗಳಲ್ಲೂ ಕೂಡ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸಲಾಗುವುದು. ಇದಕ್ಕಾಗಿ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು, ಗ್ರಾಮ ಪಂಚಾಯತಿ ಟಾಸ್ಕ್ ಫೋರ್ಸ್ ಮೂಲಕ ರ್ಯಾಟ್ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಪರೀಕ್ಷೆ ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾಮಗಳಲ್ಲಿಯೇ ಕೋವಿಡ್ ಪರೀಕ್ಷೆಯನ್ನು ಆರಂಭಿಸಲಾಗಿದೆ.
ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಸೋಂಕಿತರ ಸಂಪರ್ಕಿತರನ್ನು ಆಯಾ ಗ್ರಾಮಗಳಲ್ಲಿಯೇ ಪರೀಕ್ಷಿಸಲಾಗುವುದು. ರ್ಯಾಟ್ ನಲ್ಲಿ ಸೋಂಕು ದೃಢಪಟ್ಟರೆ ಅಂತಹವರನ್ನು ತಕ್ಷಣವೇ ಸ್ಥಳೀಯ ಕೋವಿಡ್ ಕೇರ್ ಕೇಂದ್ರಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ತಂಡ ಗ್ರಾಮದಲ್ಲಿ ಕೋವಿಡ್ ಪರೀಕ್ಷಾ ಶಿಬಿರ ಏರ್ಪಡಿಸಿದಾಗ ಶೀತ, ಜ್ವರದ ಲಕ್ಷಣಗಳಿರುವ ಗ್ರಾಮಸ್ಥರು ಸ್ವಯಂಪ್ರೇರಣೆಯಿಂದ ಪರೀಕ್ಷೆ ಮಾಡಿಸಿಕೊಳ್ಳಬೇಕು.

ರ್ಯಾಟ್ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟರೆ ಯಾರೂ ಧೃತಿಗೆಡಬಾರದು. ಸೋಂಕಿತರ ಚಿಕಿತ್ಸೆಗಾಗಿ ಸ್ಥಳೀಯವಾಗಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗಿದೆ.
ಸೋಂಕಿತರಿಗೆ ಉಚಿತವಾಗಿ ಊಟೋಪಚಾರದ ಜತೆಗೆ ಸರಕಾರದ ಮಾರ್ಗಸೂಚಿ ಪ್ರಕಾರ ಔಷಧೋಪಚಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.

ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆ:

ಹುಕ್ಕೇರಿ ತಾಲ್ಲೂಕಿನ ಹುಲ್ಲೋಳಿಯಲ್ಲಿ 39 ಜನರಿಗೆ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದಾಗ ಅದರಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಯಿತು.
ಇಬ್ಬರನ್ನೂ ತಕ್ಷಣವೇ ಕೋವಿಡ್ ಕೇರ್ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು.‌ ಇನ್ನುಳಿದ 37 ಜನರ ವರದಿ ನೆಗೆಟಿವ್ ಬಂದಿದ್ದರೂ ಒಂದು ವೇಳೆ ಲಕ್ಷಣಗಳು ಕಂಡುಬಂದರೆ ಅಂತಹವರ ಮಾದರಿಯನ್ನು ಆರ್.ಟಿ.-ಪಿ.ಸಿ.ಆರ್ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಮನೆ ಮನೆಗೆ ತೆರಳಿ ಕೋವಿಡ್ ಜಾಗೃತಿ:

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಹುಲ್ಲೋಳಿ ಗ್ರಾಮದಲ್ಲಿ ಸಂಚರಿಸಿ ಕೋವಿಡ್ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಗ್ರಾಮ ಪಂಚಾಯತಿ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಜತೆ ಚರ್ಚೆ ನಡೆಸಿದ ಅವರು, ಸೋಂಕಿತರ ಮನವೊಲಿಸುವ ಮೂಲಕ ಕೂಡಲೇ ಅವರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಿಸಬೇಕು ಎಂದು ಹೇಳಿದರು.
ಜನತಾ ಕಾಲನಿಯಲ್ಲಿ ಐಸೋಲೇಷನ್ ನಲ್ಲಿರುವ ಕೆಲ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ‌ ಅವರು ಆರೋಗ್ಯವನ್ನು ವಿಚಾರಿಸಿದರು.
ನಂತರ ಗ್ರಾಮದ ಮನೆ ಮನೆಗೆ ತೆರಳಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಅನಗತ್ಯವಾಗಿ ಯಾರೂ ಹೊರಗಡೆ ಸಂಚರಿಸಬಾರದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಆಗಾಗ ಸಾಬೂನು ಅಥವಾ ಸ್ಯಾನಿಟೈಸರ್ ಮೂಲಕ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಗಡಿ ಚೆಕ್ ಪೋಸ್ಟ್ ಪರಿಶೀಲನೆ:

ಇದಾದ ಬಳಿಕ ಮಹಾರಾಷ್ಟ್ರ ರಾಜ್ಯ ಸಂಪರ್ಕಿಸುವ ಉಳ್ಳಾಗಡ್ಡಿ-ಖಾನಾಪುರದಲ್ಲಿ ಸ್ಥಾಪಿಸಲಾಗಿರುವ ಗಡಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು.
ಹತ್ತರಗಿ ಗ್ರಾಮಕ್ಕೂ ಕೂಡ ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಹತ್ತರಗಿ ಗ್ರಾಮದಲ್ಲಿ ಕೂಡ ಸೋಂಕಿತರ ಸಂಪರ್ಕಿತರು ಹಾಗೂ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಗೆ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್) ಮಾಡಲಾಯಿತು.

ಜಿಲ್ಲೆಯಾದ್ಯಂತ ರ್ಯಾಟ್ ಗೆ ಚಾಲನೆ:

ಕೋವಿಡ್ ತಡೆಗಟ್ಟಲು ಗ್ರಾಮ‌ ಮಟ್ಟದಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ (ರ್ಯಾಟ್)ಗೆ ಮುಂದಾಗಿರುವ ಜಿಲ್ಲಾಡಳಿತವು ಸೋಮವಾರ(ಮೇ 24)ದಿಂದ ಜಿಲ್ಲೆಯಾದ್ಯಂತ ರ್ಯಾಟ್ ಗೆ ಚಾಲನೆ ನೀಡಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್ ಎಚ್.ವಿ. ಅವರ ನೇತೃತ್ವದಲ್ಲಿ ಬೈಲಹೊಂಗಲ ತಾಲ್ಲೂಕಿನ ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆಗೆ ಚಾಲನೆ ನೀಡಲಾಯಿತು.
ಅದೇ ರೀತಿ ಅಪರ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಕೋವಿಡ್ ಪತ್ತೆಗೆ ರ್ಯಾಟ್ ನಡೆಸಲಾಯಿತು.
ಗ್ರಾಮ ಮಟ್ಟದಲ್ಲಿ ಇರುವ ಟಾಸ್ಕ್ ಫೋರ್ಸ್ ಮೂಲಕ ಕೋವಿಡ್ ಪರೀಕ್ಷಾ ಶಿಬಿರಗಳನ್ನು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದ್ದಾರೆ.
*****

Government duty
22/05/2021

Government duty




29/04/2021

ಸಚಿವೆ ಶಶಿಕಲಾ ಜೊಲ್ಲೆ ಆಪ್ತ ಹಾಗೂ ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವಾ ಬಿದರಿ ಅವರ ನಡುವೆ ವಾಗ್ವಾದ್ ಸಚಿವರ ಒಡೆತನದ ಜ್ಯೋತಿ ಬಜಾರ ಸರ್ಕಾರ ನಿಗದಿ ಪಡಿಸಿದ ಸಮಯ ಮೀರಿ ತೆರೆದದನ್ನ ಕಂಡು ಅಧಿಕಾರಿ ಗರಂ

Follow :-       .trolls
26/04/2021

Follow :-

.trolls

23/04/2021

Weekend Lockdown start in Belagavi city

uttarakannada

11/04/2021

ಲಾಕ್ ಡೌನ್ VS ಬೆಳಗಾವಿ ಈರಣ್ಣ

Video credit:-

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ  ಕೊಲ್ಲಾಪುರದಲ್ಲಿ  ಹಾಗೂ ಸುತ್ತಮುತ್ತ ಶಿವಸೇನೆ ಯವರು ಕನ್ನಡಿಗರಿಗೆ ಕಿರುಕುಳ ನೀಡುತ್ತಿರುವುದು  ತುಂಬಾ ಖ...
13/03/2021

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಾಗೂ ಸುತ್ತಮುತ್ತ ಶಿವಸೇನೆ ಯವರು ಕನ್ನಡಿಗರಿಗೆ ಕಿರುಕುಳ ನೀಡುತ್ತಿರುವುದು ತುಂಬಾ ಖಂಡನೀಯ. ಕನ್ನಡ ನಾಡಿನ ಜನರು ಹೆಚ್ಚಿರುವ ಕೊಲ್ಲಾಪುರದಲ್ಲಿ ನಾಮ ಫಲಕಗಳು ಕನ್ನಡದಲ್ಲಿಯೇ ಇರುವುದು ಅಪರಾಧವಲ್ಲ. ಇದನ್ನೇ ದೊಡ್ಡದು ಮಾಡಿ ಅಲ್ಲಿನ ಕನ್ನಡಿಗರಿಗೆ ಹಾಗೂ ಅವರು ನಡೆಸುತ್ತಿರುವ ವಾಣಿಜ್ಯ ಸಂಸ್ಥೆಗಳಿಗೆ ತೊಂದರೆ ಕೊಡುತ್ತಿರುವುದು ಹಾಗೂ ನಮ್ಮ ಸರ್ಕಾರ ದ ಸಾರಿಗೆ ಬಸ್ಸುಗಳಿಗೆ ಹಾನಿ ಮಾಡುತ್ತಿರುವುದು ಖಂಡನೀಯ. ಇಂತಹ ಕಾರ್ಯದಲ್ಲಿ ತೊಡಗಿರುವ ಶಿವಸೇನೆ ಕಾರ್ಯಕ ರ್ತರ ಮೇಲೆ ಕೂಡಲೇ ಮಹಾರಾಷ್ಟ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ಹಾಗೂ ಮರಾಠಿ ಭಾಷಿಗರ ನಡುವೆ ಸೌಹಾರ್ದ ವಾತಾವರಣ ಉಂಟುಮಾಡುವ ದಿಸೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ. ಇದರ ಜೊತೆಗೆ ಕರ್ನಾಟಕ ದ ಗೃಹ ಮಂತ್ರಿಗಳು ಈ ಬಗ್ಗೆ ಅ ರಾಜ್ಯದ ಗೃಹ ಮಂತ್ರಿಗಳನ್ನು ಸಂಪರ್ಕಿಸಬೇಕೆಂದು ಕೋರುತ್ತೇನೆ.

*ಡಾ. ಸಿ. ಸೋಮಶೇಖರ.* *ಐಎಎಸ್ ನಿ. ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ....

20/02/2021

ಜಿಲ್ಲೆಯ ಕ್ರಿಯಾಶೀಲ ಜಿಲ್ಲಾಧಿಕಾರಿಗಳಾದ ಎಂ.ಜಿ ಹೀರೆಮಠ ಅವರು‌ ಬೈಲಹೊಂಗಲ ಗ್ರಾಮದ ಬೈಲವಾಡನಲ್ಲಿ ಸರಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಹೂಡಿ ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಿಮಿತ್ಯ ಮಕ್ಕಳಿಗಾಗಿ ಹಾಡನ್ನು ಹಾಡಿ ಮನರಂಜಿಸಿದರು...

ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ"ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕ...
17/01/2021

ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ: ಗಣ್ಯರಿಂದ ಸ್ವಾಗತ

"ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಬರಮಾಡಿಕೊಳ್ಳಲಾಯಿತು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷ ವಿಮಾನದಲ್ಲಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರು ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.
***

29/12/2020

ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕನ್ನಡ ಧ್ವಜಸ್ತಂಭಕ್ಕೆ ಕಬ್ಬು ತುಂಬಿದ ಲಾರಿಯಿಂದ ಹಾನಿಯಾಗಿರುತ್ತದೆ ಎಂಬುದು ಸ್ಥಳದಲ್ಲಿರುವ ಸಿಸಿಟಿವಿ ದೃಶ್ಯಾವಳಿಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ  ಗಡಿ ಭಾಗದಲ್ಲಿ ಕನ್ನಡ ಭಾಷೆಯನ್ನು ಪ್ರಬಲವಾಗಿ  ಬಳಸಬೇಂಕೆಂಬ ಆದೇಶವಿದ್ದರು ಸರಿಯಾಗಿ  ಪಾಲಿಸಲಾಗುತ್ತಿಲ್ಲ ಈಂತಹ ಹ...
27/12/2020

ಜಿಲ್ಲಾಧಿಕಾರಿಗಳ ಆದೇಶದಂತೆ ಗಡಿ ಭಾಗದಲ್ಲಿ ಕನ್ನಡ ಭಾಷೆಯನ್ನು ಪ್ರಬಲವಾಗಿ ಬಳಸಬೇಂಕೆಂಬ ಆದೇಶವಿದ್ದರು ಸರಿಯಾಗಿ ಪಾಲಿಸಲಾಗುತ್ತಿಲ್ಲ ಈಂತಹ ಹೋಟೆಲ ಮಾಲಿಕರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಬೇಕು.

ಮಾಲಿನ್ಯ ನಿಯಂತ್ರಣ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಬೆಳಗಾವಿಯ ಪ್ರತಿಷ್ಠಿತ 4 ಕೈಗಾರಿಗಳನ್ನು ಸಿಜ್ ಮಾಡುವಂತೆ ಪರಿಸರ ಅಧಿಕಾರಗಳಿಗೆ ಜಿಲ್ಲಾಧಿಕಾರ...
06/11/2020

ಮಾಲಿನ್ಯ ನಿಯಂತ್ರಣ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಬೆಳಗಾವಿಯ ಪ್ರತಿಷ್ಠಿತ 4 ಕೈಗಾರಿಗಳನ್ನು ಸಿಜ್ ಮಾಡುವಂತೆ ಪರಿಸರ ಅಧಿಕಾರಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹೀರೆಮಠ ಅವರು ಆದೇಶ ಹೊರಡಿಸಿದ್ದಾರೆ.

31/10/2020

23/10/2020


ಕಿತ್ತೂರು ಉತ್ಸವ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ
--------------------------------------------------------------------
ಕಿತ್ತೂರು ಉತ್ಸವ-2020ಕ್ಕೆ ಚಾಲನೆ
ವಿಜಯದ ದ್ಯೋತಕವಾಗಿರುವ "ವೀರಜ್ಯೋತಿ" ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ "ಕಿತ್ತೂರು ಉತ್ಸವ-2020"ಕ್ಕೆ ಚಾಲನೆ ನೀಡಲಾಯಿತು.

hi_belagavi
15/10/2020

hi_belagavi

11/10/2020

ಚಿಕ್ಕೋಡಿ ಬ್ರೆಕಿಂಗ್

ಹುಕ್ಕೇರಿ ಪಟ್ಟಣದಲ್ಲಿ ರಕ್ಕಸ ಮಳೆ

ರಕ್ಕಸ ಮಳೆಗೆ ಹುಕ್ಕೇರಿ ಪಟ್ಟಣದ ಜನ ತತ್ತರ

ಕಳೆದ ಎರಡು ಗಂಟೆಯಿಂದ ಸುರಿಯುತ್ತಿರುವ ರಕ್ಕಸ ಮಳೆ

ಭಾರಿ ಮಳೆಯಿಂದಾಗಿ ನದಿಗಳಂತಾದ ಪಟ್ಟಣದ ರಸ್ತೆಗಳ

ನದಿಗಳ ರೂಪದಲ್ಲಿ ರಸ್ತೆಗಳ ಮೇಲೆ ಹರಿಯುತ್ತಿರುವ ನೀರು

ಭಾರಿ ಮಳೆಯಿಂದ ಸಂಕೇಶ್ವರ ಹುಕ್ಕೇರಿ ರಾಜ್ಯ ಹೆದ್ದಾರಿ ಬಂದ್

ರಸ್ತೆ ನಡು ನೀರಿನಲ್ಲೆ ನಿಂತ ವಾಹನಗಳು ಸಂಚಾರ ಬಂದ್ ಪ್ರಯಾಣಿಕರ ಪರದಾಟ

ನೀರಿನ ರಬಸಕ್ಕೆ ಕೊಚ್ಚಿಕೊಂಡು ಹೋದ ಬೈಕ್ ಗಳು

ಸಾಯಿ ಮಂದಿರ ರಸ್ತೆಯಲ್ಲಿ ಹಗ್ಗದಿಂದ ಬೈಕ್ ಗಳನ್ನ ಕಟ್ಟಿ ಹಾಕಿದ ಜನ

ಮಳೆಯಿಂದ ಹುಕ್ಕೇರಿ ಪಟ್ಟಣದ ಹಲವು ಮನೆಗಳಿಗೆ ನುಗ್ಗಿದ ಮಳೆ ನೀರು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣ

     -19
11/10/2020

-19

Follow :-         .trolls
02/10/2020

Follow :-

.trolls

                                     .ravi.d.channannavar
02/10/2020

.ravi.d.channannavar

26/09/2020

26/09/2020

ಕರ್ನಾಟಕ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಸುರಿಮಳೆ ಸುರಿಸಿದ ಅಂಗಡಿಯವರ ಆತ್ಮಕ್ಕೆ ದೇವರು ಶಾಂತಿ ನೀಡಲಿ...
23/09/2020

ಕರ್ನಾಟಕ ರಾಜ್ಯಕ್ಕೆ ರೈಲ್ವೆ ಯೋಜನೆಗಳು ಸುರಿಮಳೆ ಸುರಿಸಿದ ಅಂಗಡಿಯವರ ಆತ್ಮಕ್ಕೆ ದೇವರು ಶಾಂತಿ ನೀಡಲಿ...

Address

Belagavi
Belagavi

Telephone

+918861170113

Website

Alerts

Be the first to know and let us send you an email when Hi Belagavi posts news and promotions. Your email address will not be used for any other purpose, and you can unsubscribe at any time.

Contact The Business

Send a message to Hi Belagavi:

Videos

Share


Other Media/News Companies in Belagavi

Show All