LiveIndia Kannada

  • Home
  • LiveIndia Kannada

LiveIndia Kannada The News World

ನಮ್ಮ ಚಾನಲ್ Subscribe ಮಾಡಿ ಬೆಂಬಲಿಸಿ.
20/01/2023

ನಮ್ಮ ಚಾನಲ್ Subscribe ಮಾಡಿ ಬೆಂಬಲಿಸಿ.

13/05/2022

Breaking News

ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಮಾಹಿತಿ‌ ನೀಡಿದ್ದಾರೆ.

25/04/2022
11/02/2022

ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಸಿಎಂ ಭೇಟಿಯಾದ ರೋಷನ್ ಬೇಗ್
ಬೆಂಗಳೂರು, ಫೆ.೧೧: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬ0ಧಿಸಿದ0ತೆ ಕಾಲೇಜುಗಳಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್.ರೋಷನ್ ಬೇಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬುರ್ಖಾ ಹಾಗೂ ಹಿಜಾಬ್ ನಡುವೆ ವ್ಯತ್ಯಾಸವಿದೆ. ಶೈಕ್ಷಣಿಕವಾಗಿ ಮುಸ್ಲಿಂ ಹೆಣ್ಣುಮಕ್ಕಳು ತೀರ ಹಿಂದುಳಿದಿರುವ ಈ ಕಾಲಘಟ್ಟದಲ್ಲಿ ಹಿಜಾಬ್ ಕಾರಣದಿಂದ ಅವರನ್ನು ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ನಿರಾಕರಿಸಿದರೆ ಅವರ ಭವಿಷ್ಯ ಏನಾಗಬೇಕು?. ಹಿಜಾಬ್ ಕಾರಣಕ್ಕಾಗಿ ಹೆಣ್ಣು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು.
ಅಲ್ಲದೆ, ಶಾಲಾ, ಕಾಲೇಜುಗಳ ಕ್ಯಾಂಪಸ್‌ಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು. ಇತ್ತೀಚೆಗೆ ಮಂಡ್ಯ, ಶಿವಮೊಗ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ನಡೆದಿರುವ ಘಟನೆಗಳು ತೀರ ಕಳವಳ ಉಂಟು ಮಾಡುವಂತಿವೆ ಎಂದು ರೋಷನ್ ಬೇಗ್ ಹೇಳಿದರು.
ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗಾಗಲೆ ಈ ಪ್ರಕರಣ ಹೈಕೋರ್ಟ್ಮೆಟ್ಟಿಲೇರಿದ್ದು ಮಧ್ಯಂತರ ಆದೇಶ ಬಂದಿದೆ. ರಾಜ್ಯ ಸರಕಾರ ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುತ್ತದೆ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ. ಶಾಲಾ, ಕಾಲೇಜುಗಳ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಈಗಾಗಲೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

23/11/2021

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಎಂ ಬೊಮ್ಮಾಯಿಗೆ ದೂರವಾಣಿ ಕರೆ

ಅಗತ್ಯ ನೆರವು ಮತ್ತು ಸಹಕಾರದ ಭರವಸೆ

ಅಕಾಲಿಕ ಮಳೆಯಿಂದ ಉಂಟಾಗಿರುವ ನಷ್ಟದ ಕುರಿತು ಮಾಹಿತಿ ಪಡೆದ ಪಿಎಂ

ಬೆಂಗಳೂರು:
ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಮತ್ತು ಇತರೆ ನಷ್ಟದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಮಗ್ರ ಮಾಹಿತಿ ಪಡೆದುಕೊಂಡರು.

ಮಂಗಳವಾರ ಮುಂಜಾನೆ ನರೇಂದ್ರಮೋದಿಯವರು ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದರು.

ಕಳೆದ ಹಲವು ದಿನಗಳಿಂದ ಎಡೆಬಿಡದೆ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮೋದಿಯವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಕಾರ್ಯ ಮತ್ತು ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳಿಗೆ ವಿವರಣೆ ನೀಡಿದರು. ಅತಿವೃಷ್ಟಿಯಿಂದ ವಿಶೇಷವಾಗಿ ಜೀವಹಾನಿ ಮತ್ತು ಬೆಳೆ ಹಾನಿ ಉಂಟಾಗಿರುವುದರ ಬಗ್ಗೆ ಪ್ರಧಾನ ಮಂತ್ರಿಗಳು ಕಳಕಳಿ ವ್ಯಕ್ತಪಡಿಸಿದರು. ರಾಜ್ಯಕ್ಕೆ ಅಗತ್ಯ ನೆರವು ಮತ್ತು ಸಹಕಾರ ನೀಡುವ ಭರವಸೆಯನ್ನು ನೀಡಿದರು.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಕೂಡ ಇಂದು ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿದ್ದರು. ರಾಜ್ಯದಲ್ಲಿನ ಪ್ರವಾಹ ಮತ್ತು ಅತಿವೃಷ್ಟಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು. ಮಳೆಯಿಂದ ಆಗಿರುವ ಬೆಳೆ ಹಾನಿಯ ಕುರಿತು ವಿಷಾದ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ರೈತರಿಗೆ ನೀಡಿರುವ ನೆರವು, ಪರಿಹಾರ ಕಾರ್ಯ ಮತ್ತು ಎಲ್ಲಾ ಸಹಕಾರಗಳ ಕುರಿತು ಮುಖ್ಯಮಂತ್ರಿಗಳು ಅಮಿತ್ ಶಾ ಅವರಿಗೆ ವಿವರಿಸಿದರು.

Address


Telephone

+919448387862

Website

Alerts

Be the first to know and let us send you an email when LiveIndia Kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to LiveIndia Kannada:

Shortcuts

  • Address
  • Telephone
  • Alerts
  • Contact The Business
  • Claim ownership or report listing
  • Want your business to be the top-listed Media Company?

Share