11/12/2023
370ನೇ ವಿಧಿ ರದ್ಧತಿ ಹಿನ್ನೆಲೆ;
ಕೇಂದ್ರದ ಕ್ರಮಕ್ಕೆ 'ಸುಪ್ರೀಂ' ಬಲ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಎತ್ತಿ ಹಿಡಿದಿದೆ.
ಆಗಸ್ಟ್ 2019 ರ ಆದೇಶವನ್ನು ಹೊರಡಿಸಲು ರಾಷ್ಟ್ರಪತಿಗಳು 370 (3) ನೇ ವಿಧಿಯಡಿ ಅಧಿಕಾರವನ್ನು ಚಲಾಯಿಸುವಲ್ಲಿ ಯಾವುದೇ ತೊಂದರೆಗಳಿಲ್ಲ. ಹೀಗಾಗಿ, ರಾಷ್ಟ್ರಪತಿಗಳ ಅಧಿಕಾರವನ್ನು ಚಲಾಯಿಸುವುದು ಮಾನ್ಯವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಹಿನ್ನೆಲೆಯಲ್ಲಿ ಪೀಠ ಈ ತೀರ್ಪು ನೀಡಿದೆ.