Inchara TV LIVE

  • Home
  • Inchara TV LIVE

Inchara TV LIVE The views expressed in the comment section are of Commenters
and do not represent the views of CHANNNAMMA TV LIVE News. Use this space
for healthy Dis

Refrain from posting obscene, defamatory or inflammatory
remarks against person, group or community.

08/03/2024

LIVE

05/09/2023
On the lap of Maa Ganga,Rishikesh.ಮಾ ಗಂಗೆಯ ಮಡಲಿನಲ್ಲಿ ಧ್ಯಾನ.
06/08/2023

On the lap of Maa Ganga,Rishikesh.
ಮಾ ಗಂಗೆಯ ಮಡಲಿನಲ್ಲಿ ಧ್ಯಾನ.

26/06/2023

Murugesh Nirani: ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ್​ಗೆ ಖಡಕ್ ಟಾಂಗ್ ಕೊಟ್ಟ ಮಾಜಿ ಸಚಿವ ನಿರಾಣಿ|

21/05/2023

ಮೊದಲೆಲ್ಲ ಮೇಲ್ಕಾಲುವೆ ನೋಡಲು ನಾವೆಲ್ಲಾ ಮೈಸೂರಿಗೆ ಹೋಗಬೇಕಾಗಿತ್ತು.ಈಗ ಇನ್ನೊಂದು ಮೇಲ್ಕಾಲುವೆ ನೋಡಬೇಕಾದರೆ ವಿಜಯಪುರಕ್ಕೆ ಹೋಗಬೇಕು.ಅದನ್ನು ನಿರ್ಮಿಸಿದವರು ನಮ್ಮ ಎಂ ಬಿ ಪಾಟೀಲರು.

*ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ
ಪಂಚಮಸಾಲಿ ಜಗದ್ಗುರು ಪೀಠ,ಹರಿಹರ.
(ಹರಜಾತ್ರೆ-2021 ಜನವರಿ 15ರಂದು ಹೇಳಿದ್ದು)

19/05/2023

ಶ್ರೀ ಸಿದ್ಧರಾಮಯ್ಯನವರೇ,ನೀವು ಯೋಗರಾಮಯ್ಯನವರು,ನಿಮಗೆ ಮತ್ತೇ ಯೋಗ ಬರುತ್ತದೆ.ಆ ಯೋಗ ಬಹುಬೇಗ ಬರಲೆಂದು ಹಾರೈಸುತ್ತೇವೆ.

*ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ
ಪಂಚಮಸಾಲಿ ಜಗದ್ಗುರು ಪೀಠ,ಹರಿಹರ.
(ಹರಜಾತ್ರೆ-2021 ಜನವರಿ 15ರಂದು ಹೇಳಿದ್ದು)

ಪಂಚಮಸಾಲಿ ಪೀಠಕ್ಕೆ ಪಂಚ ವರ್ಷದ ಹರ್ಷನಾವು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರಕ್ಕೆ ಜಗದ್ಗುರುಗಳಾಗಿ ಪೀಠಾರೋಹಣವಾಗಿ ಇಂದಿಗೆ ಐದು...
20/04/2023

ಪಂಚಮಸಾಲಿ ಪೀಠಕ್ಕೆ ಪಂಚ ವರ್ಷದ ಹರ್ಷ
ನಾವು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರಕ್ಕೆ ಜಗದ್ಗುರುಗಳಾಗಿ ಪೀಠಾರೋಹಣವಾಗಿ ಇಂದಿಗೆ ಐದು ವರ್ಷಗಳು ಪೂರೈಸಿವೆ. ಈ ಕಾಲಘಟ್ಟದಲ್ಲಿ ನಮಗೆ ಸಕಲ ರೀತಿಯಿಂದಲೂ ಸಹಕಾರ ಬೆಂಬಲ ನೀಡಿದ ಸಮುದಾಯದ ಸಕಲ ಬಾಂಧವರಿಗೆ ಅಭಿನಂದನೆಗಳನ್ನೂ ಧನ್ಯವಾದಗಳನ್ನೂ ತಿಳಿಸಲು ಇಚ್ಚಿಸುತ್ತೇವೆ. ಈ ಐದು ವರ್ಷಗಳಲ್ಲಿ ಪಂಚಮಸಾಲಿ ಸಮುದಾಯ ದಿನೇದಿನೇ ಅಭಿವೃದ್ಧಿ ಹೊಂದಿದ್ದು ಎಲ್ಲರಿಗೂ ತಿಳಿದ ವಿಷಯ. ನಮ್ಮ ಸಮುದಾಯ ಹೀಗೆಯೇ ಸಮಾಜದ ಮುಂಚೂಣಿಯಲ್ಲಿ ಅದ್ಭುತ ಸಾಧನೆಗಳನ್ನು ಮಾಡುವಲ್ಲಿ ಯಶಸ್ವಿಯಾಗುವುದರಲ್ಲಿ ಸಂದೇಹವಿಲ್ಲ. ಮಹಾಯೋಗಿನಿ ಅಕ್ಕಮಹಾದೇವಿ ಹೇಳಿದಂತೆ "ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ
ಬೆಳೆದೆನು ಅಸಂಖ್ಯಾತರ ಕರುಣದೊಳಗೆ
ಭಾವವೆಂಬ ಹಾಲು ಸುಜ್ಞಾನವೆಂಬ ತುಪ್ಪ
ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ
ಇಂತಪ್ಪ ತ್ರಿವಿಧಾಮ್ರತವನು ದಣಿಯಲೆರೆದು ಸಲಹಿದಿರೆನ್ನ
ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ
ಬಸವಣ್ಣ ಮೆಚ್ಚಲು ಒಗತನವ ಮಾಡುವೆ
ಚೆನ್ನಮಲ್ಲಿಕಾರ್ಜುನನ ಕೈವಿಡಿದು
ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಹೆನು
ಅವಧರಿಸಿ ನಿಮ್ಮಡಿ ಶರಣಾರ್ಥಿ

ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು
ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ,ಹರಕ್ಷೇತ್ರ ಹರಿಹರ.

  ಇಂದು ಬೀಳಗಿ ತಹಶೀಲ್ದಾರ ಕಚೇರಿಗೆ ಅಪಾರ ಮುಖಂಡರೊಂದಿಗೆ ತೇರಳಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರ...
13/04/2023


ಇಂದು ಬೀಳಗಿ ತಹಶೀಲ್ದಾರ ಕಚೇರಿಗೆ ಅಪಾರ ಮುಖಂಡರೊಂದಿಗೆ ತೇರಳಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಸನ್ಮಾನ್ಯ ಶ್ರೀ ಮುರುಗೇಶ್ ಆರ್ ನಿರಾಣಿ ಅವರು ನಾಮಪತ್ರ ಸಲ್ಲಿಸಿದರು.

ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ...ಧನ್ಯವಾದ ಸಲ್ಲಿಸಿದ ಕೆಯುಡಬ್ಲ್ಯೂಜೆಬೆಂಗಳೂರು:ವಿಧಾನಸಭೆ ಚುನಾವ...
29/03/2023

ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ
ಮಾಡಲು ಅವಕಾಶ ನೀಡಿದ ಚುನಾವಣಾ ಆಯೋಗ...
ಧನ್ಯವಾದ ಸಲ್ಲಿಸಿದ ಕೆಯುಡಬ್ಲ್ಯೂಜೆ

ಬೆಂಗಳೂರು:
ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ.
ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)
ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಆನ್ ಲೈನ್ ವೋಟಿಂಗ್ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು.
ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು.
ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿಕೊಂಡಿತ್ತು.

ಧನ್ಯವಾದ:
ಪತ್ರಕರ್ತರ ಬೇಡಿಕೆ ಪರಿಗಣಿಸಿ ಪೋಸ್ಟಲ್ ವೋಟಿಂಗ್ ಅವಕಾಶ ಮಾಡಿಕೊಟ್ಟಿರುವ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.

ಶನಿವಾರ  ಈ ಹುಡುಗಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಆ ಹುಡುಗಿಯನ್ನು ಬಲಂತವಾಗಿ ಸಾಯಿಸಿದ್ದಾರೆ ಆಮೇಲೆ ಕನಕಪುರ ರೋಡ್ ತಾತಗುಣಿ  ಕಾಡಿನ...
29/03/2023

ಶನಿವಾರ ಈ ಹುಡುಗಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಆ ಹುಡುಗಿಯನ್ನು ಬಲಂತವಾಗಿ ಸಾಯಿಸಿದ್ದಾರೆ ಆಮೇಲೆ ಕನಕಪುರ ರೋಡ್ ತಾತಗುಣಿ ಕಾಡಿನಲ್ಲಿ ಎಸೆದು ಹೋಗಿದ್ದಾರೆ ಮೇಲೆ ಹುಡುಗಿಯ ತಂದೆಗೆ ಕಾಲ್ ಮಾಡಿ ನಿಮ್ಮ ಮಗಳು ಇಲ್ಲಿ ಬಿದ್ದಿದ್ದಾಳೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ ಅಲ್ಲಿ ಹೋಗಿ ನೋಡಿದರೆ ಹುಡುಗಿಗೆ ಪ್ರಾಣನೇ ಇರಲಿಲ್ಲ ಇವರು ಎಷ್ಟು ಜನಕ್ಕೂ ಶಿಕ್ಷೆ ಆಗಲೇಬೇಕು ನಾಚಿಕೆ ಆಗಬೇಕು ಅಂತ ನನ್ನ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಬೆಲೆನೇ ಇಲ್ಲ ಜೀವನ ಹಾಳ್ ಮಾಡ್ತಾರೆ 😡😡😡😡 ನಮ್ಮ ದೇಶದಲ್ಲಿ ರಾಜ್ಯದಲ್ಲಿ ಹೆಣ್ಣು ಮಕ್ಕಳ ಅತ್ಯಾಚಾರ ಯಾವಾಗ ನಿಲ್ಲುತ್ತದೆ ಇಂತಹ ಕಾಮುಕ ವ್ಯಾಘ್ರಗಳಿಗೆ ತಕ್ಷಣ ಗಲ್ಲು ಶಿಕ್ಷೆ ಯಾವಾಗ ಇನ್ನು ಎಷ್ಟು ಬಲಿಯಾಗಬೇಕು. ಕಾಮುಕ ವ್ಯಾಘ್ರಗಳಿಗೆ 😡😡😡😡 ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ 😭😭😭😭

#ಕರ್ನಾಟಕ_ಸರ್ಕಾರ
#ಬಸವರಾಜ_ಬೊಮ್ಮಾಯಿ

ಮುರುಗೇಶ ನಿರಾಣಿ ಎಂಬ ಜಲ ಸಮೃದ್ದಿಯ ಮಹಾಮಾಂತ್ರಿಕ!ನಮ್ಮ ದೊರೆ 2023ರಲ್ಲಿ ಮತ್ತೊಮ್ಮೆ ವಿಧಾನಸೌಧಕ್ಕೆಮುರುಗೇಶ ನಿರಾಣಿ ಎಂದರೆ ಜಲಕ್ರಾಂತಿಯ ಹರಿ...
28/03/2023

ಮುರುಗೇಶ ನಿರಾಣಿ ಎಂಬ ಜಲ ಸಮೃದ್ದಿಯ ಮಹಾಮಾಂತ್ರಿಕ!

ನಮ್ಮ ದೊರೆ 2023ರಲ್ಲಿ ಮತ್ತೊಮ್ಮೆ ವಿಧಾನಸೌಧಕ್ಕೆ

ಮುರುಗೇಶ ನಿರಾಣಿ ಎಂದರೆ ಜಲಕ್ರಾಂತಿಯ ಹರಿಕಾರ ಎಂಬುದನ್ನು ನಿರೂಪಿಸಿದ್ದಾರೆ. ಕೊಟ್ಟ ಮಾತು ಇಡೇರಿಸುವಲ್ಲಿ ರಾಮನಾಗಿ, ಹಿಡಿದ ಕೆಲಸ ಸಾಧಿಸುವಲ್ಲಿ ಶ್ರೀಕೃಷ್ಣನಾಗಿ, ಬೀಳಗಿ ಮತಕ್ಷೇತ್ರದ ಪಾಲಿಗೆ ಸಾಕ್ಷಾತ್ ಭಗೀರಥನಾಗಿ ಬಂದಿದ್ದಾರೆ ಎಂದರೆ ಖಂಡಿತಾ ಅತಿಶಯೋಕ್ತಿ ಆಗುವುದಿಲ್ಲ.

ಬೀಳಗಿ ಮತಕ್ಷೇತ್ರವನ್ನು ಭೌಗೋಳಕವಾಗಿ ಕಂಡಾಗ ಆಗುವ ವಿಸ್ಮಯ ಎಂದರೆ ಒಂದು ಕಡೆ ಕೃಷ್ಣೆ, ಘಟಪ್ರಭೆಯ ಸಂಗಮ, ಆಲಮಟ್ಟಿ ಹಿನ್ನೀರು ಅಪಾರ ಜಲರಾಶಿ. ಇನ್ನೊಂದು ಕಡೆ ಉರಿ ಬಿಸಿಲಿನ ಒಣಭೂಮಿ. ಈ ಒಣಭೂಮಿಗೆ ತಂಪೆರದು ಹಸಿರಾಗಿಸುವ ಜನರಿಗೆ ಕನಸು ಕಟ್ಟಿಕೊಟ್ಟಿದ್ದು ಮುರುಗೇಶ ನಿರಾಣಿ ಎಂಬ ದಿವ್ಯ ಸಾಹಸಿ!

ಹೌದು, ಮುರುಗೇಶ ನಿರಾಣಿ ಎಂಬ ಹೆಸರಲ್ಲೇ ಅದ್ಭುತ ಶಕ್ತಿಯಿದೆ. ಸಾಧಿಸುವ ಛಲವಿದೆ. ನಮ್ಮ ನಾಡಿನ ರೈತರು, ಶ್ರಮಿಕರು, ಯುವಕರಿಗೆ ಆತ್ಮಗೌರವ ತುಂಬಿದ ಸ್ವಾಭಿಮಾನದ ಬದುಕನ್ನು ಕಟ್ಟಿ ಕೊಡುವ ಭರವಸೆ ಇದೆ. ಹೀಗಾಗಿ ಕಳೆದ 20 ವರ್ಷಗಳ ಅವಧಿಯಲ್ಲಿ ಮುರುಗೇಶ ನಿರಾಣಿ ಸಾಲು ಸಾಲು ನೀರಾವರಿ ಯೋಜನೆಗಳನ್ನು ತಂದು ಬೀಳಗಿಯನ್ನು ಉದ್ಧರಿಸಿದ್ದಾರೆ. ಸೊನ್ನ, ರೊಳ್ಳಿ, ಮನ್ನಿಕೇರಿ, ಲಿಂಗಾಪೂರ, ಹೆರಕಲ್ ಯಳ್ಳಿಗುತ್ತಿ, ಹೆರಕಲ್ ಉತ್ತರ, ದಕ್ಷೀಣ, ಕೈನಕಟ್ಟಿ, ಅಗಸನಕೊಪ್ಪ, ಕೆರೂರು, ಅನವಾಲ, ಆನದಿನ್ನಿ, ಕಾಡರಕೊಪ್ಪ ಹೀಗೆ ಸಾಲು ಸಾಲು ಏತ ನೀರಾವರಿ ಯೋಜನೆಗಳು ಪೂರ್ಣಗೊಂಡಾಗ ಬೀಳಗಿಯ ಇಂಚಿಂಚು ಭೂಮಿಯೂ ಹಸಿರಿನಿಂದ ಕಂಗೊಳಿಸುತ್ತದೆ. ಹೆರಕಲ್ ಬ್ಯಾರೇಜ್, ಕಲಾದಗಿ ಬ್ಯಾರೇಜ್ ಹೀಗೆ ನೀರಿನ ಸಂಗ್ರಹಣೆ, ಸದ್ಬಳಕೆ, ನಮ್ಮ ನೀರನ್ನು ನಮ್ಮ ರೈತರಿಗೆ ಮುಟ್ಟಿಸುವ ಛಲ ಎಲ್ಲದರಲ್ಲಿಯೂ ಮುರುಗೇಶ ನಿರಾಣಿ ದಿಗ್ವಿಜಯ ಸಾಧಿಸಿದ್ದಾರೆ.

ಸ್ವತಃ ಒಬ್ಬ ಇಂಜಿನಿಯರ್ ಆಗಿ ಮುರುಗೇಶ ನಿರಾಣಿಯವರು ತಾಂತ್ರಿಕವಾಗಿ ಅಸಾಧ್ಯವಾಗಿದ್ದ ಅನವಾಲ, ಕಾಡರಕೊಪ್ಪ ಯೋಜನೆಗಳನ್ನು ಸರ್ಕಾರದ ಮುಂದೆ ಪ್ರಸ್ತುತ ಪಡಿಸಿ ಗೆದ್ದ ರೀತಿ ಬಂಗಾರದ ಮನುಷ್ಯ ಚಲನಚಿತ್ರದ ರಾಜೀವ್ ರಾಜಕುಮಾರರನ್ನು ನೆನಪಿಸುತ್ತಿದೆ.

ಅಂದು ಮೈಸೂರು ನಾಡಿಗೆ ಮಹಾರಾಜರ ರೂಪದಲ್ಲಿ ನಾಲ್ವಡಿ ಕೃಷ್ಣರಾಜ್ ಒಡೆಯರ್ ಹಾಗೂ ದಿವಾನ ಮತ್ತು ಇಂಜಿನಿಯರ್ ರೂಪದಲ್ಲಿ ವಿಶ್ವೇಶ್ವರಯ್ಯರಂತಹ ಎರಡು ರತ್ನಗಳು ದೊರಕಿದ್ದರೆ ಇಂದು ಬೀಳಗಿ ನಾಡಿಗೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಇಬ್ಬರ ಸಂಗಮ ಸ್ವರೂಪಿಯಾಗಿ ಮುರುಗೇಶ ನಿರಾಣಿ ಎಂಬ ಒಂದು ಅನರ್ಘ್ಯ ರತ್ನ ರಾರಾಜಿಸುತ್ತಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬೀಳಗಿಯ ಅನರ್ಘ್ಯ ರತ್ನವನ್ನು ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸುವುದು ನಮ್ಮ ಕರ್ತವ್ಯವಾಗಬೇಕು. ನಮ್ಮ ದೊರೆ ಕೇವಲ ಶಾಸಕ ಮಾತ್ರವಲ್ಲ ರಾಜ್ಯದ ಮುಖ್ಯಮಂತ್ರಿಯಾಗಿ ಬೀಳಗಿಯಂತೆ, ಸಂಪೂರ್ಣ ಕರ್ನಾಟಕವನ್ನು ನೀರಾವರಿಗೆ ಒಳಪಡಿಸಿ ಕರುನಾಡಿನ ರೈತರು ಹೊನ್ನು ಬೆಳೆಯುವ ಶಕ್ತಿಯನ್ನು ಜಗತ್ತಿಗೆ ತೋರಿಸುವಂತೆ ಮಾಡೋಣ....

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಶಿಗ್ಗಾವಿಯ ತಮ್ಮ ಸ್ವಂತ ಎರಡು ಎಕರೆ ಜಮೀನನ್ನು ಭೂದಾನಗೈದು ಅದೇ ಸ್ಥಳದಲ್ಲಿ ಬೃಹದಾಕಾರ...
26/03/2023

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಶಿಗ್ಗಾವಿಯ ತಮ್ಮ ಸ್ವಂತ ಎರಡು ಎಕರೆ ಜಮೀನನ್ನು ಭೂದಾನಗೈದು ಅದೇ ಸ್ಥಳದಲ್ಲಿ ಬೃಹದಾಕಾರವಾದ “ಪಂಚಮಸಾಲಿ ಸಮುದಾಯ ಭವನ”ವನ್ನು ನಿರ್ಮಿಸಿದ್ದಾರೆ. ನಾಳೆ ಭಾನುವಾರ ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ.ಜತೆ ಜತೆಗೆ “ ಹರಧ್ಯಾನ ಮಂದಿರ”ದ ಶಂಕುಸ್ಥಾಪನೆ ಸಮಾರಂಭವು ನೆರವೇರಲಿದೆ.ಆದ್ದರಿಂದ ಸಮಸ್ತ ಸದ್ಭಕ್ತರು ಆಗಮಿಸಬೇಕೆಂದು ಈ ಮೂಲಕ ಕೋರುತ್ತೇವೆ.
ಸರ್ವರಿಗೂ ಆದರದ ಸುಸ್ವಾಗತ.
Chief Minister of Karnataka Basavaraj Bommai
BJP Karnataka

ಪಂಚಮಸಾಲಿ ಇತಿಹಾಸದಲ್ಲಿ ಮೀಸಲಾತಿ ಮೈಲಿಗಲ್ಲಿಗೆ ಕಾರಣರಾದವರಿಗೆ ಅಭಿನಂದನೆ: ಶ್ರೀ ವಚನಾನಂದ ಮಹಾಸ್ವಾಮಿಗಳು*ಪಂಚಮಸಾಲಿ ಸಮುದಾಯದ ಇತಿಹಾಸದಲ್ಲಿ ಮ...
26/03/2023

ಪಂಚಮಸಾಲಿ ಇತಿಹಾಸದಲ್ಲಿ ಮೀಸಲಾತಿ ಮೈಲಿಗಲ್ಲಿಗೆ ಕಾರಣರಾದವರಿಗೆ ಅಭಿನಂದನೆ: ಶ್ರೀ ವಚನಾನಂದ ಮಹಾಸ್ವಾಮಿಗಳು*

ಪಂಚಮಸಾಲಿ ಸಮುದಾಯದ ಇತಿಹಾಸದಲ್ಲಿ ಮೀಸಲಾತಿ ನೀಡುವ ಮೂಲಕ ಹೊಸದೊಂದು ಮೈಲಿಗಲ್ಲನ್ನು ನೆಟ್ಟಂತಹ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರಿಗೆ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು ಹೂವಿನ ಅಭಿಷೇಕ ಮಾಡುವ ಮೂಲಕ ಸಮುದಾಯದ ಪರವಾಗಿ ಅಭಿನಂದಿಸಿದರು.

ಇಂದು ದಾವಣಗೆರೆಯಲ್ಲಿ ನಡೆದಂತಹ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಪ್ರಧಾನಮಂತ್ರಿಗಳನ್ನ ಬಿಳ್ಕೊಟ್ಟ ನಂತರ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರೊಂದಿಗೆ ಸ್ವಾಮೀಜಿಗಳು ಸುಧೀರ್ಘ ಚರ್ಚೆ ನಡೆಸಿದರು.

ಪಂಚಮಸಾಲಿ ಸಮುದಾಯ ಕಳೆದ ಮೂರು ದಶಕಗಳಿಂದ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆಸಿದ ಹೋರಾಟಕ್ಕೆ ಯಶಸ್ಸು ದೊರಕಿಸಿ ಕೊಟ್ಟಿದ್ದೀರಿ. ನಮ್ಮ ಸಮುದಾಯದ ಬೇಡಿಕೆ ಇನ್ನಷ್ಟಿತ್ತು. ಆದರೆ, ಮೊದಲ ಹಂತವಾಗಿ ಶೇಕಡಾ 7 ರಷ್ಟು ಮೀಸಲಾತಿ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಈ ಮೀಸಲಾತಿ ನಮ್ಮ ಸಮುದಾಯದ ಎಲ್ಲರಿಗೂ ಆದಷ್ಟು ಶೀಘ್ರವಾಗಿ ತಲುಪಬೇಕು ಎನ್ನುವುದು ನಮ್ಮ ಆಶಯವಾಗಿದ್ದು, ಇದಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಅದೇ ರೀತಿ ಕೇಂದ್ರ ಸರಕಾರ ಓಬಿಸಿ ಪಟ್ಟಿಯಲ್ಲಿ ಪಂಚಮಸಾಲಿಗಳಿಗೆ ಸ್ಥಾನ ದೊರಕಿಸಿಕೊಡುವಂತೆ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಅವರಿಗೂ ವಿನಂತಿಸಿದ್ದೇವೆ ಎಂದು ಸ್ವಾಮೀಜಿಗಳು ತಿಳಿಸಿದರು.

*ಮೊದಲ ಹಂತದ ಹೋರಾಟ ಯಶಸ್ವಿ – ಎರಡನೇ ಹಂತದ ಹೋರಾಟಕ್ಕೆ ಅಣಿ: ಶ್ರೀ ವಚನಾನಂದ ಮಹಾಸ್ವಾಮಿಗಳು**ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹ**ಬೆಂಗಳೂರು ಮಾ...
25/03/2023

*ಮೊದಲ ಹಂತದ ಹೋರಾಟ ಯಶಸ್ವಿ – ಎರಡನೇ ಹಂತದ ಹೋರಾಟಕ್ಕೆ ಅಣಿ: ಶ್ರೀ ವಚನಾನಂದ ಮಹಾಸ್ವಾಮಿಗಳು*
*ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹ*

*ಬೆಂಗಳೂರು ಮಾ. 24*: 3 ದಶಕಗಳ ಮೊದಲ ಹಂತದ ಹೋರಾಟ ಇಂದು ಯಶಸ್ಸು ಕಂಡಿದೆ, ಪಂಚಮಸಾಲಿ ಸಮುದಾಯದ ಪ್ರತಿಯೊಬ್ಬರಿಗೂ ಮೀಸಲಾತಿಯ ಲಾಭ ದೊರಕಿಸಿಕೊಡುವ ಎರಡನೇ ಹಂತದ ಹೋರಾಟಕ್ಕೆ ಹರಿಹರ ಪೀಠ ಅಣಿಯಾಗಿದೆ ಎಂದು *ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು* ಪ್ರತಿಕ್ರಿಯಿಸಿದರು.

ಇಂದು ರಾಜ್ಯ ಸರಕಾರ ಪಂಚಮಸಾಲಿ ಸಮುದಾಯಕ್ಕೆ 2 ಡಿ ಮೀಸಲಾತಿಯ ಮೂಲಕ ಶೇಕಡಾ 7 ರಷ್ಟು ಪ್ರಾತಿನಿಧ್ಯ ನೀಡುವ ಸ್ಪಷ್ಟ ನಿರ್ಧಾರದ ಘೋಷಣೆಯ ನಂತರ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದರು. ಹರಿಹರ ಪಂಚಮಸಾಲಿ ಪೀಠ ಸಮುದಾಯಕ್ಕೆ ಮೀಸಲಾತಿಯನ್ನು ದೊರಕಿಸಿಕೊಡುವ ಪ್ರಾಥಮಿಕ ಗುರಿಯ ಹಿನ್ನಲೆಯಲ್ಲಿ ಸ್ಥಾಪಿಸಲಾದ ಪೀಠವಾಗಿದೆ. ಈ ಪೀಠದ ಪೀಠಾಧ್ಯಕ್ಷರಾದ ನಂತರ ಹೋರಾಟವನ್ನ ಮತ್ತುಷ್ಟು ತೀವ್ರಗೊಳಿಸಿದ್ದೇವು. ಈ ಹೋರಾಟವನ್ನ ಸೂಕ್ತ ರೀತಿಯಲ್ಲಿ ಮುನ್ನಡೆಸುವ ಮೂಲಕ ಆಯೋಗಕ್ಕೆ ಸೂಕ್ತ ದಾಖಲಾತಿಯನ್ನ ಸಲ್ಲಿಸಿದ್ದೇವು. ಸೂಕ್ತ ದಾಖಲಾತಿ ಹಾಗೂ ಸಮರ್ಪಕವಾದ ವಾದದ ಪರಿಣಾಮವಾಗಿ ಹಿಂದುಳಿದ ಆಯೋಗ ಮಧ್ಯಂತರ ವರದಿಯನ್ನು ನೀಡಿದೆ. ಈ ವರದಿಯ ಅನ್ವಯ ಹಾಗೂ ರಾಷ್ಟ್ರೀಯ ನಾಯಕರೊಂದಿಗಿನ ಚರ್ಚೆ ಫಲ ನೀಡಿದ್ದು, ಇಂದು ಮೀಸಲಾತಿಯ ಸ್ಪಷ್ಟ ಚಿತ್ರಣ ದೊರೆತಿದೆ. ಇದನ್ನ ನಾವು ಸ್ವಾಗತಿಸುತ್ತೇವೆ. ನಮ್ಮ ಸಮುದಾಯಕ್ಕೆ ಶೈಕ್ಷಣಿಕ ಹಾಗೂ ಸಾಮಾಜಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆಯುವುದು ಅಗತ್ಯವಿತ್ತು. ಅದು ಇಂದು ಈಡೇರಿದೆ. ಆದರೆ, ಅದು ಅನುಷ್ಠಾನಗೊಂಡು ನಮ್ಮ ಸಮುದಾಯದ ಎಲ್ಲರಿಗೂ ಅದರ ಸದುಪಯೋಗ ಆಗಬೇಕು. ಈ ನಿಟ್ಟಿನಲ್ಲಿ ನಾವು ಕಾನೂನಾತ್ಮಕವಾಗಿ ಹಾಗೂ ಸಾಂವಿಧಾನತ್ಮಕವಾಗಿ ಎರಡನೇ ಹಂತದ ಹೋರಾಟದಲ್ಲಿ ತೊಡಗಿಕೊಳ್ಳುತ್ತೇವೆ. ಎಲ್ಲರಿಗೂ ಮೀಸಲಾತಿಯ ಲಾಭ ದೊರಕಿಸಿಕೊಡುವ ವರೆಗೂ ವಿಶ್ರಮಿಸುವುದಿಲ್ಲ.

ಈಗಾಗಲೇ ಕೇಂದ್ರ ಓಬಿಸಿಯ ಪಟ್ಟಿನಲ್ಲಿ ಪಂಚಮಸಾಲಿಗಳನ್ನ ಸೇರಿಸಬೇಕು ಎನ್ನುವ ಪ್ರಸ್ತಾಪ ಮುಖ್ಯ ಕಾರ್ಯದರ್ಶಿಗಳ ಮುಂದಿದೆ. ಕೇಂದ್ರ ಸರಕಾರ ನಮ್ಮ ಮನವಿಯನ್ನು ಇಲ್ಲಿಗೆ ವರ್ಗಾಯಿಸಿದ್ದು ಅದರ ಬಗ್ಗೆಯೂ ನಿರಂತರ ಹೋರಾಟ ನಡೆಯಲಿದೆ ಎಂದು ಹೇಳಿದರು.

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸತತ ಹೋರಾಟದ ಫಲವಾಗಿ ಇಂದು ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ...
24/03/2023

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸತತ ಹೋರಾಟದ ಫಲವಾಗಿ ಇಂದು ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ *ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು ಎಂದು ಹೇಳಿದರು*.

ಬೆಂಗಳೂರು ನಗರದ ಶ್ವಾಸಯೋಗ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆಯನ್ನು ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ.ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ. ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್‌ ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.

*ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್‌ ಪಾಟೀಲ್‌ ರವರು ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂಧರ್ಭ ಬಂದೊದಗಿದೆ ಎಂದು ಹೇಳಿದರು.

*ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ಶ್ರೀ ವಚನಾನಂದ ಸ್ವಾಮೀಜಿ ವಿಶ್ವಾಸ*- ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ 30 ...
23/03/2023

*ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ಶ್ರೀ ವಚನಾನಂದ ಸ್ವಾಮೀಜಿ ವಿಶ್ವಾಸ*

- ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ 30 ವರ್ಷಗಳ ಹೋರಾಟಕ್ಕೆ ದೊರೆತ ಫಲ
- ಸಮಾಜಕ್ಕೆ ಶೈಕ್ಷಣಿಕವಾಗಿ ಹಾಗೂ ಉದ್ಯೋಗದಲ್ಲಿ ಮೀಸಲಾತಿ

*ಬೆಂಗಳೂರು ಮಾರ್ಚ್‌ 23*: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ *ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು*.

ಇಂದು ಬೆಂಗಳೂರು ನಗರದ ಶ್ವಾಸ ಯೋಗ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನ ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ. ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್‌ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.

*ಪಂಚಮಸಾಲಿ ಮೀಸಲಾತಿ ಹೋರಾಟದ ಕಾನೂನಾತ್ಮಕ ಹೋರಾಟದ ಮುಂಚೂಣಿಯಲ್ಲಿರುವ ವಕೀಲರಾದ ಬಿ.ಎಸ್‌ ಪಾಟೀಲ್‌* ರವರು ಮಾತನಾಡಿ, ಮಧ್ಯಂತರ ವರದಿಯ ನಂತರ ಆಯೋಗ ಮತ್ತೊಮ್ಮೆ ದಾಖಲೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಿತು. ಈ ಸಂಧರ್ಭದಲ್ಲಿ ನಾವು 1871 ರಿಂದ ಇದುವರೆಗಿನ ಸುಮಾರು 900 ಪುಟಗಳಷ್ಟು ದಾಖಲೆಯನ್ನ ಸಲ್ಲಿಸಿದ್ದೇವೆ. 1871 ರ ವರದಿಯಲ್ಲಿ ಪಂಚಮಸಾಲಿ ಸಮುದಾಯವನ್ನ ಶೂದ್ರರ ಗುಂಪಿನಲ್ಲಿ ಸೇರಿಸಿದ್ದರ ದಾಖಲೆಯನ್ನ ಪ್ರಮುಖವಾಗಿ ಪರಿಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಹರಿಹರ ಪಂಚಮಸಾಲಿ ಪೀಠದ ನೇತೃತ್ವದಲ್ಲಿ ನಡೆದಂತಹ ಕಾನೂನಾತ್ಮಕ ಹೋರಾಟಕ್ಕೆ ಜಯ ಸಿಗುವ ಸುಸಂಧರ್ಭ ಬಂದೊದಗಿದೆ ಎಂದು ಹೇಳಿದರು.

Panchamasali: ಪಂಚಮಸಾಲಿ 2ಎ ಮೀಸಲಿಗೆ ಮುಂದಡಿ ಇಟ್ಟ ಸರ್ಕಾರ; ಶೀಘ್ರದಲ್ಲೇ ಕುಲಶಾಸ್ತ್ರೀಯ ಅಧ್ಯಯನ ವರದಿ ಸಲ್ಲಿಕೆಪಂಚಮಸಾಲಿ ಸಮುದಾಯದ ಬಹುದಿನ...
08/12/2022

Panchamasali: ಪಂಚಮಸಾಲಿ 2ಎ ಮೀಸಲಿಗೆ ಮುಂದಡಿ ಇಟ್ಟ ಸರ್ಕಾರ; ಶೀಘ್ರದಲ್ಲೇ ಕುಲಶಾಸ್ತ್ರೀಯ ಅಧ್ಯಯನ ವರದಿ ಸಲ್ಲಿಕೆ

ಪಂಚಮಸಾಲಿ ಸಮುದಾಯದ ಬಹುದಿನದ ಬೇಡಿಕೆಯಾದ 2ಎ ಮೀಸಲಾತಿ ಶೀಘ್ರ ಈಡೇರುವ ಸಾಧ್ಯತೆ ಇದೆ. ಶೀಘ್ರದಲ್ಲೇ ಕುಲಶಾಸ್ತ್ರೀಯ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದ್ದು, ನಂತರ ಸರ್ಕಾರ ಮುಂದಿನ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆ ಮೂಡಿಸಿದೆ. ಈ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಚನಾನಂದ ಶ್ರೀಗಳ ನಡುವೆ ಮಹತ್ವದ ಸಭೆಯಾಗಿದೆ.

ಹೈಲೈಟ್ಸ್‌:
* ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಮುಂದಡಿ ಇಟ್ದ ಸರ್ಕಾರ
* ಶೀಘ್ರದಲ್ಲೇ ಕುಲಶಾಸ್ತ್ರೀಯ ಅಧ್ಯಯನ ವರದಿ ಸಲ್ಲಿಕೆ, ಸರ್ಕಾರದಿಂದ ಮುಂದಿನ ಕ್ರಮ ನಿರೀಕ್ಷೆ
* ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಚನಾನಂದ ಶ್ರೀಗಳ ಮಹತ್ವದ ಸಭೆ

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲು ಬೇಡಿಕೆ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸುತ್ತಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿಧಾನ ಮಂಡಲ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಈ ಕುರಿತ ವರದಿ ಸಲ್ಲಿಸುವ ಸಾಧ್ಯತೆಯಿದೆ. ನಂತರ ಸರಕಾರ ಮುಂದಿನ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆ ಮೂಡಿದೆ.

ಆಯೋಗ ನಡೆಸುತ್ತಿರುವ ಕುಲಶಾಸ್ತ್ರೀಯ ಅಧ್ಯಯನ ಮುಕ್ತಾಯ ಹಂತದಲ್ಲಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿರುವುದು ಇದಕ್ಕೆ ಪುಷ್ಠಿ ನೀಡುವಂತಿದೆ.

ಮಂಗಳವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದ ನಿಯೋಗ ವಿಸ್ತೃತವಾಗಿ ಚರ್ಚೆ ನಡೆಸಿತು. ಈ ವೇಳೆ ಸಿಎಂ ಆಯೋಗ ವರದಿ ಸಲ್ಲಿಸುತ್ತಿದ್ದಂತೆ ಮುಂದಿನ ಕ್ರಮವನ್ನು ತ್ವರಿತವಾಗಿ ಕೈಗೊಳ್ಳುವ ಭರವಸೆ ನೀಡಿದ್ದರು. ಇದರ ಮಧ್ಯೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೊಂದಿಗೂ ಸರಕಾರ ಚರ್ಚಿಸಿದೆ. ಕುಲಶಾಸ್ತ್ರೀಯ ಅಧ್ಯಯನ ಪ್ರಕ್ರಿಯೆ ಬಹುತೇಕ ಪೂರ್ಣಗೊಳ್ಳಲಿರುವುದಾಗಿ ಆಯೋಗವು ಸರಕಾರಕ್ಕೆ ತಿಳಿಸಿದೆ ಎಂದು ಹೇಳಲಾಗಿದೆ.

''ಪಂಚಮಸಾಲಿ ಸಮುದಾಯವನ್ನು ಪ್ರವರ್ಗ- 2ಎಗೆ ಸೇರ್ಪಡೆ ಹಾಗೂ ಅಖಂಡ ವೀರಶೈವ ಲಿಂಗಾಯಿತರನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ವಿಚಾರವಾಗಿ ವಿಶೇಷ ಸಭೆ ನಡೆಸಲಾಗಿದೆ. ಕಾನೂನಿನ ಅರಿವಿನ ಕಾರಣಕ್ಕೆ ನಾವು ಸರಕಾರಕ್ಕೆ ಗಡುವು ನೀಡಿಲ್ಲ. ಸಿಎಂ ಶೀಘ್ರವೇ ಮೀಸಲು ವಿಚಾರವಾಗಿ ಘೋಷಿಸಬೇಕು. ಇದಕ್ಕಾಗಿ ಮತ್ತೊಬ್ಬ ಸಿಎಂ ಬರುವ ಅವಶ್ಯಕತೆಯಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಬೇಡ,'' ಎಂದು ಸಿಎಂ ಭೇಟಿ ಬಳಿಕ ಮಾತನಾಡಿದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.

''ಇತ್ತೀಚೆಗೆ ನಡೆದ ಶಿಕ್ಷಕರ ನೇಮಕಾತಿಯಲ್ಲಿ ಪ್ರವರ್ಗ 2ಎ ಮೀಸಲು ಇಲ್ಲದ ಕಾರಣ ಸಮುದಾಯದ ಯಾರೊಬ್ಬರು ನೇಮಕವಾಗದೆ ಅನ್ಯಾಯವಾಗಿದೆ. ಹಾಗಾಗಿ ಮೀಸಲು ನೀಡಿ ಎಂದು ನಿರಂತವಾಗಿ ಮನವಿ ಮಾಡುತ್ತಲೇ ಇದ್ದೇವೆ. ಇದು ಕೊನೆಯ ಮನವಿ. ಮೀಸಲಾತಿ ನೀಡಿದರೆ ನಿಮಗೆ ಹಾಲು, ತುಪ್ಪದಲ್ಲಿಅಭಿಷೇಕ ಮಾಡುತ್ತೇವೆ. ನಮಗೆ ನೀವೇ ಸಾಕ್ಷಾತ್‌ ಬಸವಣ್ಣ,'' ಎಂದಿದ್ದಾರೆ.

''ಮೀಸಲು ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಜೋಕರ್‌ಗಳು, ಕಾಮಿಡಿಮನ್‌ಗಳು ಹುಟ್ಟುಕೊಂಡಿದ್ದಾರೆ. ನಾವು ಸರಕಾರದ ಪರವಾಗಿದ್ದೇವೆ, ಮುಖ್ಯಮಂತ್ರಿಗಳೊಂದಿಗೆ ಒಳಒಪ್ಪಂದವಿದೆ ಎಂದು ಮಾತುಗಳಿದ್ದು, ಇದಕ್ಕೆಲ್ಲಾ ಅವಕಾಶ ನೀಡಬಾರದು. 1994ರಿಂದ ನಡೆದಿರುವ ಹೋರಾಟಕ್ಕೆ ಸ್ಪಂದಿಸಿ ಮೀಸಲಾತಿ ನೀಡಬೇಕು. ಇದರಲ್ಲಿರಾಜಿ ಬೇಡ,'' ಎಂದು ತಿಳಿಸಿದರು.

ಕಾನೂನು ಬದ್ಧ ಪ್ರಕ್ರಿಯೆ
ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ''ಪಂಚಮಸಾಲಿಗಳಿಗೆ ಮೀಸಲು ನೀಡುವ ವಿಷಯದಲ್ಲಿಆಗುತ್ತಿರುವ ಒಳ್ಳೆಯ ಬೆಳವಣಿಗೆಗಳಿಗೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕಾರಣ.ಅವರು ಸಂಪುಟ ಉಪ ಸಮಿತಿ ರಚಿಸಿದ್ದರಿಂದ ಪ್ರಕ್ರಿಯೆ ಇಲ್ಲಿಯವರೆಗೆ ಬಂದು ನಿಂತಿದೆ. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರು ಅಗತ್ಯ ತಿದ್ದುಪಡಿ ಮೂಲಕ ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚು ಅಧಿಕಾರ ನೀಡಿದರು. ಅದರಂತೆ ಸಮುದಾಯದ ಬೇಡಿಕೆಯನ್ನು ಆಯೋಗಕ್ಕೆ ಶಿಫಾರಸು ಮಾಡಲಾಗಿದ್ದು, ಆಯೋಗ ಕುಲಶಾಸ್ತ್ರೀಯ ಅಧ್ಯಯನ ಆರಂಭಿಸಿ ಮುಗಿಯುವ ಹಂತಕ್ಕೆ ಬಂದಿದೆ. ನಮ್ಮ ನಿರ್ಧಾರ ಸಂವಿಧಾನದ ಚೌಕಟ್ಟಿನೊಳಗೆ, ಕಾನೂನು ಬದ್ಧವಾಗಿರಬೇಕಾಗುತ್ತದೆ,'' ಎಂದು ಹೇಳಿದರು.

''ಶೀಘ್ರವಾಗಿ ವರದಿ ನೀಡುವಂತೆ ಆಯೋಗಕ್ಕೆ ಸೂಚಿಸಲಾಗಿದ್ದು, ವರದಿ ಪಡೆದು ಸಂಪುಟದಲ್ಲಿ ತೀರ್ಮಾನಿಸಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುತ್ತೇವೆ. ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ ವಿಚಾರವೂ ಸೇರಿದಂತೆ ಆಯೋಗವು ಸಮಗ್ರ ವರದಿ ನೀಡುವ ಸಾಧ್ಯತೆ ಇದೆ. ವರದಿ ಸಲ್ಲಿಕೆಯಾದ ನಂತರ ಸಂಬಂಧಪಟ್ಟ ಎಲ್ಲರೊಂದಿಗೆ ಚರ್ಚಿಸಿ ನ್ಯಾಯ ಕೊಡಿಸುವ ಕೆಲಸ ಮಾಡಲಾಗುವುದು,'' ಎಂದು ಹೇಳಿದರು.

*ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ: ವಿಜಯ್‌ ನಿರಾಣಿ**ಬೆಂಗಳೂರು, ನ.3*: "ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್...
05/11/2022

*ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ: ವಿಜಯ್‌ ನಿರಾಣಿ*

*ಬೆಂಗಳೂರು, ನ.3*: "ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಮುಂದೆ ಬರಬೇಕು ಎಂದು
ಎಂಆರ್‌ಎನ್ ಸಮೂಹದ ವ್ಯವಸ್ಥಾಪಕ ನಿದೇರ್ಶಕ ವಿಜಯ್ ಎಂ ನಿರಾಣಿ ಅವರು ಕರೆ ನೀಡಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಗುರುವಾರ ಇಂಧನ ಕ್ಷೇತ್ರ ಕುರಿತ ಸಂವಾದಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯ್‌ ನಿರಾಣಿ, "ಏಷ್ಯಾದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದನೆ ಮಾಡುವ ರಾಜ್ಯ ಕರ್ನಾಟಕ. ಪವನ ಹಾಗೂ ಸೌರ ವಿದ್ಯುತ್‌ ಉತ್ಪಾದನೆ ಯೋಜನೆಯನ್ನು ಅಭಿವೃದ್ಧಿಪಡಿಸಿ, ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸಲು ಯೋಜಿಸಲಾಗಿದೆ," ಎಂದರು.

"ಡೀಸೆಲ್‌ ಮತ್ತು ಪೆಟ್ರೋಲ್ ದರ ದಿನೇದಿನೇ ಹೆಚ್ಚುತ್ತಿದ್ದು, ಈ ತೈಲಗಳ ಮೇಲಿನ ಅವಲಂಬನೆ ಕಡಿಮೆ ಆಗಬೇಕು. ಅದಕ್ಕಿರುವ ಪರ್ಯಾಯ ಮಾರ್ಗ ಎಥನಾಲ್ ಬಳಕೆ. ಪರಿಸರ ಸ್ನೇಹಿ ಎಥನಾಲ್‌ ಹೆಚ್ಚುತ್ತಿರುವ ಜಾಗತಿಕ ತಾಪಮಾನ ತಡೆಗಟ್ಟಲು ಸಹಕಾರಿ," ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಜಯ್ ನಿರಾಣಿ, "ರಾಜ್ಯದಲ್ಲಿ ಎಥೆನಾಲ್‌ನಂತಹ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಸಾಕಷ್ಟು ಅವಕಾಶವಿದೆ,"ಎಂದರು.

"ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾತ್ರವಲ್ಲದೇ, ಎಥೆನಾಲ್ ಸೇರಿದಂತೆ ಕಬ್ಬಿನ ಹಲವಾರು ಉಪ ಉತ್ಪನ್ನಗಳನ್ನು ತಯಾರಿಸಬಹುದು. ಪೆಟ್ರೋಲ್‌, ಡೀಸೆಲ್‌ ಜತೆಗೆ 20 ಪ್ರತಿಶತ ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸುವ ಪ್ರಧಾನಿ ಮೋದಿಯವರ ಆಶಯವನ್ನು ನಾವು ಈಗಾಗಲೇ ಸಾಧಿಸಿದ್ದೇವೆ. ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಪೂರೈಸುವ ಸಾಮರ್ಥ್ಯವನ್ನು ಗಳಿಸಿದ್ದೇವೆ," ಎಂದು ವಿಜಯ್ ನಿರಾಣಿ ಹೇಳಿದರು.

"ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನಿ ಮೋದಿಯವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಎಂಆರ್‌ಎನ್‌ ಸಮೂಹ ಕೆಲಸ ಮಾಡುತ್ತಿದೆ. ಕಬ್ಬಿನ ಉಪ ಉತ್ಪನ್ನಗಳ ಸಮಪರ್ಕ ಬಳಕೆ, ಕೃಷಿ ಆಧಾರಿತ ಉದ್ಯಮಕ್ಕೆ ಒತ್ತು ನೀಡಿದ್ದೇವೆ. ಜತೆಗೆ, ಡೀಸೆಲ್ ಇಂಜಿನ್‌ಗಳನ್ನು ಬಯೋ-ಸಿಎನ್‌ಜಿ ಇಂಜಿನ್‌ ಟ್ರ್ಯಾಕ್ಟರ್‌ಗಳಾಗಿ ಪರಿವರ್ತಿಸುವ ಮೂಲಕ ಅವರ ರೈತರ ಆರ್ಥಿಕ ಹೊರೆ ತಗ್ಗಿಸುವಲ್ಲಿ ನೆರವಾಗುತ್ತಿದ್ದೇವೆ," ಎಂದು ಅವರು ಹೇಳಿದರು.

"ಜಾಗತಿಕವಾಗಿ ಬ್ರ್ಯಾಂಡ್ ಇಂಡಿಯಾಗೆ ಕರ್ನಾಟಕವು ಅತಿದೊಡ್ಡ ಕೊಡುಗೆಯನ್ನು ನೀಡಿದೆ. ವಿಶೇಷವಾಗಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಾಗತಿಕ ಮಟ್ಟದಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ," ಎಂದು ವಿಜಯ್ ನಿರಾಣಿ ಹೇಳಿದರು.

"ಮುಂಬರುವ ದಿನಗಳಲ್ಲಿ ಎಲೆಕ್ಟ್ರಾನಿಕ್ ವಸ್ತು ರಫ್ತು ಮಾಡುವಲ್ಲಿ ಭಾರತ ಮುಂಚೂಣಿಗೆ ಬರುವ ಕನಸು ನನಸು ಆಗುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ. ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್ ವಸ್ತುಗಳ ಆಮದನ್ನು ತಗ್ಗಿಸುವುದು ನಮ್ಮ ಮುಂದಿನ ಗುರಿಯಾಗಬೇಕು," ಎಂದು ಅವರು ಹೇಳಿದರು.

"ಈ ಮೊದಲು ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ನಿರೀಕ್ಷೆ ಇತ್ತು. ಈಗ ನಮ್ಮ ನಿರೀಕ್ಷೆಗೂ ಮೀರಿ ಮೊತ್ತ ದುಪ್ಪಟ್ಟಾಗುವ ಸಾಧ್ಯತೆ ಇದೆ. ಇದರಿಂದ ಕರ್ನಾಟಕ ‌ಉದ್ಯಮ ಸ್ನೇಹಿ ರಾಜ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಗ್ರಮಾನ್ಯ ಉದ್ಯಮಿಗಳನ್ನು ಒಂದೇ ವೇದಿಕೆಯಡಿ ಕರೆ ತರುವಲ್ಲಿ ಈ ಸಮಾವೇಶ ಯಶಸ್ವಿಯಾಗಿದೆ," ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂವಾದದಲ್ಲಿ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯ್ಕ್, ಪೆಟ್ರೋನಸ್ ಹೈಡ್ರೋಜನ್ ಕಂಪನಿ ಸಿಇಓ ಅದ್ಲಾನ್ ಅಹ್ಮದ್, ಹಿಟಾಚಿ ಎನರ್ಜಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೇಣು ನುಗೂರಿ ಭಾಗವಹಿಸಿದ್ದರು.

05/10/2022

ಮೈಸೂರು ದಸರಾ ಜಂಬೂ ಸವಾರಿ ೨೦೨೨

*ಆರಿತು ಉತ್ತರ ಕರ್ನಾಟಕ ಅಭಿವೃದ್ಧಿ ಯ ಆಶಾದೀಪ**ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಇನ್ನಿಲ್ಲ*ಕರ್ನಾಟಕ ರಾಜ್...
06/09/2022

*ಆರಿತು ಉತ್ತರ ಕರ್ನಾಟಕ ಅಭಿವೃದ್ಧಿ ಯ ಆಶಾದೀಪ*

*ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಇನ್ನಿಲ್ಲ*

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇರುತ್ತಾರೆ.
9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ.
ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡರು.
1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದರು.
2004ರಲ್ಲಿ ಕಾಂಗ್ರೆಸ್‌ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು. ರಾಜಕೀಯ ಜೀವನದಲ್ಲಿ ಇದೊಂದೇ ಚುನಾವಣೆಯಲ್ಲಿ ಉಮೇಶ್ ಕತ್ತಿ ಸೋಲು ಕಂಡಿರುವುದು. 2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು.
ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.
ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು. 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು.
2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು.
2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ. ಸಹೋದರ ರಮೇಶ್ ಕತ್ತಿ ಸಹ ರಾಜಕೀಯದಲ್ಲಿದ್ದು, ಮಾಜಿ ಸಂಸದರು.

Address


Telephone

+917411190934

Website

Alerts

Be the first to know and let us send you an email when Inchara TV LIVE posts news and promotions. Your email address will not be used for any other purpose, and you can unsubscribe at any time.

Videos

Shortcuts

  • Address
  • Telephone
  • Alerts
  • Videos
  • Claim ownership or report listing
  • Want your business to be the top-listed Media Company?

Share