
01/08/2024
ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ವರ್ಷಾಚರಣೆ ನಿಮಿತ್ಯ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರ್ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕು ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಚನ್ನಮ್ಮನ ಪ್ರತಿಮೆ ಸ್ಥಾಪನೆಗೆ ಮನವಿ ನೀಡಿ ಸಂಸದ ಈರಣ್ಣಾ ಕಡಾಡಿ ಅವರು ಒತ್ತಾಯಿಸಿದರು.