ಯಾರು ಏನೇ ಹೇಳಿದರೂ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ದಾವಣಗೆರೆ-ಯಾರು ಏನೇ ಹೇಳಿದರೂ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ನಗರದ ತಮ್ಮ ನಿವಾಸ ಶಿವ ಪಾರ್ವತಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಕೇಳುವುದಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.
ಸದ್ಯಕ್ಕಂತೂ ಮುಖ್ಯಮಂತ್ರಿ ಬದಲಾವಣೆಯೆಂಬುದು ಇಲ್ಲವೇ ಇಲ್ಲ. ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಮಂತ್ರಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆಯೆಂಬುದೆಲ್ಲಾ ಮಾಧ್ಯಮಗಳ ಸೃಷ್ಟಿ ಅಷ್ಟೇ. ಊಟಕ್ಕೆ ಕುಳಿತರೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದೆಲ್ಲಾ ಬೇಡ. ಎಲ್ಲರೂ ಸೇರಿಕೊಂಡು, ಊಟಕ್ಕೂ ಕೂಡಬಾರದಾ? ಹೊಸ
ದಾವಣಗೆರೆ - ಜನವರಿ 5 ರಂದು ಬೆಳಗ್ಗೆ 9 ಗಂಟೆಗೆ ಶಾಮನೂರು ರಿಂಗ್ ರಸ್ತೆಯಲ್ಲಿನ ಕರ್ನಲ್ ಎಂ.ಬಿ.ರವೀಂದ್ರನಾಥ್ ವೃತ್ತದ ಬಳಿಯಿಂದ ರಾಜಮಟ್ಟದ ಯುವಜನೋತ್ಸವದ ಪ್ರಯುಕ್ತ ಜಾನಪದ ಮೇಳದ ಮೆರವಣಿಗೆಗೆ
ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ನಾನು ಆರೋಗ್ಯವಾಗಿದ್ದೇನೆ : ಶಾಸಕ ಶಾಮನೂರು ಶಿವಶಂಕರಪ್ಪ
ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನದ ಅನುದಾನ ಹೆಚ್ಚಳ ಮಾಡಬೇಕು ಎಂದು ಸಂಸತ್ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷಕ್ಕೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ಅನುದಾನ ಹೆಚ್ಚಳದಿಂದ ಸಾಕಷ್ಟು ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ.ಈ ಬಗ್ಗೆ ಗಮನಹರಿಸುವಂತೆ ಕೋರಿದರು.
ದಾವಣಗೆರೆ ನಗರದೇವತೆಯ ಸನ್ನಿಧಿಯಲ್ಲಿ ಸಚಿವರು ಹಾಗೂ ಸಂಸದರಿಂದ ಪೂಜೆ
*ದಾವಣಗೆರೆ: ಶ್ರೀ ದುರ್ಗಾಂಭಿಕಾ ದೇವಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ಧರ್ಮಪತ್ನಿ ಮತ್ತು ಸಂಸದರಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಶುಕ್ರವಾರದ ವಿಶೇಷ ಪೂಜೆಯನ್ನು ಕುಟುಂಬ ಸಮೇತರಾಗಿ ತೆರಳಿ ಸಲ್ಲಿಸಿದರು.
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ
ದಾವಣಗೆರೆ: ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಹಿನ್ನಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ವೇದಿಕೆಯಲ್ಲಿ ಭಾಷಣವನ್ನು ಮಾಡಿದ ಸಚಿವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪಾಲಿಕೆ ಆಯುಕ್ತರು, ದೂಡ ಅಧ್ಯಕ್ಷರು ಪಾಲಿಕೆ ಸದಸ್ಯರು ಇತರರಿದ್ದರು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರಿಂದ ದೀಪಾವಳಿ ಹಬ್ಬದ ಶುಭಾಶಯಗಳು
ದಾವಣಗೆರೆ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಪ್ರಯುಕ್ತ ನಗರದಲ್ಲಿ ಅಭಿಮಾನಿ ಬಳಗದಿಂದ ಜಯದೇವ ಸರ್ಕಲ್ ಬಳಿ ತೆಂಗಿನ ಕಾಯಿ ಒಡೆದು ಸಂಭ್ರಮಾಚರಣೆ ಮಾಡಲಾಯಿತು.
ದಾವಣಗೆರೆ ಹಿಂದೂ ಮಹಾಗಣಪತಿ ಅದ್ದೂರಿ ಮೆರವಣಿಗೆ
ದಸರಾ ಉತ್ಸವಕ್ಕೆ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರಿಂದ ಚಾಲನೆ
ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ತಾಯಿ ದುರ್ಗಾಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತರಾಗಿ ತೆರಳಿ ನವರಾತ್ರಿ ಹಾಗೂ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ತಾಯಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ದೀಪ ಬೆಳಗಿಸಿದರು. ಈ ವೇಳೆ ಸಚಿವರ ಸಹೋದರರಾದ
ಎಸ್.ಎಸ್.ಗಣೇಶ್, ಎಸ್.ಎಸ್ ಬಕ್ಕೇಶ್ ಹಾಗೂ ಕುಟುಂಬದವರು, ದೇವಸ್ಥಾನದ ಧರ್ಮದರ್ಶಿಗಳಾದ ನಾಗರಾಜ್ ಜೋಯಿಸ್, ಶ್ರೀಪಾದ ಭಟ್ಟರು, ಶಾನುಭೋಗರು ಹಾಗೂ ರೈತರು, ಬಾಬುದಾರರು, ಕಾರ್ಯಕರ್ತರು, ಪಾಲಿಕೆ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
ವಾಕಥಾನ್ ಗೆ ಚಾಲನೆ ನೀಡಿದ ನಟಿ ಅದಿತಿ ಪ್ರಭುದೇವ
ವಾಕಥಾನ್ ಗೆ ಚಾಲನೆ ನೀಡಿದ ನಟಿ ಅದಿತಿ ಪ್ರಭುದೇವ
ದಾವಣಗೆರೆ: ಎಸ್.ಎಸ್. ನಾರಾಯಣ ಹೆಲ್ತ್ ವತಿಯಿಂದ ವಿಶ್ವಹೃದಯ ದಿನದ ಅಂಗವಾಗಿ ಸೆ.29ರಂದು ಬೆಳಿಗ್ಗೆ ಹೃದಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾಕಾಥಾನ್ ಹಮ್ಮಿಕೊಳ್ಳಲಾಗಿತ್ತು.
ನಗರದ ಗುಂಡಿವೃತ್ತದ ಬಳಿಯಿರುವ ಎಸ್ಎಸ್ಐಎಂಎಸ್ ಮತ್ತು ಆರ್ಸಿ ಓಪಿಡಿ ಕಾಂಪೌಂಡ್ ಆವರಣದಿಂದ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು , ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ನಟಿ ಅದಿತಿ ಪ್ರಭುದೇವ, ಜಿಲ್ಲಾ ಸರ್ಕಾರಿ ಅಧಿಕಾರಿಗಳು, ಎಸ್.ಎಸ್. ನಾರಾಯಣ ಹೆಲ್ತ್ ನ ವೈದ್ಯರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ನಿಂದ ಗಣೇಶೋತ್ಸವದ ಹಿನ್ನೆಲೆಯಲ್ಲಿ 18ಅಡಿ
ಎತ್ತರದ ಶಿವರೂಪಿ ವಿನಾಯಕನ ಮೂರ್ತಿ
ಪ್ರತಿಷ್ಠಾಪಿಸಲಾಗಿದೆ.
ಮಂಟಪದ ಒಳಗಡೆ ಮಹರ್ಷಿ ಭಗೀರಥರ
ಕಥಾನಕ ಪ್ರದರ್ಶನ ನಡೆಯುತ್ತದೆ.