24/02/2022
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಚಾಲನೆ*
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 62ನೇ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ್ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕ ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಸುಧಾಕರ ಎ., ಗುರುರಾಜ್ ಪೂಜಾರಿ, ಸತೀಶ್ ಪೂಜಾರಿ, ಭಾಸ್ಕರ ಕೋಟ್ಯಾನ್, ಶಿವಾಜಿ ಸನಿಲ್, ವಿನಯ್ ಕುಮಾರ್, ನಿತಿನ್ ಕುಮಾರ್, ವಿನೋದ್ ಪೂಜಾರಿ, ಶಶಿಕಾಂತ್, ಪ್ರಮುಖರಾದ ರುಕ್ಮಯ್ಯ ಪೂಜಾರಿ, ಸುರೇಶ್ ಎ., ಕುಶಲ್ ಕುಮಾರ್ ಎ., ಸುಧಾಕರ ಪೂಜಾರಿ, ರವಿ ಪಾಲನ್, ಸತೀಶ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ಮಹಿಳಾ ಘಟಕದ ಸಮಿತಿ ಸದಸ್ಯರು, ಸಂಘದ ಸದಸ್ಯರು ಮತ್ತು ಭಕ್ತಾಬಿಮಾನಿಗಳು ಉಪಸ್ಥಿತರಿದ್ದರು.
ಉಡುಪಿ ತಾಲೂಕು ವ್ಯಾಪ್ತಿಯ ಶ್ರೀ ಬಾಲ ಮಾರುತಿ ಭಜನಾ ಮಂಡಳಿ ಕಿದಿಯೂರು- ಪಡುಕರೆ, ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಮಣಿಪಾಲ, ಶ್ರೀ ವೀರ ಮಾರುತಿ ಭಜನಾ ಮಂಡಳಿ ಗರಡಿಮಜಲು, ಶ್ರೀ ನಾಗಬನ ಮಹಿಳಾ ಭಜನಾ ಮಂಡಳಿ ಸಂತೆಕಟ್ಟೆ, ಶ್ರೀ ವಿಠೋಬ ಭಜನಾ ಮಂಡಳಿ ಸಂಕೇಶ ಕಿದಿಯೂರು, ಶ್ರೀ ಪ್ರಸನ್ನ ಗಣಪತಿ ಭಜನಾ ಮಂಡಳಿ ಕಿದಿಯೂರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಯಾಣಪುರ, ಶ್ರೀ ದುರ್ಗಾ ಭಜನಾ ಮಂಡಳಿ ಗುಂಡಿಬೈಲು, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಪ್ಪೂರು ತಂಡಗಳಿಂದ ಭಜನಾ ಸೇವೆ ನಡೆಯಿತು.
ನಗರ ಭಜನೆ, ಕುಣಿತ ಭಜನೆಯ ಬಳಿಕ ಭಜನಾ ಮಂಗಲ, ಮಹಾ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.
ಪ್ರತಿಷ್ಠಾ ವರ್ಧಂತ್ಯುತ್ಸವವು ದಯಾಕರ ಶಾಂತಿ ಮತ್ತು ಬಳಗದ ಪೌರೋಹಿತ್ಯದಲ್ಲಿ ಜರಗಿತು. ಈ ಸಂದರ್ಭದಲ್ಲಿ ನಡೆದ ಅನ್ನ ಸಂತರ್ಪಣೆಯಲ್ಲಿ ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು.
ಭಜನಾ ಮಂಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹದ ಅಂಗವಾಗಿ ನಡೆದ ಭಜನಾ ಸೇವೆಯಲ್ಲಿ ಶ್ರೀ ವಿಠೋಬ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿ ಅಂಬಲಪಾಡಿ, ಶ್ರೀ ನಾಗರಾಜ ಮಹಿಳಾ ಭಜನಾ ಮಂಡಳಿ ಅಂಬಲಪಾಡಿ, ಮಾತೃ ಮಂಡಳಿ ಕಡಿಯಾಳಿ, ಶ್ರೀ ಮೂಕಾಂಬಿಕಾ ಭಜನಾ ಮಂಡಳಿ ಪೊಲೀಸ್ ಲೈನ್ ಉಡುಪಿ, ಶ್ರೀ ಕೃಷ್ಣ ಮುಖ್ಯಪ್ರಾಣ ಭಜನಾ ಮಂಡಳಿ ಉಡುಪಿ ತಂಡಗಳಿಂದ ಭಜನಾ ಸೇವೆ ನಡೆಯಿತು.