Santu benahal

Santu benahal siddaramai followers

12/08/2024

10/08/2024

lad # bjp fail

07/08/2024

is always king #

10/03/2024

ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಖಜಾನೆಯಲ್ಲಿ ದುಡ್ಡು ಉಳಿದಿಲ್ಲ ಎಂದು ವಿರೋಧ ಪಕ್ಷಗಳು ನಿರಂತರವಾಗಿ ಸುಳ್ಳು ಸೃಷ್ಟಿಸುತ್ತಿದ್ದು, ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದರೆ ಇಂದು ಹೊಸಕೋಟೆ ಕ್ಷೇತ್ರದಲ್ಲಿ 600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಬಜೆಟ್ ನಲ್ಲಿ ಅಭಿವೃದ್ಧಿಗೆ 1.20 ಲಕ್ಷ ಕೋಟಿ ಪಾಲು ಇಟ್ಟಿದ್ದೇವೆ.
ಈ ಸತ್ಯವನ್ನು ಚರ್ಚಿಸಲು ನಾನು ಸಿದ್ಧನಿದ್ದೇನೆ. ಬಹಿರಂಗ ಚರ್ಚೆಗೆ BJP Karnataka ನಾಯಕರು ಸಿದ್ಧರಿದ್ದೀರ?

#ಹೊಸಕೋಟೆ

05/12/2023
ಹಲೋ ಪಬ್ಲಿಕ್ ಟಿವಿ ಸುವರ್ಣ ನ್ಯೂಸ್ ಬಕೆಟ್ ನ್ಯೂಸ್ ನಿಮ್ ಮೋದಿ ಅಳವಡಿಸಿದ್ದು ಚಿಪ್ ಇಲ್ವಾ ಇದರಲ್ಲಿ ಅದರಿಂದ ಯಲ್ಲಿದಾವೆ ಅಂತ ಹುಡುಕಿಸಿ ಕೊಡಿ ...
02/12/2023

ಹಲೋ ಪಬ್ಲಿಕ್ ಟಿವಿ ಸುವರ್ಣ ನ್ಯೂಸ್ ಬಕೆಟ್ ನ್ಯೂಸ್ ನಿಮ್ ಮೋದಿ ಅಳವಡಿಸಿದ್ದು ಚಿಪ್ ಇಲ್ವಾ ಇದರಲ್ಲಿ ಅದರಿಂದ ಯಲ್ಲಿದಾವೆ ಅಂತ ಹುಡುಕಿಸಿ ಕೊಡಿ ಪ್ಲೀಸ್

29/11/2023

😄ಭಕ್ತ 😄

ಸತ್ಯ ಮಾತಾಡಿದ್ರೆ... ಹಾಗೆ broನಿನ್ನ ಪಕ್ಕ ನಾವ್ ಇದೀವಿ....ಯಾವುದೊ ಒಂದ್ ನಾಯಿ ಬೊಗಳಿದರೆ ನಿನ್ ತಾಕತ್ ಕಮ್ಮಿ ಆಗಲ್ಲ.... Dr Bro ಕನ್ನಡ ಜಗ...
21/10/2023

ಸತ್ಯ ಮಾತಾಡಿದ್ರೆ... ಹಾಗೆ bro
ನಿನ್ನ ಪಕ್ಕ ನಾವ್ ಇದೀವಿ....ಯಾವುದೊ ಒಂದ್ ನಾಯಿ ಬೊಗಳಿದರೆ ನಿನ್ ತಾಕತ್ ಕಮ್ಮಿ ಆಗಲ್ಲ.... Dr Bro ಕನ್ನಡ ಜಗತ್ತಿನಲ್ಲಿ ಯಾವ ಮೂಲೆ ಕೂಡ ಬಿಡ್ಬೇಡ... ಹೋಗಿ ಬಾ ದೇವ್ರು

Santu benahal

17 ತಿಂಗಳು ಭಾರತದ  ಪ್ರಧಾನಿಯಾಗಿದ್ದ ಶಾಸ್ತ್ರೀಜಿಯವರು  17 ವರ್ಷ ಪ್ರಧಾನಿಯಾಗಿದ್ದ ನೆಹರುವನ್ನು ಜನಪ್ರಿಯತೆಯಲ್ಲಿ ಮತ್ತು ಸಾಧನೆಯಲ್ಲಿ ಮೀರಿಸಿ...
02/10/2023

17 ತಿಂಗಳು ಭಾರತದ ಪ್ರಧಾನಿಯಾಗಿದ್ದ ಶಾಸ್ತ್ರೀಜಿಯವರು 17 ವರ್ಷ ಪ್ರಧಾನಿಯಾಗಿದ್ದ ನೆಹರುವನ್ನು ಜನಪ್ರಿಯತೆಯಲ್ಲಿ ಮತ್ತು ಸಾಧನೆಯಲ್ಲಿ ಮೀರಿಸಿದ್ದರು...

ಅವತ್ತು ಶಾಸ್ತ್ರೀಜಿ ಅಪ್ಪಿತಪ್ಪಿ ಮತ್ತೆ ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ, ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು. ಈ ಅನಾಹುತದಿಂದ ಎಚ್ಚೆತ್ತ ಪಾಕಿಸ್ತಾನ ಅಮೇರಿಕಾದ ಮುಂದೆ ಮಂಡಿಯೂರಿ ಯುದ್ಧವನ್ನು ನಿಲ್ಲಿಸಲು ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.

ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು. ಆ ಗೋಧಿಯ ಗುಣಮಟ್ಟ ಹೇಗಿತ್ತೆಂದರೆ, ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು. ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು ಜವಾಹರಲಾಲ್ ನೆಹರು. ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ, ಭಾರತಕ್ಕೆ ಗೋಧಿಯ ರಫ್ತನ್ನು ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು. ತಕ್ಷಣವೇ ಶಾಸ್ತ್ರೀಜಿಯವರಿಂದ ಅಮೆರಿಕಾಕ್ಕೆ ರವಾನೆಯಾದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ, ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ, ದುಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ, ಹಸಿವಿನಿಂದ ಸಾಯುವುದೇ ವಾಸಿ. ಇಂದಿನಿಂದ ನಿಮ್ಮ ಗೋಧಿ ನಮಗೆ ಬೇಕಿಲ್ಲ” ಎಂದು ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾ

“ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ. ದೇಶಕ್ಕೆ ಅಮೇರಿಕಾದಿಂದ ಗೋಧಿ ಆಮದಾಗುವುದು ನಿಂತಿದೆ. ದೇಶದ ಜನ ಸಹಕರಿಸಬೇಕಿದೆ, ಒಂದಾ ನೀವು ನೇರವಾಗಿ ಸೇನೆಗೆ ಧನ, ಆಹಾರದ ಸಹಾಯವನ್ನು ಮಾಡಬಹುದು ಅಥವಾ ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬೇಕು . ಇದರಿಂದ ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು. ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು” ಇವರ ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆ ದೇಶದ ಜನಮನವನ್ನು ತಲುಪಿತು....

ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು. ಹಲವರು ಸೇನೆಗೆ ಸಹಾಯ ಮಾಡಿದರು. ಲಕ್ಷಾಂತರ ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು. ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು ಉಪವಾಸವೃತವನ್ನು ಕೈಗೊಂಡರು. ಶಾಸ್ತ್ರೀಜಿಯವರ ಪತ್ನಿ, ಲಲಿತಾದೇವಿಯವರು ಅನಾರೋಗ್ಯ ಪೀಡಿತರಾಗಿದ್ದರು. ಮನೆಗೆಲಸಕ್ಕೆಂದು ಕೆಲಸದವಳೊಬ್ಬಳು ಬರುತ್ತಿದ್ದಳು. ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದರು. ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು, ಮನೆಯನ್ನು ಸ್ವಚ್ಛಗೊಳಿಸುವುದು, ನಿಮ್ಮ ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.

“ದೇಶಕ್ಕಾಗಿ ಇದು ಅನಿವಾರ್ಯವಮ್ಮಾ. ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು. ದೇಶದ ಒಳಿತಿಗಾದೀತು” ಎಂದು ಹೇಳಿದರು. ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ ನಿಭಾಯಿಸುತ್ತಿದ್ದರು. ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು. ಅವರನ್ನೂ ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ” ಟ್ಯೂಟರ್ ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ. ಇಂಗ್ಲಿಷರು ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ” ಎಂದರು.

ಒಂದು ದಿನ ಶಾಸ್ತ್ರೀಜಿಯವರ ಪತ್ನಿ, ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು ಹಣವೆಲ್ಲಿದೆ..? ಬರುವ ಸಂಬಳವನ್ನೂ ಬಿಟ್ಟಾಗಿದೆ. ಮನೆಯ ಖರ್ಚುಗಳನ್ನು ಕಡಿಮೆ ಮಾಡು” ಎಂದಿದ್ದರು.

ಲಾಲ್ ಬಹದ್ದೂರ್ ಶಾಸ್ತ್ರಿಜಿ ದೇಶದ ಪ್ರಧಾನಮಂತ್ರಿ ಆಗಿದ್ದಾಗ Fiat ಕಾರ್ ಖರೀದಿ ಮಾಡಲು PNB ಬ್ಯಾಂಕಲ್ಲಿ 5 ಸಾವಿರ ರೂಪಾಯಿ ಸಾಲ ಮಾಡಿದ್ರಂತೆ. ಅವರ ಅಕಾಲಿಕ ಮರಣದ ಬಳಿಕ PNB ಬ್ಯಾಂಕ್ ಅವರ ಸಾಲವನ್ನು ಮನ್ನಾ ಮಾಡಲು ಮುಂದಾಯಿತು... ಇದನ್ನು ಶಾಸ್ತ್ರಿಜಿಯ ಪತ್ನಿ ನಯವಾಗಿ ತಿರಸ್ಕರಿಸಿ ತನ್ನ ಗಂಡನ ಪೆನ್ಶನ್ ಹಣದಲ್ಲಿ ಆ 5 ಸಾವಿರವನ್ನು ಕಂತಿನ ಮೂಲಕ ಪಾವತಿ ಮಾಡಿದ್ರಂತೆ. ಪ್ರಧಾನಿ ಮತ್ತು ಅವರ ಕುಟುಂಬ ಅಂದ್ರೆ ಹೀಗಿರಬೇಕು.

ಇವತ್ತು ಅಕ್ಟೋಬರ್ 2 ಶಾಸ್ತ್ರೀಜಿಯವರ ಜನ್ಮದಿನ ನಿರ್ಲಕ್ಷ್ಯಕ್ಕೊಳಗಾಗಿರುವ ಈ ಸರಳ, ಸಜ್ಜನ ಮಹಾಪುರುಷನನ್ನು ನಾವು ಮತ್ತೆ ಮತ್ತೆ ಸ್ಮರಿಸಬೇಕಿde

ಇನ್ನು ಮಲಗಿದರೆ ಭಾರತ ಇರುವುದಿಲ್ಲ ಹಲೋ ಹೆಂಗ್ pungli  ಸಾಹೇಬ್ರೆ ನಿಮ್ ಮೋದಿ ಗೇ ಕಾಲ್ ಮಾಡಿ ಹೇಳ್ರಿ ಸ್ವಲ್ಪ
26/09/2023

ಇನ್ನು ಮಲಗಿದರೆ ಭಾರತ ಇರುವುದಿಲ್ಲ ಹಲೋ ಹೆಂಗ್ pungli ಸಾಹೇಬ್ರೆ ನಿಮ್ ಮೋದಿ ಗೇ ಕಾಲ್ ಮಾಡಿ ಹೇಳ್ರಿ ಸ್ವಲ್ಪ

19/09/2023

ಗೌರಿ ಹಬ್ಬಕ್ಕೆ ಮಗಳು ಅಳಿಯ ಬರುತ್ತಾರೆಂಬ ಸಂಭ್ರಮದಲ್ಲೇ, ಇರುವ ಪುಟ್ಟ ಮನೆಯನ್ನೇ ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಅಮ್ಮ. ಮುಂಚೆಯೇ ಬೇಸಾಯ ಸರಿಯಾಗಿ ಲಾಭ ಕೊಡದ, ಮನೆಯಲ್ಲಿ ದುಡ್ಡಿಲ್ಲದ ಪರಿಸ್ಥಿತಿ. ಆದರೂ ಮಗಳು ಬಂದಾಗ ಕಡೆಯಲ್ಲಿ ಗಡಿಬಿಡಿಯಾಗಬಾರದು ಅಂತ ಅವರಿಗೆ ಊಟ ತಿಂಡಿಗೆ ಏನೇನು ಸಾಮಾನು ಬೇಕು ಅಂತ ಮುಂಚೆಯೇ ಯೋಚಿಸಿ ಶೆಟ್ಟರಂಗಡಿಯಲ್ಲಿ ಸಾಲ ಹೇಳಿ ದಿನಸಿ ತರುವ ಅಪ್ಪ. ಮನೆಯವರಿಗೆಲ್ಲ ಮಗಳು ಅಳಿಯ ಬರುವ ಸಂಭ್ರಮ. ಬಸ್ಸಿನಿಂದ ಇಳಿದು ಬರುವವರಿಗಾಗಿ ಸಮಯ ನೋಡಿಕೊಂಡು ಬಸ್ ನಿಲ್ದಾಣದಲ್ಲೇ ಕಾಯುವ ಅಪ್ಪ. ಬಸ್ಸಿನಿಂದ ನಗುನಗುತ್ತ ಇಳಿಯುವ ಮಗಳನ್ನು ಸಂತೋಷದಿಂದ ಬರಮಾಡಿಕೊಳ್ಳುವ ಅಪ್ಪನ ಕಣ್ಣಲ್ಲಿ ಆನಂದಭಾಷ್ಪ. ಅಳಿಯನ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳುತ್ತಲೇ ಮೊಮ್ಮಗನನ್ನೆತ್ತಿ ಹೆಗಲ ಮೇಲೆ ಕುಳ್ಳರಿಸಿಕೊಂಡು ಮನೆಯತ್ತ ದಾಪುಗಾಲು ಹಾಕುವ ಅಪ್ಪ. ಎಲ್ಲರನ್ನು ತಲೆಬಾಗಿಲಿನಿಂದಲೇ ಎದುರು ನೋಡುತ್ತ ಅವರು ಕಂಡೊಡನೆ ಖುಶಿಯಿಂದ ಬರಮಾಡಿಕೊಂಡು ಕಾಲಿಗೆ ನೀರು ಕೊಡುವ ಅಮ್ಮ. ಅದೆಷ್ಟೋ ದಿನಗಳಾದ ಮೇಲೂ ತನಗೆ ಅನ್ನ ಹಾಕುತ್ತಿದ್ದವಳನ್ನು ನೆನೆಸಿಕೊಂಡು ಬಾಲ ಅಳ್ಳಾಡಿಸುತ್ತ ಅವಳ ಕಾಲ ನೆಕ್ಕುವ ಮುದ್ದಿನ ನಾಯಿಮರಿ ರಾಜ. ಮಿಯಾಂವ್ ಅಂತ ಒಳಗಿಂದಲೇ ಕಣ್ಣುಮಿಟುಕಿಸುವ ಬೆಕ್ಕಿನಮರಿ. ಸದ್ದು ಕೇಳಿದೊಡನೆ ಅಲ್ಲಿ ಒಟ್ಟುಸೇರಿ ಸುಖದುಃಖ ಹಂಚಿಕೊಳ್ಳುವ ನೆರೆಹೊರೆಯವರು. ನಗುನಗುತ್ತಲೇ ಎಲ್ಲರನ್ನು ಮಾತನಾಡಿಸುತ್ತ ತಂದ ಹಣ್ಣು ಸಿಹಿಗಳ ಎಲ್ಲರಿಗೂ ಹಂಚುವ ಆ ಸಂತಸದ ಕ್ಷಣಗಳು. ಹೆಚ್ಚೂ ಆಗದಂತೆ ಕಡಿಮೆಯೂ ಆಗದಂತೆ ಗೌರವದಿಂದ ಅಳಿಯನ ಮಾತನಾಡಿಸುವ ಅಪ್ಪ ಅಮ್ಮ. ಅವರಿಗೆ ಬೇಸರವಾಗದಂತೆ ಚುಟುಕಾಗಿ ಉತ್ತರಿಸುವ ಅಳಿಯ. ಅಡುಗೆ ಮನೆಯಿಂದ ಬರುವ ಪಾಯಸದ ಘಮ, ಬಾಳೆಯೆಲೆ ಕೊಯ್ದು ತರಲು ಹಿತ್ತಲಿಗೆ ಕುಡುಗೋಲು ಹಿಡಿದು ಓಡುವ ಅಪ್ಪ. ಒಟ್ಟಿಗೆ ಕೂತು ಮಾತನಾಡುತ್ತ ಸವಿಯುವ ಭೋಜನ. ನಂತರದ ಎಲೆ ಅಡಿಕೆ ಜಗಿಯುತ್ತ ಮಾತುಕತೆ. ವಿಚಾರಗಳು ಒಂದಾ, ಎರಡಾ? ದೂರದ ನಗರದ ಟ್ರಾಫಿಕ್ಕು, ಬೆಲೆ ಏರಿಕೆ, ಸರಕಾರ, ಹಗರಣಗಳು, ಹಳ್ಳಿ, ಬಾರದ ಮಳೆ, ಹೆಚ್ಚಾದ ಕೀಟಗಳು, ಮಕಾಡೆ ಮಲಗಿದ ಬೆಳೆ, ಕಾಟ ಕೊಡುವ ಮುಳ್ಳುಹಂದಿ, ಪಕ್ಕದ ಕಾಡಿನಲ್ಲಿ ಊರಿನವನನ್ನು ಹಿಡಿದು ಹಾಕಿದ ಕಿರುಬ, ಕರು ಹಾಕಿದ ಎಮ್ಮೆ, ಬತ್ತಿ ಹೋದ ಕೆರೆ, ಒಣಗಿದ ಹುಲ್ಲು, ಊರಿನೊಳಕ್ಕೇ ಬಂದ ಆನೆಗಳ ಹಿಂಡು..........ಅದೆಷ್ಟು ವಿಚಾರ. ಅಳಿಯನೊಡನೆ ಮಾವ ಮಾತಿಗಿಳಿದಿದ್ದರೆ, ಅಡುಗೆ ಮನೆಯೊಳಗೆ ಅವ್ವನ ಸೆರಗು ಹಿಡಿದು ಅವಳಿಗೆ ಮಾತ್ರ ಕೇಳಿಸುವ ದನಿಯಲ್ಲಿ ಅದೇನೇನೋ ಪಿಸುಗುಟ್ಟುವ ಮಗಳು. ಮಧ್ಯೆ ಮಧ್ಯೆ ಸಮಯಕ್ಕೆ ಸರಿಯಾಗಿ ಕಾಫಿ, ಚಹಾ....

ಅವರು ಬಂದು ಇದ್ದ ಎರಡು ದಿನ ಕೇವಲ ಎರಡು ನಿಮಿಷದಂತೆಯೇ ಕಳೆದುಹೋದ ಭಾವ. ಹಬ್ಬ ಮುಗಿಸಿ ಹೊರಟ ಮಗಳು ಅಳಿಯನನ್ನು ಇನ್ನೊಂದೆರಡು ದಿನ ಇದ್ದು ಹೋಗುವಂತೆ ಒತ್ತಾಯಿಸುವ ಅಪ್ಪ. ಆದರೂ ಹೊರಡಲೇಬೇಕೆಂಬ ಹಠ ಹಿಡಿದವರ ಒತ್ತಾಯಕ್ಕೆ ಮಣಿದು ಮಗಳಿಗೆ ಅರಿಶಿನ ಕುಂಕುಮ ಕೊಡಲು ಅವ್ವ ತಯಾರು. *ಯಾರಿಗೂ ಗೊತ್ತಾಗದಂತೆ ಪಕ್ಕದ ಮನೆಯ ಹಿರಿಯರ ಬಳಿ ಓಡಿ ಸಾಲ ಮಾಡಿ ಸಾವಿರ ರೂಪಾಯಿಯ ನೋಟನ್ನು ಮಡಚಿ ತಂದು ಹೆಂಡತಿಯ ಕೈಗಿಡುವ ಅಪ್ಪ*... ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತಲೇ ಚಾಪೆ ಮೇಲೆ ಕುಳಿತ ಮಗಳ ಮಡಿಲಿಗೆ ಅಕ್ಕಿ ಹಾಕುತ್ತ ಅರಿಶಿನ ಕುಂಕುಮ ಕೊಟ್ಟು, ಸಾವಿರ ರೂಪಾಯಿಯ ನೋಟನ್ನು ಕೈಗಿಡುತ್ತಾಳೆ ಅವ್ವ. "ಹೇ, ಇದ್ಯಾಕವ್ವ. ಬ್ಯಾಡ ಮಡಿಕ್ಕೋ" ಅಂತ ಗದ್ಗದಿತಳಾಗಿ ಹೇಳುವ ಮಗಳಿಗೆ "ಅಯ್ಯೋ, ಮಡಿಕವ್ವ. ಕಡೇ ಘಳಿಗೇಲಿ ನಿಂಗೆ ಒಂದು ಸೀರೆ ತಕಂಡು ಬರಕ್ಕಾಗನಿಲ್ಲ, ಸಿಬ್ಬರಿ ಬ್ಯಾಡ ನನ್ನವ್ವ, ಒಂದು ಸೀರೇನೋ, ನಿಮ್ ಮನೆಯವುರ್ಗೆ ಒಂದು ಪಂಚೆನೋ, ಮಗೀಗೆ ಒಂದ್ ಬಟ್ಟೆನೋ ತಕ್ಕೋ. ಬ್ಯಾಡ ಅನ್ಬೇಡ ಕಣ್ ನನ್ ತಾಯಿ" ಅಂತ ಗೋಗರೆಯುವ ಅವ್ವ.... ಅವರ ಒತ್ತಾಯಕ್ಕೆ ಮಣಿದು ಕಣ್ಣಂಚಿನಲ್ಲಿ ತೊಟ್ಟಿಕ್ಕಿದ ನೀರನ್ನು ಒರೆಸಿಕೊಳ್ಳುತ್ತಲೇ ಆ ನೋಟನ್ನು ಮಡಚಿ ಕೈನಲ್ಲಿಟ್ಟುಕೊಳ್ಳುತ್ತಾಳೆ. ಬೀದಿಯಲ್ಲಿ ಸದ್ದಾಗುವ ಬಸ್ಸಿನ ಹಾರ್ನ್ ಕೇಳಿದೊಡನೇ ಕೂಗು ಹಾಕುವ ಪಕ್ಕದ ಮನೆಯವರು. "ಉದಯರಂಗಾ ಬಂತು ಕಣವ್ವೋ, ಬಸ್ ಸ್ಟ್ಯಾಂಡ್ ತಮಕೆ ಓಡಿ. ಇಲ್ದಿದ್ರೆ ಮುಂದಿನ ಬಸ್ಸಿನಾಗೆ ಸೀಟ್ ಸಿಕ್ಕದಿಲ್ಲ" ಅನ್ನುವ ಸದ್ದು ಕೇಳಿದೊಡನೆ. ಮೊಮ್ಮಗನ ಕೆನ್ನೆಗೆ ಮುತ್ತಿಕ್ಕುತ್ತ ಅವನನ್ನು ಸೊಂಟದ ಮೇಲೆ ಹೊತ್ತು ತರುವ ಅಮ್ಮ. "ಕೊಡೀ ಮಾವ, ನಾನು ಹಿಡ್ಕೋತೀನಿ" ಅನ್ನುವ ಅಳಿಯನ ಮಾತನ್ನು ಕೇಳಿಸಿಕೊಳ್ಳದೆ ಅವರ ಲಗ್ಗೇಜುಗಳಲ್ಲಿ ಭಾರವಾದದ್ದೊಂದನ್ನು ಹಿಡಿದು ಬಸ್ ಸ್ಟ್ಯಾಂಡಿನತ್ತ ಓಡುವ ಅಪ್ಪ..... ಬೀದಿಗಳಲ್ಲಿ ಎಲ್ಲರೂ ಕೈಬೀಸುತ್ತ ಬೀಳ್ಕೊಡುತ್ತಿದ್ದರೆ ಎಲ್ಲರಿಗೂ ನಗುನಗುತ್ತಲೇ ಕೈಬೀಸುತ್ತ ಲಗುಬಗೆಯಲ್ಲಿ ಬಸ್ಸಿನತ್ತ ಓಡುವ ಮಗಳು. ಟಾರು ಹಾಕದ ಮಣ್ಣು ರಸ್ತೆಯ ಮೇಲೆ ಬುಗ್ಗನೆ ಧೂಳೆಬ್ಬಿಸಿಕೊಂಡು ಬಂದು ನಿಲ್ಲುವ ಉದಯರಂಗ ಬಸ್ಸು. ತುಂಬಿದ್ದ ಬಸ್ಸಿಗೆ ಹತ್ತುವಾಗಲೂ "ಅಪ್ಪಂಗೆ ಬೇಜಾರ್ ಮಾಡ್ಬೇಡ ಕಣವ್ವೋ, ಉಸಾರು. ಎಲ್ಲರ್ನೂ ಚೆಂದಗೆ ನೋಡ್ಕೋ" ಅನ್ನುತ್ತ *ಕಣ್ತುಂಬಿಕೊಳ್ಳುತ್ತ, ಕೈಲಿ ಮಡಚಿಟ್ಟಿದ್ದ ಅದೇ ಸಾವಿರ ರೂಪಾಯಿಯ ನೋಟನ್ನು ಯಾರಿಗೂ ಗೊತ್ತಾಗದಂತೆ ಮತ್ತೆ ಅಪ್ಪನ ಅಂಗಿಯ ಜೇಬಿಗೆ ತುರುಕಿ ಕೈಬೀಸುವ ಮಗಳು'..... 'ರೈ....ರೈಟ್" ಅನ್ನುತ್ತ ಶಿಳ್ಳೆ ಹಾಕಿದೊಡನೆ ತುಂಬುಬಸುರಿಯಂತೆ ನಿಧಾನವಾಗಿ ಮುನ್ನುಗ್ಗುವ ಕಿಕ್ಕಿರಿದು ತುಂಬಿದ ಉದಯರಂಗ ಬಸ್ಸು. ಬೀದಿಯ ತಿರುವು ಕಾಣುವವರೆಗೂ ಹೋಗುವ ಬಸ್ಸನ್ನೇ ನೋಡುತ್ತ ಕಣ್ಣೊರೆಸಿಕೊಳ್ಳುತ್ತ ಕೈಬೀಸುವ ಅಪ್ಪ ಅಮ್ಮ. ದು:ಖ ಹೇಳಿಕೊಳ್ಳಲಾಗದೇ ಸುಮ್ಮನೆ ಅದೇ ದಿಕ್ಕಿನತ್ತ ಮೂಕವಾಗಿ ನೋಡುವ ನಾಯಿಮರಿ ರಾಜ.
'ಎಲ್ಲವನ್ನೂ ಕೇವಲ ಹಣದಲ್ಲೇ ಅಳೆಯಲಾಗುವುದಿಲ್ಲ. ಪ್ರೀತಿಯನ್ನೇ ಉಸಿರಾಗಿಸಿಕೊಂಡ ಭಾವುಕರಿಗೆ ಹಣದ ಹಂಗಿರುವುದಿಲ್ಲ'..ಅಲ್ಲಿ ಕೇವಲ ಭಾವನೆಗಳಿಗೆ ಬೆಲೆಯಿರುತ್ತದೆ ಅಷ್ಟೇ.
ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯಗಳು.
"ನಮ್ಮ ಭಾರತದ ಬೆಲೆ ಕಟ್ಟಲಾಗದ ಭಾವನಾತ್ಮಕ ಗ್ರಾಮೀಣ ಜಗತ್ತು - ಅದೆಷ್ಟು ಸರಳ, ಸುಂದರ, ಅರ್ಥಪೂರ್ಣ".....☺
ಶುಭರಾತ್ರಿ...☺️🙏

ಜಿ20 ಸಮಾವೇಶಕ್ಕೆ ಬರುತ್ತಿರುವ ವಿದೇಶಿ ಗಣ್ಯರಿಗೆ ಮೋದಿ‘ಜಿ’ ಅವರ ಅಭಿವೃದ್ಧಿಯ ಅಚ್ಚೆ ದಿನಗಳನ್ನು ಮುಚ್ಚಿಡಲು ಪರದೆ ಹಾಕಲಾಗಿದೆ!ಬಡವರನ್ನು, ಬಡ...
10/09/2023

ಜಿ20 ಸಮಾವೇಶಕ್ಕೆ ಬರುತ್ತಿರುವ ವಿದೇಶಿ ಗಣ್ಯರಿಗೆ ಮೋದಿ‘ಜಿ’ ಅವರ ಅಭಿವೃದ್ಧಿಯ ಅಚ್ಚೆ ದಿನಗಳನ್ನು ಮುಚ್ಚಿಡಲು ಪರದೆ ಹಾಕಲಾಗಿದೆ!

ಬಡವರನ್ನು, ಬಡತನವನ್ನು ನೋಡದಿದ್ದರೆ ಆಯ್ತು ಬಡತನ ನಿರ್ಮೂಲನೆ ಮಾಡಿದಂತಾಗುತ್ತದೆ ಎಂಬುದು ‘ಬಡ ತಾಯಿಯ ಮಗನ’ ನಂಬಿಕೆಯಾಗಿದೆ!

ದೆಹಲಿಯ ಸ್ಲಮ್ ಗಳಿಗೆ ಪರದೆ ಹಾಕಿರುವ ಕೇಂದ್ರ ಸರ್ಕಾರ ಜಿ20 ಸಮಾವೇಶಕ್ಕಾಗಿ ದೆಹಲಿಯ ಸುಂದರೀಕರಣಕ್ಕೆ ಮಾಡಿದ ಖರ್ಚು ಬರೋಬ್ಬರಿ ₹4,200 ಕೋಟಿ.

👉 ಜಿ20 ಸಮಾವೇಶಕ್ಕಾಗಿ ಬಜೆಟ್ಟಿನಲ್ಲಿ ಮೀಸಲಿಟ್ಟ ಮೊತ್ತ ₹990 ಕೋಟಿ.

👉 ಅತಿಥಿ ಸತ್ಕಾರಕ್ಕಾಗಿ ಮಾಡಿದ ಖರ್ಚು ₹2,700 ಕೋಟಿ

ದೆಹಲಿಯ ಸುಂದರೀಕರಣಕ್ಕೆ ₹4,200 ಕೋಟಿ..

ಈ ಎಲ್ಲಾ ಖರ್ಚಿನಲ್ಲಿ ಬಡವರನ್ನು ಮುಚ್ಚಿಡುವ ಬದಲು ಬಡತನವನ್ನೇ ನಿರ್ಮೂಲನೆ ಮಾಡಬಹುದಿತ್ತಲ್ಲವೇ?

ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ,ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ?ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರ...
10/09/2023

ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ,

ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ?
ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?
ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ?

ದಲಿತರ ಏಳಿಗೆಗೂ ಆಕ್ಷೇಪ,
ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಆಕ್ಷೇಪ ಮಾಡುವ ನಿಮ್ಮ ಉದ್ದೇಶವಾದರೂ ಏನು?

ದೇವಾಲಯಗಳ ಅರ್ಚಕರ ತಸ್ತಿಕ್ ಹಣವನ್ನೂ ಏರಿಸಿದೆ ನಮ್ಮ ಸರ್ಕಾರ, ಇದಕ್ಕೂ ನಿಮ್ಮ ಆಕ್ಷೇಪ ಇದೆಯೇ?

ಹಾಲಿನ ದರ ಏರಿಕೆಯ ಲಾಭ ರೈತರ ಕೈ ಸೇರುವುದು ಇಷ್ಟವಿಲ್ಲವೇ?

ವಿದ್ಯುತ್ ದರ ಏರಿಸಿದ್ದು ಹಿಂದಿನ ಬಿಜೆಪಿ ಸರ್ಕಾರ ಎನ್ನುವುದು ತಿಳಿದಿಲ್ಲವೇ?

Tejasvi Surya ಅವರೇ,
ಗ್ಯಾಸ್ ಬೆಲೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತಾಡುವುದಿಲ್ಲವೇಕೆ? ದುಬಾರಿ GST ಬಗ್ಗೆ ತುಟಿ ಬಿಚ್ಚುವುದಿಲ್ಲವೇಕೆ?

ಜನರ ಹಣವನ್ನು ಜನರಿಗೇ ಕೊಡುವ ಬಗ್ಗೆ ಇಷ್ಟೊಂದು ಅಸಹನೆ ತೋರುವ ಬಿಜೆಪಿಗರ ಪ್ರಕಾರ ಜನರ ಹಣವನ್ನು ಉದ್ಯಮಿಗಳ ಸಾಲ ಮನ್ನಾ ಮಾಡಲು ಬಳಸುವುದು ಅಭಿವೃದ್ಧಿಯೇ?ರೈತರ ಸಾಲ ಮನ್ನಾ ಮಾಡುವದು ಆರ್ಥಿಕ ಹೊರೆ ಅಲ್ಲವೇ ನಿಮಗೆ?

ಇದು ರಾಜಕೀಯ ಗಿಮಿಕ್ ಅನ್ನದೆ ಇನ್ನೇನು ಅನ್ನಬೇಕು
10/09/2023

ಇದು ರಾಜಕೀಯ ಗಿಮಿಕ್ ಅನ್ನದೆ ಇನ್ನೇನು ಅನ್ನಬೇಕು

12/06/2023

Address

L̤a̤k̤k̤a̤l̤a̤k̤a̤t̤t̤i̤ T̤q̤-̤r̤o̤n̤ D̤i̤s̤-̤g̤a̤d̤a̤g̤
Gadag
582211

Telephone

+918497898953

Website

Alerts

Be the first to know and let us send you an email when Santu benahal posts news and promotions. Your email address will not be used for any other purpose, and you can unsubscribe at any time.

Videos

Share

Category


Other TV Channels in Gadag

Show All