Belagavi - ಬೆಳಗಾವಿ

Belagavi - ಬೆಳಗಾವಿ ನಮ್ಮ ಬೆಳಗಾವಿ, ಸುಂದರ ಬೆಳಗಾವಿ. ಕರ್ನಾಟಕದ ೨ನೇ ರಾಜಧಾನಿಯಾಗಿರುವ ಬೆಳಗಾವಿಯ ಬಗ್ಗೆ ಮಾಹಿತಿ ನೀಡುವ ಪುಟ.

ಚಳಿಗಾಲ ಅಧಿವೇಶನ: ವಿವಿಧ ಸಮಿತಿಗಳ ಸಭೆ----------------------------------ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆಬೆ...
23/11/2024

ಚಳಿಗಾಲ ಅಧಿವೇಶನ: ವಿವಿಧ ಸಮಿತಿಗಳ ಸಭೆ
----------------------------------
ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ, ನ.23(ಕರ್ನಾಟಕ ವಾರ್ತೆ): ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ‌ ನಡೆಯಲಿದೆ. ಪ್ರತಿವರ್ಷದಂತೆ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಥತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಸತಿ, ಸಾರಿಗೆ ಮತ್ತು ಊಟೋಪಹಾರ ಸೇರಿದಂತೆ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.

ವಿಧಾನಮಂಡಳ ಚಳಿಗಾಲ ಅಧಿವೇಶನದ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ(ನ.23) ಜರುಗಿದ ವಿವಿಧ ಉಪ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ‌ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಆ್ಯಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್ ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಅಲ್ಪೋಪಹಾರ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ತಿಳಿಸಿದರು.
ಇದಲ್ಲದೆ ಪ್ರತಿಭಟನಾ ಸ್ಥಳಗಳ ನಿರ್ವಹಣೆ ಹಾಗೂ ಸೂಕ್ತ‌ಭದ್ರತೆ ಬಗ್ಗೆಯೂ ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಪಾಲಿಕೆಯ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ನಿರ್ದೇಶನ ನೀಡಿದರು.

ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಸೇರಿದಂತೆ ಸುಗಮ ಅಧಿವೇಶನಕ್ಕಾಗಿ ಹತ್ತು ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.

ಹೈಸ್ಪೀಡ್ ಸಾಮರ್ಥ್ಯದ ಅಂತರ್ಜಾಲ ಸಂಪರ್ಕ; ಕಂಪ್ಯೂಟರ್, ಲೇಖನ ಸಾಮಗ್ರಿಗಳು ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.

ಇದಲ್ಲದೇ ಪ್ರತಿವರ್ಷದಂತೆ ಅಧಿವೇಷನದಲ್ಲಿ ಭಾಗವಹಿಸುವ ಅಧಿಕಾರಿಗಳು, ಸಿಬ್ಬಂದಿ‌ ಮತ್ತು ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಸುವರ್ಣ ಸೌಧದ ಮುಖ್ಯ ಪ್ರವೇಶ ದ್ವಾರದಿಂದ ಒಳಗಡೆ ಆವರಣದವರೆಗೆ ಸಾರ್ವಜನಿಕರಿಗೆ ಕರೆದೊಯ್ಯಲು ಉಚಿತ ಬಸ್ ವ್ಯವಸ್ಥೆ ಕೂಡ ಈ ಬಾರಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಅಂದಾಜು 6 ಸಾವಿರ ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರತಿವರ್ಷದಂತೆ ಬಿಗಿ ಭದ್ರತೆ ಕಲ್ಪಿಸಲಾಗುವುದು ಎಂದು ವಿವರಿಸಿದರು.
ಸುವರ್ಣಸೌಧದ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಲ್ಲೂ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಇದಲ್ಲದೇ ಸಾರಿಗೆ ನಿರ್ವಹಣೆಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

ಅಧಿವೇಶನ ಬಂದೋಬಸ್ತಿಗೆ ಆಗಮಿಸುವ ಐದಾರು ಸಾವಿರ ಪೊಲೀಸ್ ಹಾಗೂ ಕೆ.ಎಸ್.ಆರ್.ಪಿ. ಸಿಬ್ಬಂದಿಗೆ ಅಗತ್ಯ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಬೆಳಗಾವಿ ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ್ ವಿವರಿಸಿದರು.

ಸಭೆಯಲ್ಲಿ ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತೆ ಶುಭಾ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
****

ಮಾಹಿತಿ : ಬೆಳಗಾವಿ ವಾರ್ತೆ

23/11/2024

ಹುಕ್ಕೇರಿಯಲ್ಲಿ ಇಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಗೊಡಚಿ ವೀರಭದ್ರೇಶ್ವರ 🙏🙏
23/11/2024

ಗೊಡಚಿ ವೀರಭದ್ರೇಶ್ವರ 🙏🙏

23/11/2024

ಲವ್ ರೆಡ್ಡಿ ಸಿನಿಮಾ,ತನ್ನ ಸುಂದರ ಪ್ರೇಮಕತೆ, ಮನವ ಮುಟ್ಟುವ ನಟನೆ ಮೂಲಕ ಎಲ್ಲರ ಮನಗೆಲ್ಲುತ್ತಿದೆ🤗❤


In Cinemas Now

Book Tickets on
All that you would like to explore and know about the movie Love Reddy (Kannada) - (Kannada) https://in.bookmyshow.com/bengaluru/movies/love-reddy-kannada-kannada/ET00420722









22/11/2024

ಇಂದು ರಿಲೀಸ್ ಆದ "ಆರಾಮ್ ಅರವಿಂದ ಸ್ವಾಮಿ" ಚಿತ್ರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ 🤗
ಟಿಕೆಟ್ ಬೆಲೆ ಕೇವಲ 99 ರೂಪಾಯಿಗಳು ಮಾತ್ರ ❤️









ಎಮಿರೇಟ್ಸ್ ವಿಮಾನದಲ್ಲಿ ಕನ್ನಡ ಮೆನು 😍💛❤
22/11/2024

ಎಮಿರೇಟ್ಸ್ ವಿಮಾನದಲ್ಲಿ ಕನ್ನಡ ಮೆನು 😍💛❤

ಕೆಂಪೇಗೌಡ & ಅಮೃತ ನಟನೆಯ "ಕಟ್ಲೆ " ಸಿನಿಮಾದ "ಯಾರೋ ನಾ ಕಾಣೆ " ವಿಡಿಯೋ ಸಾಂಗ್ 5 ಲಕ್ಷ  ವೀಕ್ಷಣೆಯತ್ತ ಸಾಗಿದೆ 🙌🏻❤🔗:https://youtu.be/tq-...
22/11/2024

ಕೆಂಪೇಗೌಡ & ಅಮೃತ ನಟನೆಯ "ಕಟ್ಲೆ " ಸಿನಿಮಾದ "ಯಾರೋ ನಾ ಕಾಣೆ " ವಿಡಿಯೋ ಸಾಂಗ್ 5 ಲಕ್ಷ ವೀಕ್ಷಣೆಯತ್ತ ಸಾಗಿದೆ 🙌🏻❤

🔗:
https://youtu.be/tq-UCiAOmVU?si=RqWHt70llrjvgCS8













ನಿಮ್ಮ ಊರು ಹಾಗೂ ಜಿಲ್ಲೆ ಯಾವ್ದು ?  #ಕಮೆಂಟ್ ಮಾಡಿ.
22/11/2024

ನಿಮ್ಮ ಊರು ಹಾಗೂ ಜಿಲ್ಲೆ ಯಾವ್ದು ? #ಕಮೆಂಟ್ ಮಾಡಿ.

21/11/2024

"ಲವ್ ರೆಡ್ಡಿ " ಚಿತ್ರದ ನಿರ್ಮಾಪಕರ ಅಭಿಮಾನದ ಪ್ರಶ್ನೆಗೆ...
ಲಾಯರ್ ಜಗದೀಶ್ ಅವ್ರು ಯಾಕಿಷ್ಟು ಆಕ್ರೋಶಕ್ಕೆ ಒಳಗಾದ್ರು?

In Cinemas From Tomorrow







ನಿಮ್ಮ ಕಡೆ ಇದಕ್ಕೆ ‌ಏನ್ ಅಂತೇರಿ ?  #ಕಮೆಂಟ್ ಮಾಡ್ರಿ
21/11/2024

ನಿಮ್ಮ ಕಡೆ ಇದಕ್ಕೆ ‌ಏನ್ ಅಂತೇರಿ ? #ಕಮೆಂಟ್ ಮಾಡ್ರಿ

ಕೆಂಪೇಗೌಡ & ಅಮೃತ ಅಭಿನಯದ "ಕಟ್ಲೆ " ಸಿನಿಮಾದ "ಯಾರೋ ನಾ ಕಾಣೆ " ವಿಡಿಯೋ ಸಾಂಗ್ 5 ಲಕ್ಷ ವೀಕ್ಷಣೆಯತ್ತ ಸಾಗಿದೆ ❤️🎊🔗:https://youtu.be/tq-...
21/11/2024

ಕೆಂಪೇಗೌಡ & ಅಮೃತ ಅಭಿನಯದ "ಕಟ್ಲೆ " ಸಿನಿಮಾದ "ಯಾರೋ ನಾ ಕಾಣೆ " ವಿಡಿಯೋ ಸಾಂಗ್ 5 ಲಕ್ಷ ವೀಕ್ಷಣೆಯತ್ತ ಸಾಗಿದೆ ❤️🎊

🔗:
https://youtu.be/tq-UCiAOmVU?si=RqWHt70llrjvgCS8













ಪರದೆ ಮಾತಾಡಿದಾಗ...ನಾಳೆ "ಆರಾಮ್ ಅರವಿಂದ ಸ್ವಾಮಿ " ಸಿನಿಮಾ ಬೆಳ್ಳಿ ತೆರೆಯ ಮೇಲೆ ಬರಲಿದೆ ❤️🎊𝗘𝗻𝘁𝗲𝗿𝘁𝗮𝗶𝗻𝗺𝗲𝗻𝘁 ಗೆ ಇಲ್ಲ ಬರ ಕೇವಲ 99/- ದರ ನಾ...
21/11/2024

ಪರದೆ ಮಾತಾಡಿದಾಗ...
ನಾಳೆ "ಆರಾಮ್ ಅರವಿಂದ ಸ್ವಾಮಿ " ಸಿನಿಮಾ ಬೆಳ್ಳಿ ತೆರೆಯ ಮೇಲೆ ಬರಲಿದೆ ❤️🎊

𝗘𝗻𝘁𝗲𝗿𝘁𝗮𝗶𝗻𝗺𝗲𝗻𝘁 ಗೆ ಇಲ್ಲ ಬರ ಕೇವಲ 99/- ದರ ನಾಳೆ ನಿಮ್ಮ ಆಗಮನದ ನಿರೀಕ್ಷೆಯಲ್ಲಿ ಚಿತ್ರ ತಂಡ 😍❤️









21/11/2024

ಟೈಟಲ್ ನಿಂದಲೇ ಸದ್ದು ಮಾಡುತ್ತಿರುವ "ಆರಾಮ್ ಅರವಿಂದ ಸ್ವಾಮಿ" 𝗣𝗿𝗲 𝗥𝗲𝗹𝗲𝗮𝘀𝗲 ಈವೆಂಟ್ ನಲ್ಲಿ ಬಘೀರ ಶ್ರೀ ಮುರಳಿ💥🔥

ಇನ್ನು ಕೇವಲ 2 ದಿನಗಳಲ್ಲಿ ಆರಾಮ್ ಅರವಿಂದ ಸ್ವಾಮಿ ಬಿಡುಗಡೆ 🎊









🙏🙏
21/11/2024

🙏🙏

ವಿಧಾನಮಂಡಳ ಚಳಿಗಾಲ ಅಧಿವೇಶನ-2024--------------------------------ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ...
20/11/2024

ವಿಧಾನಮಂಡಳ ಚಳಿಗಾಲ ಅಧಿವೇಶನ-2024
--------------------------------
ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಸೂಚನೆ

ಬೆಳಗಾವಿ, ನ.20(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ನ.20) ಜರುಗಿದ ವಿಧಾನಮಂಡಳ ಚಳಿಗಾಲ ಅಧಿವೇಶನ-2024 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.

ಅಧಿವೇಶನದ ಯಶಸ್ವಿಗಾಗಿ ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣಾ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಅಧಿವೇಶನಕ್ಕೆ ಆಗಮಿಸುವ ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು.

ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು.

ಅಧಿವೇಶನಕ್ಕೆ ಆಗಮಿಸುವ ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾದ ಹೊಟೇಲ್ ಗಳನ್ನು ಪರಿಶೀಲಿಸಿ, ಅವುಗಳ ಮಾಲಿಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಲು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರೋಷನ್ ತಿಳಿಸಿದರು.

ವೈದ್ಯಕೀಯ ತಂಡಗಳ ನಿಯೋಜನೆ:

ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸಿದ ಎಲ್ಲರ ಆರೋಗ್ಯ ರಕ್ಷಣೆ ಹಾಗೂ ತುರ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಎಲ್ಲ ವಸತಿ‌ ಸ್ಥಳಗಳಲ್ಲಿ ಮತ್ತು ಸುವರ್ಣ ವಿಧಾನಸೌಧದಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ಮತ್ತು ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಒಟ್ಟಾರೆಯಾಗಿ ಪ್ರಸಕ್ತ ಸಾಲಿನ‌ ಚಳಿಗಾಲದ‌ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ‌ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ತಮ್ಮ‌ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸವೇಕು.
ಎಲ್ಲ ಇಲಾಖೆಗಳು, ಸಮಿತಿಗಳಿ ಮತ್ತು ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಪಾಲಿಕೆ ಆಯುಕ್ತೆ ಶುಭಾ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ, ಕಾಡಾ ಆಡಳಿತಾಧಿಕಾರಿ ಸತೀಶಕುಮಾರ್, ಲೊಕೋಪಯೋಗಿ ಇಲಾಖೆ ಅಭಿಯಂತರ ಸೊಬರದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಡಿಡಿಪಿಐ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ‌ ಭಜಂತ್ರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
****

ಮಾಹಿತಿ : ಬೆಳಗಾವಿ ವಾರ್ತೆ

ಡಿಸೆಂಬರ್ 14 ರಂದು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಅದ್ಧೂರಿ ಗಡಿನಾಡು ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲ...
19/11/2024

ಡಿಸೆಂಬರ್ 14 ರಂದು ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಅದ್ಧೂರಿ ಗಡಿನಾಡು ಉತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಗಡಿ ಭಾಗದ ಎಲ್ಲ ಕನ್ನಡ ಮನಸುಗಳು ಭಾಗಿಯಾಗಿ ಯಶಸ್ವಿಗೊಳಿಸಬೇಕಾಗಿ ವಿನಂತಿ.

ಈಗ್ರಾ ವಿಷ್ ಮಾಡ್ರಿ 😂😂😂
19/11/2024

ಈಗ್ರಾ ವಿಷ್ ಮಾಡ್ರಿ 😂😂😂

ಕನ್ನಡ ರಥ..😍ಬಸ್ಸಿನ ಚಾಲಕ-ನಿರ್ವಾಹಕರ ಕನ್ನಡಪ್ರೇಮಕ್ಕೆ ಶರಣು.🙏📸 - ಜಾಫರ್ ಮುಲ್ಲಾ ಫೋಟೋಗ್ರಾಫೀ
19/11/2024

ಕನ್ನಡ ರಥ..😍
ಬಸ್ಸಿನ ಚಾಲಕ-ನಿರ್ವಾಹಕರ ಕನ್ನಡಪ್ರೇಮಕ್ಕೆ ಶರಣು.🙏

📸 - ಜಾಫರ್ ಮುಲ್ಲಾ ಫೋಟೋಗ್ರಾಫೀ

Address

Belagavi/ಬೆಳಗಾವಿ
Belgaum
590001

Alerts

Be the first to know and let us send you an email when Belagavi - ಬೆಳಗಾವಿ posts news and promotions. Your email address will not be used for any other purpose, and you can unsubscribe at any time.

Contact The Business

Send a message to Belagavi - ಬೆಳಗಾವಿ:

Videos

Share

Category