D I P R, Shivamogga

  • Home
  • D I P R, Shivamogga

D I P R, Shivamogga ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಕ

27/03/2024
27/03/2024

ಸ್ವೀಪ್ ಸಮಿತಿಯಿಂದ ಸೀಗೆಹಟ್ಟಿಯಲ್ಲಿ ಮತದಾನ ಜಾಗೃತಿ*
ಶಿವಮೊಗ್ಗ, ಮಾರ್ಚ್ 26(ಕರ್ನಾಟಕ ವಾರ್ತೆ)
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸೀಗೆಹಟ್ಟಿ ಇಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಇಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದ್ದ ವಾರ್ಡ್ ಸಭೆಯ ವೇಳೆಯಲ್ಲಿ ಹಾಜರಿದ್ದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ವೀಪ್ ಸಮಿತಿಯಿಂದ ಚುನಾವಣಾ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಅರ್ಹ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕ್ಷೇತ್ರದಲ್ಲಿ ಬರುವಂತಹ ಮತದಾರರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡುವಂತೆ ಅರಿವು ಮೂಡಿಸುಂತೆ ಮನವರಿಕೆ ಮಾಡಲಾಯಿತು.

29/01/2024

ಜ.31 ರಂದು ವಿದ್ಯುತ್ ವ್ಯತ್ಯಯ
------------------
ಶಿವಮೊಗ್ಗ, ಜನವರಿ 29 (ಕರ್ನಾಟಕ ವಾರ್ತೆ): ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
----------------------

29/01/2024

ಶಿವಮೊಗ್ಗ: ಲೋಕಾಯುಕ್ತ ಕುಂದು-ಕೊರತೆ ಸಭೆ
---------------------------
ಶಿವಮೊಗ್ಗ, ಜನವರಿ 29 (ಕರ್ನಾಟಕ ವಾರ್ತೆ) ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜ.30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಶಿವಮೊಗ್ಗ ತಾಲೂಕ್ ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳ ಕಛೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
------------------

10/01/2024

ಸರ್ಕಾರಕ್ಕೆ 14 ಕೋಟಿ ರೂ. ಜಿಎಸ್‍ಟಿ ವಂಚನೆ: ಒರ್ವನ ಬಂಧನ
------------------
ಶಿವಮೊಗ್ಗ, ಜನವರಿ 10; (ಕರ್ನಾಟಕ ವಾರ್ತೆ): ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ ಟ್ರೇಡರ್ ನ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿರುತ್ತಾರೆ.
ಹೊರ ರಾಜ್ಯಗಳಿಂದ ಮೈಸೂರಿಗೆ ತರಿಸುವ ಸರಕು ಹಾಗೂ ಮೈಸೂರಿನಿಂದ ಹೊರರಾಜ್ಯಗಳಿಗೆ ಕಳುಹಿಸುವ ಸರಕುಗಳ ಸಂಬಮಧ ನಕಲಿ ಬಿಲ್‍ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ 14 ಕೋಟಿ ರೂ.ಗಳಿಗೂ ಹೆಚ್ಚು ತೆರಿಗೆ ವಂಚಿಸಿದ್ದು, ಯಾವುದೇ ಅಧಿಕೃತ ರಶೀದಿ ಇಲ್ಲದೇ ನಕಲಿ ಘಟಕಗಳಿಗೆ ಸರಕು ಸಾಗಾಣೆ ಮಾಡಿರುವಂತೆ ತೋರಿಸ ಕೋಟ್ಯಂತರ ರೂ.ಗಳ ವಹಿವಾಟು ಕೇವಲ ಕಾಗದ ಮೇಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರಿನ ಕೇಂದ್ರೀಯ ಜಿಎಸ್‍ಟಿ ಆಯುಕ್ತಾಲಯದ ಅಧಿಕಾರಿಗಳು ವಂಚನೆಯ ಜಾಲವನ್ನು ಭೇದಿಸಿದೆ ಎಂದು ಉಪ ಆಯುಕ್ತರು, ಸೆಂಟ್ರಲ್ ಟ್ಯಾಕ್ಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
-----------------------

04/01/2024

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್ ಆರಂಭ
ಶಿವಮೊಗ್ಗ, ಜನವರಿ 04: (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 07/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಭಾರತೀಯ ಸಭಾಭವನ ಎದುರು, ಆರ್.ಎಂ.ಎಲ್.ನಗರ, ಬಸವೇಶ್ವರ ದೇವಸ್ಥಾನದ ಹತ್ತಿರ, ಗಾಂಧಿ ಬಜಾರ್, ದೇವರಾಜ್ ಅರಸ್ ಬಡಾವಣೆ ಪೆಟ್ರೋಲ್ ಬಂಕ್ ಹತ್ತಿರ, ಸೋಮಿನಕೊಪ್ಪ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ ರಾಮಮಂದಿರ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್, ದ್ರೌಪದಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------------

04/01/2024

ಜ.06 ; ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ
---------------------------------
ಶಿವಮೊಗ್ಗ, ಜನವರಿ 04, (ಕರ್ನಾಟಕ); ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

03/01/2024

ಜನವರಿ 12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಮಾನ್ಯ ಮುಖ್ಯಮಂತ್ರಿಗಳಿಂದ ಚಾಲನೆ : - ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ
-------------------------------------
ಶಿವಮೊಗ್ಗ : ಜನವರಿ 03 : (ಕರ್ನಾಟಕ ವಾರ್ತೆ) : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂಪಾರ್ಕ್‍ನ ಭವ್ಯ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿ ಯುವಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಸುಮಾರು 800-100ಬಸ್ಸುಗಳ ಅಗತ್ಯವಿರುವುದನ್ನು ಅಂದಾಜಿಸಲಾಗಿದೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಾಗುವವರು ಹಾಗೂ ಅಂತಿಮ ವರ್ಷದ ಸೆಮಿಸ್ಟರ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಡಿಪ್ಲೋಮಾ, ಪದವಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳನ್ನು ನಿರೀಕ್ಷಿಸಲಾಗುತ್ತಿದೆ. ನಂತರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಹತ್ತಿರದ ತಾಲೂಕುಗಳ ವಿದ್ಯಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯ ಒದಗಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಿಂದಲೇ ಬಹುಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.
ಈಗಾಗಲೇ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮೊಬೈಲ್ ಸಂದೇಶ ಕಳುಹಿಸಲು ಉದ್ದೇಶಿಸಲಾಗಿದೆ. ವಿವಿಧ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಹೊರಡುವ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪ್ರತಿ ಬಸ್ ಒಂದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳ ಯೋಗಕ್ಷೇಮ ಮತ್ತು ಜವಾಬ್ದಾರಿ ತೆಗೆದುಕೊಳ್ಳುವಂತೆ ಅವರು ಸೂಚಿಸಿದರು.
ಕಾರ್ಯಕ್ರಮದ ಅಂತಿಮ ಸ್ವರೂಪ ಮತ್ತು ಮೇಲ್ವಿಚಾರಣೆಗಾಗಿ ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗುವುದು. - ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಕರೆತರಲು ಸಾಕಷ್ಟು ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ಬಸ್‍ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೇ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊ.ನಂ. ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. _ ಡಾ|| ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವರು.

ಪೂರ್ವಸಿದ್ಧತಾ ಸಭೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಪಂಚಾಯತ್‍ರಾಜ್ ಇಲಾಖೆಯ ಶ್ರೀಮತಿ ಉಮಾ ಮಹದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತೆ ಡಾ.ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್‍ಕುಮಾರ್ ಜಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

03/01/2024

ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ
------------------------
ಶಿವಮೊಗ್ಗ, ಜನವರಿ 03, (ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ.
ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 31, 2024 ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಫೆ. 05 ರೊಳಗಾಗಿ ಸಲ್ಲಿಸುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು ಎಂದು ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22864990/ 22867358 ಗಳನ್ನು ಸಂಪರ್ಕಿಸುವುದು.

--------------------

28/12/2023

ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ
----------------------------
ಶಿವಮೊಗ್ಗ, ಡಿಸೆಂಬರ್ 28, (ಕರ್ನಾಟಕ ವಾರ್ತೆ) : ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ.
ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್‍ನ್ನು ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ. ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಆಪ್‍ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಉ ಉಪನಿರ್ದೇಶಕರಾದ ಅವಿನ್ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------------

28/12/2023

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ
-------------------------
ಶಿವಮೊಗ್ಗ, ಡಿಸೆಂಬರ್ 28, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೊ ಬಿಗ್ ಬಾಸ್ಕೆಟ್, ಡೊಮಿನೊಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿದೆ. ಎಲ್ಲಾ ಅರ್ಹ ಅಸಂಘಟಿತ ಗಿಗ್ ಕಾರ್ಮಿಕರಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಾಯಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದ್ದು, ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯ ಇರುವುದಿಲ್ಲ. ಅಪಘಾತದಲ್ಲಿ ಮರಣ ಹೊಂದಿದ್ದಲ್ಲಿ ವಿಮಾ ಪರಿಹಾರ 2 ಲಕ್ಷ ರೂ. ಹಾಗೂ ಜೀವ ವಿಮಾ 2 ಲಕ್ಷ ರೂ. ಸೇರಿ ಒಟ್ಟು 4 ಲಕ್ಷ ರೂ, ಅಪಘಾತದಿಂದ ಶಾಶ್ವತ ದುರ್ಬಲ ಹೊಂದಿದ್ದಲ್ಲಿ 2 ಲಕ್ಷ ರೂ ವರೆಗೆ ಸೌಲಭ್ಯ, ಆಸ್ಪತ್ರೆ ವೆಚ್ಚ ಮರುಪಾವತಿ ಒಂದು ಲಕ್ಷ ರೂ. ವರೆಗೆ ಸೌಲಭ್ಯಗಳು ಇರುತ್ತದೆ.
18 ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾಸಿಂಧು ಪೆÇೀರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಭವಿಷ್ಯನಿಧಿ ಹಾಗೂ ಇಎಸ್‍ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್‍ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲಾತಿಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಾರ್ಮಿಕ ನಿರೀಕ್ಷಕರುಗಳ ಕಚೇರಿಯ ಕಾರ್ಮಿಕ ಅಧಿಕಾರಿ ದೂ.ಸಂ. 08182-248940 ನ್ನು ಸಂಪರ್ಕಿಸಬಹುದು ಹಾಗೂ ಶಿವಮೊಗ್ಗ ಜಿಲ್ಲೆಯ ಕಾರ್ಮಿಕ ಅಧಿಕಾರಿಯವರ ಕಚೇರಿ ಅಥವಾ ಕಾರ್ಮಿಕ ನಿರೀಕ್ಷಕರ ಕಚೇರಿ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ ಕಚೇರಿಗಳನ್ನು ಸಂಪರ್ಕಿಸಬಹುದೆಂದು ಕಾರ್ಮಿಕ ಅಧಿಕಾರಿ ಸುಮ ಹೆಚ್.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------------

27/12/2023

ಯುವ ನಿಧಿ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, ಡಿಸೆಂಬರ್ 27 (ಕರ್ನಾಟಕ ವಾರ್ತೆ) : ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯವಾಗಲಿದೆ. ಅನುಮೋದನೆಗೊಂಡ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000/- ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500/- ನಿರುದ್ಯೋಗ ಭತ್ಯ ನೀಡಲಾಗುವುದು. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
ಅರ್ಜಿ ಸಲ್ಲಿಸಲು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.
ಅರ್ಜಿ ಸಲ್ಲಿಸುವ ದಿನಾಂಕ ಡಿ. 26 ರಿಂದ ಪ್ರಾರಂಭಗೊಂಡಿದ್ದು, ಆಸಕ್ತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ಗಳೊಂದಿಗೆ ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‍ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.
--------------------

ಯುವನಿಧಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸಲು ಸೂಚನೆ : ಡಾ|| ಆರ್.ಸೆಲ್ವಮಣಿಶಿವಮೊಗ್ಗ : ಡಿಸೆಂಬರ್ 27 : (ಕರ್ನಾಟಕ ವಾರ್ತೆ) : ಕೈಗಾರಿಕಾ ಮತ್ತ...
27/12/2023

ಯುವನಿಧಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸಲು ಸೂಚನೆ : ಡಾ|| ಆರ್.ಸೆಲ್ವಮಣಿ
ಶಿವಮೊಗ್ಗ : ಡಿಸೆಂಬರ್ 27 : (ಕರ್ನಾಟಕ ವಾರ್ತೆ) : ಕೈಗಾರಿಕಾ ಮತ್ತು ತರಬೇತಿ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ ನಿರುದ್ಯೋಗಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರಾದ ಜಿಲ್ಲೆಯ ನಿರುದ್ಯೋಗಿ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಯುವನಿಧಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪದವಿ, ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರಿಗಾಗಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಪದವಿ, ಡಿಪ್ಲೋಮಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಹಿಂದಿನ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಪ್ರಸ್ತುತ ನಿರುದ್ಯೋಗಿಗಳಾಗಿರುವ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ಮಾಹಿತಿ ನೀಡುವಂತೆ ಅವರು ಸೂಚಿಸಿದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂಧಿಗಳು ಮಾಹಿತಿ ನೀಡುವಂತೆ ಸೂಚಿಸಿದರು. ಅದಕ್ಕಾಗಿ ಶಾಲೆ-ಕಾಲೇಜು ಹಂತದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಪ್ಲೇಸ್‍ಮೆಂಟ್ ಸೆಲ್‍ನ ನಿರ್ವಾಹಕರು ವಿಶೇಷ ಗಮನಹರಿಸುವಂತೆ ಅವರು ಸೂಚಿಸಿದರು. ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸೌಲಭ್ಯದ ದುರುಪಯೋಗಪಡಿಸಿಕೊಂಡಲ್ಲಿ ಅಂತಹವರನ್ನು ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದಲ್ಲದೆ ಹಣವನ್ನು ಬಡ್ಡಿಸಹಿತ ವಸೂಲಾತಿಗೆ ಕ್ರಮವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ತೇರ್ಗಡೆಯಾಗಿರುವ ವೃತ್ತಿಪರ ಕೋರ್ಸುಗಳು ಸೇರಿದಂತೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000ರೂ. ಹಾಗೂ ಡಿಪ್ಲೋಮಾ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500/-ರೂ. ಗಳ ನಿರುದ್ಯೋಗ ಭತ್ಯೆಯನ್ನು ಗರಿಷ್ಠ 2ವರ್ಷಗಳ ಕಾಲ ನೀಡಲಾಗುವುದು ಎಂದರು.
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸಿರುವವರು, ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಅಪ್ರೆಂಟಿಸ್ ವೇತನವನ್ನು ಪಡೆಯುತ್ತಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಂತಿಲ್ಲ ಎಂದವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಖಲಂದರ್‍ಖಾನ್ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೇರಿದಂತೆ ಸಂಪುಟ ಸಚಿವರ ಉಪಸ್ಥಿತಿಯಲ್ಲಿ ಜನವರಿ 12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ :...
27/12/2023

ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೇರಿದಂತೆ ಸಂಪುಟ ಸಚಿವರ ಉಪಸ್ಥಿತಿಯಲ್ಲಿ
ಜನವರಿ 12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ : ಸಚಿವ ಮಧು ಎಸ್.ಬಂಗಾರಪ್ಪ
ಶಿವಮೊಗ್ಗ : ಡಿಸೆಂಬರ್ 27 : (ಕರ್ನಾಟಕ ವಾರ್ತೆ) : 2024ರ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸೇರಿದಂತೆ ಸಚಿವ ಸಂಪುಟದ ಸದಸ್ಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದವರು ನುಡಿದರು.
ಪ್ರಗತಿ ಎಂಬುದು ಒಂದು ನಿರಂತರ ಪ್ರಕ್ರಿಯೆ. ಈ ಹಾದಿಯಲ್ಲಿ ಯಾರೂ ಅವಕಾಶ ವಂಚಿತರಾಗಬಾರದು. ಸಮಾಜದ ಪ್ರತಿಯೊಬ್ಬರಿಗೂ ಪ್ರಗತಿಯ ಫಲಗಳು ದೊರೆಯಬೇಕು ಹಾಗೂ ಅಭಿವೃದ್ಧಿಯ ಪಾಲುದಾರರಾಗಬೇಕೆಂಬ ಆಶಯ ನಮ್ಮದಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಫಲವಾಗಿವೆ ಎಂದರು.
ಯುವನಿಧಿ ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಯಾವುದೇ ಅಡಚಣೆಗಳುಂಟಾಗದಂತೆ ಕ್ರಮ ವಹಿಸಬೇಕು. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಶೇಷವಾಗಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ಅಲ್ಲಲ್ಲಿ ದೂರುಗಳು ಕೇಳಿ ಬರುತ್ತಿವೆ. ಇಂತಹ ಯಾವುದೇ ದೂರುಗಳು ಬಾರದಂತೆ, ಈ ಯೋಜನೆಯಡಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅರ್ಹರನ್ನು ಗುರುತಿಸಿ, ಯೋಜನೆಯ ವ್ಯಾಪ್ತಿಗೊಳಪಡಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಶಕ್ತಿ ಯೋಜನೆಯಡಿ ಜಿಲ್ಲೆಯ ಅನೇಕ ಕಡೆಗಳಿಂದ ಹೆಚ್ಚುವರಿ ಬಸ್‍ಗಳಿಗಾಗಿ ಬೇಡಿಕೆ ಇದ್ದು, ಸುಮಾರು 250ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಹಂತಹಂತವಾಗಿ ಒದಗಿಸುವಲ್ಲಿ ವೈಯಕ್ತಿಕವಾಗಿ ಗಮನಹರಿಸಲಾಗುವುದು ಎಂದ ಅವರು ಅಗತ್ಯವಿರುವ ಬಸ್‍ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಯಸುವ ನಿರುದ್ಯೋಗಿ ಯುವಕರು ತಮ್ಮ ಪ್ರಸ್ತಾವನೆಯನ್ನು ಇಂದಿನಿಂದಲೇ ಆನ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಸಂಖ್ಯೆಯ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾಸ್ಥ್ಯ ಜೀವನಕ್ಕೆ ಸತ್ವಯುತ ಸಿರಿಧಾನ್ಯಗಳನ್ನು ಬಳಸಿ : ಸಚಿವ ಮಧು ಎಸ್.ಬಂಗಾರಪ್ಪಶಿವಮೊಗ್ಗ : ಡಿಸೆಂಬರ್ 27 : (ಕರ್ನಾಟಕ ವಾರ್ತೆ) : ಸ್ವಾಸ...
27/12/2023

ಸ್ವಾಸ್ಥ್ಯ ಜೀವನಕ್ಕೆ ಸತ್ವಯುತ ಸಿರಿಧಾನ್ಯಗಳನ್ನು ಬಳಸಿ : ಸಚಿವ ಮಧು ಎಸ್.ಬಂಗಾರಪ್ಪ
ಶಿವಮೊಗ್ಗ : ಡಿಸೆಂಬರ್ 27 : (ಕರ್ನಾಟಕ ವಾರ್ತೆ) : ಸ್ವಾಸ್ಥ್ಯ ಜೀವನಕ್ಕೆ ಸತ್ವಯುತ ಆಹಾರ, ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳನ್ನು ಬಳಸಿ ರೋಗಮುಕ್ತ ಹಾಗೂ ಆರೋಗ್ಯವಂತ ಸಮಾಜವನ್ನು ನಿರ್ಮಿಸುವಲ್ಲಿ ಎಲ್ಲರೂ ಶ್ರಮಿಸುವ ಅಗತ್ಯವಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಕೃಷಿ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹಿಂದಿನ ಕಾಲದ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅನುಸರಿಸುತ್ತಿದ್ದ ಆಹಾರ ಪದ್ದತಿಯನ್ನು ಅನುಸರಿಸುವ ಅಗತ್ಯವಿದೆ. ರಾಗಿ, ಜೋಳ, ನವಣೆ ಮುಂತಾದ ಹೆಚ್ಚಿನ ನಾರಿನಾಂಶವಿರುವ ಆಹಾರಗಳು ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತವೆ ಎಂದವರು ನುಡಿದರು.
ಬದಲಾದ ಜೀವನಶೈಲಿಯಿಂದಾಗಿ ಎಲ್ಲರೂ ತಮ್ಮ ಆಹಾರ ಪದ್ದತಿಯನ್ನು ಮರೆತಿರುವುದು ವಿಷಾಧದ ಸಂಗತಿ. ಅನೇಕ ರೀತಿಯ ಕಾಯಿಲೆಗಳ ಹತೋಟಿಗೆ ಸಿರಿಧಾನ್ಯಗಳು ಸಹಕಾರಿಯಾಗಿವೆ. ನಾನೂ ಕೂಡ ಪ್ರತಿನಿತ್ಯ ರಾಗಿಗಂಜಿ, ರಾಗಿರೊಟ್ಟಿ ಮತ್ತು ಮುದ್ದೆ ಮುಂತಾದ ಆಹಾರವನ್ನು ಸೇವಿಸುವ ಅಭ್ಯಾಸ ಹೊಂದಿದ್ದೇನೆ. - ಸಚಿವ ಮಧು ಎಸ್.ಬಂಗಾರಪ್ಪ,
ಕೃಷಿಕರು ಕೂಡ ತಮ್ಮ ಹಿಂದಿನ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ ವಿಮುಖರಾಗಿ ಆಧುನಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಇಲ್ಲಿಯೂ ಬದಲಾವಣೆ ಅಗತ್ಯವಾಗಿದೆ. ಸಿರಿಧಾನ್ಯಗಳ ಬಳಕೆ, ಅದರ ಮಹತ್ವದ ಕುರಿತು ಜನಸಾಮಾನ್ಯರಿಗೆ ಅರಿವಿನ ಕೊರತೆ ಇದೆ. ನಮ್ಮಲ್ಲಿಯೂ ಹಳೆಯ ಹಾಗೂ ಸಾಂಪ್ರದಾಯಿಕ ಆರೋಗ್ಯಕರ ಆಹಾರ ಪದ್ದತಿಗಳಿವೆ. ಅವುಗಳನ್ನು ಬಳಸುವ ಅಗತ್ಯವಿದೆ. ಅಲ್ಲಿಯೂ ವೈದ್ಯರಿಂದ ದೂರವಿರುವ ಆಹಾರ ಪದ್ದತಿಯನ್ನು ಅನುಸರಿಸುವ ಅಗತ್ಯವಿದೆ ಎಂದರು.
ಅತೀ ಹೆಚ್ಚಿನ ಪ್ರಮಾಣದ ಪೋಷಕಾಂಶಗಳ ಖಜಾನೆ ಎನಿಸಿರುವ ಸಿರಿಧಾನ್ಯಗಳು ದೇಹವನ್ನು ಸದೃಢಗೊಳಿಸುವುದರ ಜೊತೆಗೆ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಅವರು ಮಾತನಾಡಿ, ಸಿರಿಧಾನ್ಯಗಳು ಕಡಿಮೆ ಫಲವತ್ತತೆಯ ಭೂಮಿಯಲ್ಲಿಯೂ ಸಹ ಬೆಳೆಯಲು ಸಾಧ್ಯವಾಗಿದ್ದು, ರಾಸಾಯನಿಕ ಗೊಬ್ಬರಗಳಿಲ್ಲದೆ ಬರಡು ಭೂಮಿಯಲ್ಲಿಯೂ ಸಹಜವಾಗಿ ಬೆಳೆಯಬಹುದಾಗಿದೆ. ಆದ್ದರಿಂದ ಇವುಗಳನ್ನು ಬರಗಾಲದ ಮಿತ್ರ ಎಂದೇ ಕರೆಯಲಾಗುತ್ತದೆ ಎಂದರು.
2023ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಣೆ ಮಾಡಿರುವುದರಿಂದ ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆಯಡಿ ರೈತರಿಗೆ ಮತ್ತು ಗ್ರಾಹಕರಿಗೆ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಕಾರ್ಯಕ್ರಮವನ್ನು ಮತ್ತು ಮಾಜಿ ಪ್ರಧಾನಿ ಚೌಧರಿ ಚರಣಸಿಂಗ್ ಅವರ ಜನ್ಮದಿನದ ಅಂಗವಾಗಿ ರೈತ ದಿನಾಚರಣೆಯನ್ನು ಇಂದೇ ಆಚರಿಸಲಾಗುತ್ತಿದೆ ಎಂದರು.
ಇಂದಿನ ಯುವಜನಾಂಗ ಒತ್ತಡದ ಬದುಕಿನಲ್ಲಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಾಡು ಕಟ್ಟುವ ಯುವಕರೇ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಸಿರಿಧಾನ್ಯಗಳನ್ನು ತಿನ್ನುವವರು ಆರೋಗ್ಯದಿಂದ ಸಿರಿವಂತರಾಗುವವರು ಎಂಬುವುದು ನಮ್ಮ ಗ್ರಾಮೀಣ ಜನತೆಯ ನಂಬಿಕೆ ಇದು ವೈಜ್ಞಾನಿಕವಾಗಿ ನಿಜವೂ ಹೌದು. ಈ ನಂಬಿಕೆಯೇ ಆಧುನಿಕತೆಯ ವ್ಯಸನಕ್ಕೆ ಸಿಕ್ಕ ನಗರದ ಜನತೆಯ ಜೀವನ ಶೈಲಿಗೆ ಹೊಸ ತಿರುವು ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ||ಜಗದೀಶ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹದೇವಪ್ಪ, ರೈತ ಮುಖಂಡ ಕೆ.ಟಿ.ಗಂಗಾಧರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ಸಾಧಕರಾದ 10ಮಂದಿಗೆ ಶ್ರೇóಷ್ಟ ಕೃಷಿಕ ಪ್ರಶಸ್ತಿ ಹಾಗೂ ತಲಾ ರೂ.25,000/-ಗಳ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಡಿಸೆಂಬರ್ 29ರಂದು ಕುಪ್ಪಳಿಯಲ್ಲಿ ವಿಶ್ವಮಾನವ ದಿನಾಚರಣೆ
27/12/2023

ಡಿಸೆಂಬರ್ 29ರಂದು ಕುಪ್ಪಳಿಯಲ್ಲಿ ವಿಶ್ವಮಾನವ ದಿನಾಚರಣೆ

ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ : ಸಚಿವ ಮಧು ಎಸ್.ಬಂಗಾರಪ್ಪ ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸ...
27/12/2023

ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ : ಸಚಿವ ಮಧು ಎಸ್.ಬಂಗಾರಪ್ಪ

ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಸೊರಬದ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದರು.

ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಡುವುದರ ಜೊತೆಗೆ ಸರ್ಕಾರ ಹಾಗೂ ಸ್ಥಳೀಯರ ಪೆÇ್ರೀತ್ಸಾಹವೂ ಅತ್ಯಗತ್ಯ ಎಂದರು.

ಹಿಂದೆ ಇದ್ದ ಹಳೆಯ ಜನಪದ ಕ್ರೀಡೆಗಳು ಕಣ್ಮರೆಯಾಗಿವೆ. ಮಕ್ಕಳು ದೇಶದ ಸಾಧಕರ ಸಾಲಿನಲ್ಲಿ ನಿಲ್ಲುವಂತಿಲ್ಲ ಸಕಾಲಿಕ ಪೆÇ್ರೀತ್ಸಾಹ ಅಗತ್ಯ. ಸ್ಥಳೀಯವಾಗಿಯೂ ಜಗತ್ತಿಗೆ ಪ್ರೇರಣೆಯಾಗಬಹುದಾದ ಪ್ರತಿಭೆಗಳು ಇವೆ ಎಂದರು.

ಈ ಶಾಲೆಗಳಲ್ಲಿ ಪಠ್ಯ ವಿಷಯಗಳಲ್ಲದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಎಲ್ಲಾ ಪ್ರಕಾರದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಶಿಕ್ಷಣ ಪಡೆಯುವ ಮಕ್ಕಳಿಗೆ ಸಮಾಜದ ಎಲ್ಲಾ ಕ್ಷೇತ್ರಗಳ ಪರಿಚಯವಾಗಲಿದೆ ಮಾತ್ರವಲ್ಲ ಅವರ ಸವಾರ್ಂಗೀಣ ವಿಕಾಸಕ್ಕೆ ಅವಕಾಶವಾಗಲಿದೆ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತತೆ ಇರುವ 5500 ದೈಹಿಕ ಶಿಕ್ಷಕರು ಹಾಗೂ 40,000ಕ್ಕೂ ಹೆಚ್ಚಿನ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ರಾಜ್ಯದ 1.80 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದವರು ನುಡಿದರು

ಮುಂದಿನ ವರ್ಷದ ಡಿಸೆಂಬರ್ 31ರೊಳಗಾಗಿ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳು ನೆಲದ ಮೇಲೆ ಕೂರದಂತೆ ಅಗತ್ಯ ಬೆಂಚು ಕುರ್ಚಿ ಟೇಬಲ್ ಗಳನ್ನು ಒದಗಿಸಲಾಗುವುದು ಎಂದವರು ನುಡಿದರು

ಇದೇ ಸಂದರ್ಭದಲ್ಲಿ ರಾಜ್ಯದ ಬೆಳಗಾವಿ ಕಲಬುರ್ಗಿ ಮೈಸೂರು ಮತ್ತು ಬೆಂಗಳೂರು ವಿಭಾಗಗಳಿಂದ ಆಗಮಿಸಿದ ಕ್ರೀಡಾಳುಗಳಿಗೆ ಉತ್ತಮ ಗುಣಮಟ್ಟದ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ನೀಡುವುದಾಗಿ ಸಚಿವರು ಘೋಷಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಡಯಟ್ ಪ್ರಾಚಾರ್ಯ ಬಸವರಾಜಪ್ಪ ಬಿಆರ್., ತಹಶೀಲ್ದಾರ್ ಹೆಚ್ಚಿಗೆ ಸರಕಾವಸ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಆರ್.
ಪುರಸಭಾ ಸದಸ್ಯರಾದ ಶ್ರೀಮತಿ ಆಫ್ರಿನ್ ಮೆಹಬೂಬ್ ಬಾμÁ, ಶ್ರೀಮತಿ ಶ್ರೀಮತಿ ಪ್ರೇಮ ಟೋಕಪ್ಪ, ಅನ್ಸರ್ ಅಹಮದ್ ಶ್ರೀಮತಿ ಸುಲ್ತಾನ ಬೇಗಂ ಶ್ರೀಮತಿ ಶಿವರಂಜಿನಿ ಪ್ರವೀಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

21/12/2023

ಅವಧಿ ವಿಸ್ತರಣೆ
--------------------
ಶಿವಮೊಗ್ಗ, ಡಿಸೆಂಬರ್ 21 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ. 27ರವರೆಗೆ ವಿಸ್ತರಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಜನವರಿ-2024 ರಿಂದ ಡಿಸೆಂಬರ್-2024ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:27/12/2023 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆಂಚೆ: vಚಿಡಿಣhಚಿbhಚಿvಚಿಟಿsmg1@gmಚಿiಟ.ಛಿom ನ್ನು ಸಂಪರ್ಕಿಸಿ.
--------------------

ಅಪರಿಚಿತ ವ್ಯಕ್ತಿ ಸಾವು: ವಾರಸ್ಸುದಾರರ ಪತ್ತೆಗೆ ಮನವಿ-----------------------------ಶಿವಮೊಗ್ಗ, ಡಿಸೆಂಬರ್ 16, (ಕರ್ನಾಟಕ ವಾರ್ತೆ) : ಶಿವ...
16/12/2023

ಅಪರಿಚಿತ ವ್ಯಕ್ತಿ ಸಾವು: ವಾರಸ್ಸುದಾರರ ಪತ್ತೆಗೆ ಮನವಿ
-----------------------------
ಶಿವಮೊಗ್ಗ, ಡಿಸೆಂಬರ್ 16, (ಕರ್ನಾಟಕ ವಾರ್ತೆ) : ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿ ಕುಳಿತಲ್ಲೇ ಮೃತಪಟ್ಟಿದ್ದು, ಈತನ ವಿಳಾಸ, ಹೆಸರು, ವಾರಸ್ಸುದಾರರು ಇರುವುದಿಲ್ಲ. ಮೃತದೇಹವು ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿರುತ್ತದೆ.
ಅಪರಿಚಿತ ವ್ಯಕ್ತಿಯು ಸುಮಾರು 5.8 ಅಡಿ ಎತ್ತರ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೃತನ ಕುತ್ತಿಗೆಯ ಎಡಭಾಗದಲ್ಲಿ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಹಸಿರು ನೀಲಿ ಬಿಳಿ ಮಿಶ್ರಿತ ಬಣ್ಣದ ಟೀಶರ್ಟ್ ಹಾಗೂ ಕಪ್ಪು ಬಣ್ಣದ ಬರ್ಮುಡಾ ಚಡ್ಡಿ, ಕಪ್ಪು ಬಿಳಿ ಮಿಶ್ರಿತ ಬಣ್ಣದ ಟವೇಲ್ ಧರಿಸಿರುತ್ತಾರೆ.
ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ದೊಡ್ಡಪೇಟೆ ಪೆÇಲೀಸ್ ಠಾಣಾ ದೂ.ಸಂ : 08182-261414, 9611761255 ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೆÇಲೀಸ್ ಠಾಣೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------------

16/12/2023

ಅವಧಿ ವಿಸ್ತರಣೆ
-----------------
ಶಿವಮೊಗ್ಗ, ಡಿಸೆಂಬರ್ 16, (ಕರ್ನಾಟಕ ವಾರ್ತೆ) : ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಅರ್ಹ ಹಿಂದುಳಿದ ವರ್ಗಗಳ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅನ್‍ಲೈನ್ ಮೂಲಕ ಅರ್ಜಿಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 25 ರವರೆಗೆ ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
--------------------

15/12/2023

ಬಿ.ಹೆಚ್.ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ
-----------------------------------------
ಶಿವಮೊಗ್ಗ, ಡಿಸೆಂಬರ್ 15: (ಕರ್ನಾಟಕ ವಾರ್ತೆ) : ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೆಚ್. ರಸ್ತೆಯಲ್ಲಿ ಎ.ಎ.ಸರ್ಕಲ್ ವೆಂಕಟೇಶ್ವರ ಸ್ವೀಟ್ ಹೌಸ್ ನಿಂದ ಶಿವಪ್ಪನಾಯಕ ಸರ್ಕಲ್ ಜ್ವರಾರಿ ಮೆಡಿಕಲ್ ಶಾಪ್‍ವರೆಗೆ ರಸ್ತೆಯ ಅಧಿಕ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರ ಅಡಚಣೆಯುಂಟಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ವಿಧದ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಅಧಿಸೂಚನೆ ಹೊರಡಿಸಿ ಕೆಳಕಂಡಂತೆ ಆದೇಶ ನೀಡಿರುತ್ತಾರೆ.
------------------

15/12/2023

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿ
ಶಿವಮೊಗ್ಗ, ಡಿಸೆಂಬರ್ 15: (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಡಿ. 16 ಮತ್ತು 17 ರಂದು ಪರೀಕ್ಷೆ ನಡೆಯಲಿದ್ದು, ನಗರದ ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಿ.ಆರ್.ಪಿ.ಸಿ. 1973ರ ಕಲಂ 144ರನ್ವಯ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದಾರೆ. .
ಡಿ. 16 ರಂದು ಮಧ್ಯಾಹ್ನ 2.00 ರಿಂದ 4.00 ರವರೆಗೆ ನಗರದ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನದ ಹತ್ತಿರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗದಲ್ಲಿ ಹಾಗೂ ಡಿ.17 ರಂದು ಬೆಳಗ್ಗೆ 10.00 ರಿಂದ 11.30ರವರೆಗೆ ನಗರದ ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನದ ಹತ್ತಿರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗದಲ್ಲಿ ಮತ್ತು ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧ್ಯಾಹ್ನ 2.00 ರಿಂದ ಸಂಜೆ 4.00 ರವೆಗೆ ವಿದ್ಯಾನಗರ ಸಹ್ಯಾದ್ರಿ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್ ಮತ್ತು ಸೈನ್ಸ್ ಫೀಲ್ಡ್ ಸರ್ಕಾರಿ ಪಿ.ಯು.ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ.
ಪರೀಕ್ಷಾ ಸಮಯದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ/ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಫಾಸಲೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಐದು ಅಥವಾ ಐದಕ್ಕಿಂತ ಹೆಚು ಜನರು ಮೇಲ್ಕಂಡ ನಿಷೇಧಿತ ವ್ಯಾಪ್ತಿಯಲ್ಲಿ ಸೇರುವುದನ್ನು ನಿಷೇಧಿಸಿದೆ. ಟೈಪಿಂಗ್, ಜೆರಾಕ್ಸ್, ಹಾಗೂ ಫ್ಯಾಕ್ಸ್ ಅಂಗಡಿಗಳು ಪರೀಕ್ಷಾ ದಿನಾಂಕ ಮತ್ತು ಸಮಯಗಳ ಅವಧಿಯಲ್ಲಿ ತೆರೆಯುವುದನ್ನು ಪ್ರತಿಬಂಧಿಸಿದೆ. ಮೊಬೈಲ್ ಬಳಕೆ ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿದೇರ್ಶನಗಳನ್ನು ನೀಡುವುದು.
----------------------------

15/12/2023

ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ
---------------------------
ಶಿವಮೊಗ್ಗ, ಡಿಸೆಂಬರ್ 15: (ಕರ್ನಾಟಕ ವಾರ್ತೆ): ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ. 16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ, ಡಿಸೆಂಬರ್ 15: (ಕರ್ನಾಟಕ ವಾರ್ತೆ): ಡಿ. 14 ರಂದು ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ ಭದ್ರ...
15/12/2023

ಶಿವಮೊಗ್ಗ, ಡಿಸೆಂಬರ್ 15: (ಕರ್ನಾಟಕ ವಾರ್ತೆ): ಡಿ. 14 ರಂದು ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ ಭದ್ರಾವತಿ ವಿ.ಎಸ್.ಐ.ಎಲ್. ವತಿಯಿಂದ ಶಿವಮೊಗ್ಗ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 43 ವಿಕಲಚೇತನ ಮಕ್ಕಳಿಗೆ ಉಚಿತ ಸಾಧನ ಸಲಕರಣೆಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿಗಳು, ಉಪನಿರ್ದೇಶಕರು, ಜಿಲ್ಲಾ ಉಪ ಸಮನ್ವಯಾಧಿಕಾರಿಗಳು, ಸಮನ್ವಯಾಧಿಕಾರಿಗಳೂ, ವಿಎಸ್‍ಐಎಲ್‍ನ ಕಾರ್ಯ ನಿರ್ವಾಹಕ ನಿರ್ದೇಶಕರು, ಮುಖ್ಯ ಜನರಲ್ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.

ಕಾಣೆಯಾಗಿದ್ದಾರೆಶಿವಮೊಗ್ಗ; ಡಿಸೆಂಬರ್ 04:  (ಕರ್ನಾಟಕ ವಾರ್ತೆ): ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ ಗೌಡ ಬಿನ್ ಕೆಂಪೇಗೌಡ ಎಂಬ 57 ವರ್ಷದ...
04/12/2023

ಕಾಣೆಯಾಗಿದ್ದಾರೆ
ಶಿವಮೊಗ್ಗ; ಡಿಸೆಂಬರ್ 04: (ಕರ್ನಾಟಕ ವಾರ್ತೆ): ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ ಗೌಡ ಬಿನ್ ಕೆಂಪೇಗೌಡ ಎಂಬ 57 ವರ್ಷದ ವ್ಯಕ್ತಿಯು ನ.21 ರಂದು ಮನೆಯಿಂದ ಹೊರಗಡೆ ಹೋದವರು ಈವರೆಗೆ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, 4.5 ಅಡಿ ಎತ್ತರ, ಕೋಲು ಮುಖ ಹೊಂದಿದ್ದು, ಕನ್ನಡ ಮಾತಾನಾಡುತ್ತಾರೆ. ಕಾಫಿ ಬಣ್ಣದ ತುಂಬ ತೋಳಿನ ಶರ್ಟ್, ನೀಲಿ ಬಣ್ಣದ ಪಂಚೆ ಧರಿಸಿರುತ್ತಾರೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ನೀಡಿದೆ. ( ಛಾಯಾಚಿತ್ರ ಲಗತ್ತಿಸಿದೆ)
===========================

04/12/2023

ಡಿ.05 : ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ; ಡಿಸೆಂಬರ್ 04, (ಕರ್ನಾಟಕ ವಾರ್ತೆ): ಆರ್. ಎಂ.ಎಲ್. ನಗರದ ಮುಖ್ಯರಸ್ತೆ 11ಕೆ.ವಿ. ವಿದ್ಯುತ್ ಮಾರ್ಗ ಕಾಮಗಾರಿ ಇರುವುದರಿಂದ ಡಿ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಎಂ.ಎಫ್-12ರ ವ್ಯಾಪ್ತಿಯ ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಕಿನಿ ಲೇಔಟ್, ಮಿಳಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

04/12/2023

ಡಿ.06 : ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ
----------------
ಶಿವಮೊಗ್ಗ; ಡಿಸೆಂಬರ್ 04: (ಕರ್ನಾಟಕ ವಾರ್ತೆ): ಶಾಂತಿನಗರದ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.06 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಶೃತಿ ಮೋಟಾರ್ಸ್, ಚೌಡೇಶ್ವರಿ ಕಾಲೋನಿ, ಪಾಪ್ಯುಲರ್ ರೈಸ್ ಮಿಲ್, ಸೇವಾಲಾಲ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
===========================

02/12/2023

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ
---------------------------
ಶಿವಮೊಗ್ಗ, ಡಿಸೆಂಬರ್ 02: (ಕರ್ನಾಟಕ ವಾರ್ತೆ) : ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.08 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.
ಶಿವಮೊಗ್ಗದಲ್ಲಿ ಪುರುಷ 39, ಮಹಿಳೆ 06 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: -9880705966. ಕುಂಸಿ ಪುರುಷ 05 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಪುರುಷ 08 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 17, ಮಹಿಳೆ 02 ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಪುರುಷ 06, ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಪುರುಷ 11 ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಪುರುಷ 13 ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 05 ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 07 ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಶಿಕಾರಿಪುರ ಪುರುಷ 09 ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 05 ಘಟಕಾಧಿಕಾರಿ ಸೈಯದ್ ಇಸಾಕ್ -8861492078. ಹೊಸನಗರ ಪುರುಷ 11 ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‍ಪೇಟೆ ಪುರುಷ 11 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಪುರುಷ 14 ಘಟಕಾಧಿಕಾರಿ ಬಿ.ರೇವಣಪ್ಪ -9945066084.
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಮದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರಾದ ತಿಳಿಸಿದ್ದಾರೆ.
==

Address


Telephone

+918182278638

Website

Alerts

Be the first to know and let us send you an email when D I P R, Shivamogga posts news and promotions. Your email address will not be used for any other purpose, and you can unsubscribe at any time.

Contact The Business

Send a message to D I P R, Shivamogga:

Videos

Shortcuts

  • Address
  • Telephone
  • Alerts
  • Contact The Business
  • Videos
  • Claim ownership or report listing
  • Want your business to be the top-listed Media Company?

Share