Akhada Media and Entertainment

  • Home
  • Akhada Media and Entertainment

Akhada Media and Entertainment Contact information, map and directions, contact form, opening hours, services, ratings, photos, videos and announcements from Akhada Media and Entertainment, Media/News Company, .

ದಿಗಂತ್ ಜೊತೆ ಸೇರಿ 'ಎಡಗೈಯೇ ಅಪಘಾತಕ್ಕೆ ಕಾರಣ'ವಾದ ನಿರೂಪ್ ಭಂಡಾರಿ'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದ ವಿಶೇಷ ಪಾತ್ರದಲ್ಲಿ ಸ್ಯಾಂಡಲ್‌ವುಡ್ ...
27/09/2023

ದಿಗಂತ್ ಜೊತೆ ಸೇರಿ 'ಎಡಗೈಯೇ ಅಪಘಾತಕ್ಕೆ ಕಾರಣ'ವಾದ ನಿರೂಪ್ ಭಂಡಾರಿ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದ ವಿಶೇಷ ಪಾತ್ರದಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದ ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ

ದಿಗಂತ್​ ಮಂಚಾಲೆ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾ ವಿಭಿನ್ನವಾದ ಕಾನ್ಸೆಪ್ಟ್​ ಮೂಲಕ ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇತ್ತೀಚಿಗಷ್ಟೆ ಆಗಸ್ಟ್​ 13ರಂದು ‘ವಿಶ್ವ ಎಡಗೈ ದಿನ’ದ ದಿನ ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿದೆ. ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ 'ಎಡಗೈ' ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ಯಾರು ಅಲ್ಲ 'ರಂಗಿತರಂಗ' ಖ್ಯಾತಿಯ ನಟ ನಿರೂಪ್ ಭಂಡಾರಿ. ಮೊದಲ ಬಾರಿಗೆ ನಿರೂಪ್ ಮತ್ತು ದಿಗಂತ್ ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್.

ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ಇನ್ನು ಯಂಗ್ ಅಂಡ್ ಎನರ್ಜಿಟಿಕ್ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು
‘ಎಡಗೈ ಅಪಘಾತಕ್ಕೆ ಕಾರಣ’ಸಿನಿಮಾತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್.

‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಅಂದಹಾಗೆ ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ.‘ಹೈಫನ್ ಪಿಕ್ಚರ್ಸ್ ಬ್ಯಾನರ್’ಅಡಿಯಲ್ಲಿ 'ಅಂಬಿ ನಿಂಗ್ ವಯಸ್ಸಾಯ್ತೋ' ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Welcome onboard 💥😍

A story that'll make   unforgettable forever🔥Releasing Worldwide in Kannada, Telugu, Hindi, Tamil, Malayalam on November...
27/09/2023

A story that'll make unforgettable forever🔥

Releasing Worldwide in Kannada, Telugu, Hindi, Tamil, Malayalam on November 17th 🦋

An 's Vision 🎬
An Musical 🥁

‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನ...
27/09/2023

‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…

ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

ಹಿರಿಯ ನಟಿ ಮಹಾಲಕ್ಷ್ಮೀ ಮಾತನಾಡಿ, ನಾನು ಎಲ್ಲಾ ಭಾಷೆಯಲ್ಲಿ ಎಲ್ಲಾ ಹೀರೋಗಳ ಜೊತೆ ಸಿನಿಮಾ ಮಾಡಿದ್ದೇನೆ. ಎಲ್ಲವೂ ಟೀಂ ವರ್ಕ್..ನಮ್ಮ ಮನೆಯಲ್ಲಿ ಲಾಫಿಂಗ್ ಬುದ್ಧ ಇಟ್ಕೊಂಡು ನಗುತ್ತಾ ಇರುವುದು ಸಾಕಾಗಲ್ಲ. ಮೂರು ಕೋತಿ ನೆನಪು ಇದೆಯಲ್ಲಾ? ಕೆಟ್ಟದನ್ನು ಕೇಳಬಾರದು. ಕೆಟ್ಟದನ್ನು ನೋಡಬಾರದು..ಕೆಟ್ಟದನ್ನು ಮಾಡಬಾರದು. ಅದನ್ನು ನಿಮ್ಮ ಮಕ್ಕಳಿಗೆ ನೆನಪಿಸಿ. ಅವರ ಜೀವನ ಚೆನ್ನಾಗಿರುತ್ತದೆ. ಅದನ್ನೂ ಹೇಳಿಕೊಡುವುದೇ TRP ರಾಮ. ಎಂಟರ್ ಟೈನ್ಮೆಂಟ್ ಇದೆ. ಕ್ವಾಲಿಟಿ ಇದೆ. ನೀತಿ ಇದೆ. ಆ ನೀತಿ ನಮ್ಮ ಜನರೇಷನ್ ಗೆ ಸಿಗಬೇಕು. ನಮ್ಮ ಸರ್ಕಾರ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆದ್ರೆ ಅದನ್ನು ಫಾಲೋ ಮಾಡಲು ಆಗ್ತಿಲ್ಲ. TRP ರಾಮ ಬರೀ ಸಿನಿಮಾವಲ್ಲ. ಅದೊಂದು ಜೀವನ ಎಂದು ತಿಳಿಸಿದರು.

ನಿರ್ದೇಶಕ ಕಂ ನಟ ರವಿ ಪ್ರಸಾದ್ ಮಾತನಾಡಿ, ಒಳ್ಳೆ ಬಜೆಟ್ ಗೆ ಸಿನಿಮಾ ಮಾಡಲು ತಯಾರಿ ನಡೆಸಿದಾಗ ಕಥೆ ಸಿಗುತ್ತಿರಲಿಲ್ಲ. ಅಂದರೆ ಬಜೆಟ್ ಗೆ ಹೊಂದಿಸಲು ಆಗುತ್ತಿರಲ್ಲ. ಆಗ ಹೊಳೆದಿದ್ದೇ TRP ರಾಮ ಕಥೆ. ರಾಮನ ನಾನೇ ಆ ಪಾತ್ರ ಮಾಡಬೇಕು ಎಂದು ಇರಲಿಲ್ಲ. ಈ ರೀತಿ ಕಂಟೆಂಟ್ ಇರುವ ಸಿನಿಮಾವನ್ನು ಯಾರ ಮೂಲಕ ಹೇಳಿಸಬೇಕು ಎಂದು ಹುಡುಕುತ್ತಿದ್ದೇವೆ. ಆಗ ತಲೆಗೆ ಬಂದಿದ್ದು ಮಹಾಲಕ್ಷ್ಮೀ ಮೇಡಂ. ಕಮರ್ಷಿಯಲ್ ಜೊತೆ ಒಂದೊಳ್ಳೆ ಸಂದೇಶ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಸೆನ್ಸಾರ್ ಆಗಬೇಕಿದೆ. ಅಕ್ಟೋಬರ್ ಮೊದಲ ವಾರ ತೆರೆಗೆ ತರುವ ಪ್ರಯತ್ನ ನಡೆಯುತ್ತದೆ ಎಂದು ತಿಳಿಸಿದರು.

ಹಿರಿಯ ಕಲಾವಿದರಾದ ಓಂ ಸಾಯಿ ಪ್ರಕಾಶ್ ಮಾತನಾಡಿ, ನೈಜ ಘಟನೆಗಳನ್ನು ನಾವು ತೆಗೆದುಕೊಂಡಾಗ ಅದು ಅದು ಹೃದಯಕ್ಕೆ ಹತ್ತಿರವಾಗುತ್ತದೆ. ಟ್ರೇಲರ್ ನೋಡುವಾಗ ತುಂಬಾ ನೋವು ಅನಿಸಿತು. ಸಮಾಜದಲ್ಲಿ ಹೆಣ್ಣನ್ನು ಬೇರೆ ರೀತಿ ನೋಡುವ ಸನ್ನಿವೇಶವಿದೆ. ಸರ್ಕಾರ ಎಷ್ಟು ಕಾನೂನು ಮಾಡುತ್ತಿದ್ದೆ. ಆದರೂ ರಾಕ್ಷಸ ಮನಸ್ಸು ತಡೆಯುತ್ತಿಲ್ಲ. ದಿನದಿಂದಕ್ಕೆ ಈ ರೀತಿ ಹೆಚ್ಚಾಗುತ್ತಿವೆ. ನಾಯಕನೋ ಖಳನಾಯಕನೋ ಗೊತ್ತಿಲ್ಲ. ಕಲಾವಿದರು ಯಾವ ಪಾತ್ರವಾದರೂ ನ್ಯಾಯ ಒದಗಿಸುತ್ತಾರೆ. ಮಹಾಲಕ್ಷ್ಮೀ ತಂದೆ-ತಾಯಿ ಇಬ್ಬರು ಮಹಾನ್ ನಟರು. ಅವರ ತಾಯಿ ಜೊತೆ ತೆಲುಗು ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದೇನೆ. ಮಹಾಲಕ್ಷ್ಮೀ ನೋಡಿದ ತಕ್ಷಣ ನಿಮ್ಮ ತಾಯಿ ನೆನಪಾಗ್ತಿದ್ದಾರೆ ಎಂದೆ. ಎಮೋಷನ್ ಸೀನ್ಸ್ ಅದ್ಭುತವಾಗಿ ಮಾಡುತ್ತಾರೆ. ನಾಯಕನ ಜೀವನದಲ್ಲಿ ಏನಾಯ್ತೋ ಗೊತ್ತಿಲ್ಲ. ನಾಯಕನ ಹೆಸರು ರಾಮ ನೋಡಲು ರಾವಣ ತರ ಕಾಣುತ್ತಾನೆ. ಚಿತ್ರ ನೋಡಿದರೇ ಎಲ್ಲವೂ ಗೊತ್ತಾಗಲಿದೆ. ಇಡೀ TRP ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ನಟಿ ಸ್ಪರ್ಶ ಮಾತನಾಡಿ, ಈ ಸಿನಿಮಾ ಒಪ್ಪಿಕೊಳ್ಳಲು ಮಹಾಲಕ್ಷ್ಮೀ ಮೇಡಂ ಕಾರಣ. ಅವರ ಕಂಬ್ಯಾಕ್ ಚಿತ್ರ. ಅಂತಹ ಲೆಜೆಂಡ್ ಜೊತೆ ಕೆಲಸ ಮಾಡಲು ಎಲ್ಲರಿಗೂ ಅವಕಾಶ ಸಿಗಲ್ಲ. ಪ್ರವೀಣ್ ಸೂಡಾ ಇದಕ್ಕೆ ಸಂಭಾಷಣೆ ಬರೆದಿದ್ದಾರೆ. ಅವರು ಕಥೆ ಹೇಳಿದಾಗ ತುಂಬಾ ಚೆನ್ನಾಗಿದೆ ಅನಿಸಿತು. ತುಂಬಾ ಫಾಸ್ಟ್ ಯುಗದಲ್ಲಿ ಚಿಕ್ಕಪುಟ್ಟ ತಪ್ಪುಗಳಿಂದ ಎಷ್ಟು ದೊಡ್ಡ ಪ್ರಮಾದವಾಗುತ್ತದೆ ಅನ್ನೋದು ಚಿತ್ರದ ಒಂದು ಎಳೆ. ಅದನ್ನು ತುಂಬಾ ಅದ್ಭುತವಾಗಿ ಚಿತ್ರೀಕರಿಸಿದ್ದಾರೆ ಎಂದರು.

ಅಶುತೋಶ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ TRP ರಾಮ ಸಿನಿಮಾದಲ್ಲಿ ರವಿಪ್ರಸಾದ್‌ ನಟಿಸಿ, ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಪ್ರಯತ್ನ. ಮಹಾಲಕ್ಷ್ಮೀ ತಾಯಿ ಪಾತ್ರದಲ್ಲಿ, ಪತ್ರಕರ್ತೆಯಾಗಿ ಸ್ಪರ್ಶಯಾಗಿ ನಟಿಸಿದ್ದಾರೆ. ರಾಜ್ ಗುರು ಹೊಸಕೋಟೆ ಸಂಗೀತ, ಸುನಿಲ್ ಕಶ್ಯಪ್ ಸಂಕಲನ, ಗುರುಪ್ರಸಾದ್ ಛಾಯಾಗ್ರಹಣ, ರಾಕೇಶ್ ಆಚಾರ್ಯ ಬಿಜಿಎಂ ಸಿನಿಮಾಕ್ಕಿದೆ. ಸೆನ್ಸಾರ್ ಗಾಗಿ ಕಾಯ್ತಿರುವ TRP ರಾಮ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದ್ದಾನೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕ್ಷಣಗಣನೆ..ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಿಲ್ಪಾ ಶ್ರೀನಿವಾಸ್ ಮಕ್ಕಳ ಕ್ಷೇಮಾಭಿವೃದ್ಧಿ ಟ...
22/09/2023

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕ್ಷಣಗಣನೆ..ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಶಿಲ್ಪಾ ಶ್ರೀನಿವಾಸ್ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭ...ಹತ್ತು ಲಕ್ಷ ಬಿಡುಗಡೆ

ಕನ್ನಡ ಚಿತ್ರರಂಗ ಮಾತೃ ಸಂಸ್ಥೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಇದೇ 23ಕ್ಕೆ ಫಿಲ್ಮ್ ಚೇಂಬರ್ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ಅಧ್ಯಕ್ಷ ಸ್ಥಾನದಲ್ಲಿ ನಿರ್ಮಾಪಕ ಕಂ ವಿತರಕ ಶಿಲ್ಪಾ ಶ್ರೀನಿವಾಸ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರ್ತಿದೆ. ಈಗಾಗ್ಲೇ ಭರದಿಂದ ಪ್ರಚಾರ ನಡೆಸಿರುವ ಶಿಲ್ಪಾ ಶ್ರೀನಿವಾಸ್ ಅವರಿಗೆ ಮಂಡಳಿಗೆ ಅಧ್ಯಕ್ಷರಾದ ಭಾ.ಮಾ.ಹರೀಶ್ ತಂಡ ಸೇರಿದಂತೆ ಹಲವರು ಸಾಥ್ ಕೊಟ್ಟಿದ್ದಾರೆ.

ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್...10 ಲಕ್ಷ ಮೀಸಲು

ವಾಣಿಜ್ಯ ಮಂಡಳಿ ಸದಸ್ಯರ ಕುಟುಂಬ ಮತ್ತು ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿರುವ ಶಿಲ್ಪಾ ಶ್ರೀ‌ನಿವಾಸ್, ಅದಕ್ಕಾಗಿ ಹತ್ತು ಲಕ್ಷ ಮೀಸಲಿಟ್ಟಿದ್ದಾರೆ. ಇಡೀ ಚಿತ್ರೋದ್ಯಮಕ್ಕೆ ಈ ಟ್ರಸ್ಟ್ ಬೆಳಕಾಗಲಿ. ಯಾರೇ ಅಧ್ಯಕ್ಷರು ಬಂದರು ಮುಂದುವರೆಸಿಕೊಂಡು ಹೋಗಲಿ.. ತಾವು ಮಂಡಳಿ ಅಧ್ಯಕ್ಷ ಸ್ಥಾನಕ್ಕೇರಿದರೆ ಮೊದಲು ಇದನ್ನು ಜಾರಿಗೆ ತರುತ್ತೇವೆ ಎಂದರು.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಲ್ಪಾ ಶ್ರೀನಿವಾಸ್, 1976ರಿಂದ ಚಿತ್ರರಂಗದಲ್ಲಿ ಸಕ್ರಿಯನಾಗಿದ್ದೇನೆ. ನಿರ್ಮಾಪಕನಾಗಿ, ವಿತರಕನಾಗಿ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಈ ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದರು.

ಹರೀಶ್ ಕಳೆದ 40 ವರ್ಷಗಳಿಂದ ಕನ್ನಡ ಚಲನಚಿತ್ರರಂಗದಲ್ಲಿ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿರುವ ಶಿಲ್ಪಾ ಶ್ರೀನಿವಾಸ್, 600ಕ್ಕೂ ಹೆಚ್ಚು ಸಿನಿಮಾಗಳನ್ನು ವಿತರಣೆ ಮಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ , ಶಂಕರ್ ನಾಗ್ , ಅಂಬರೀಶ್, ಶಿವಣ್ಣ ಜೊತೆ ಕೆಲಸ ಮಾಡಿರುವ ಅವರು, ಪ್ರಜಾಪ್ರಭುತ್ವ, ಪರ್ವ, ರೋಮಿಯೊ ಜೂಲಿಯೆಟ್, ಉಪೇಂದ್ರ ಅಂತ ಇನ್ನು ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಝೀರೋನಿಂದ ನಿರ್ಮಾಪಕನಾಗಿ, ವಿತರಕನಾಗಿ, ಹಂಚಿಕೆದಾರನಾಗಿ ಇಲ್ಲಿಯವರೆಗೂ ಚಿತ್ರರಂಗಕ್ಕೆ ಶ್ರಮಿಸಿದ್ದಾರೆ.

ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ ಸಿನಿಮಾಗೆ ನಾಯಕಿ...
22/09/2023

ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.

ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರೀ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಚೈ ಮತ್ತು ಮಲರ್ ಬ್ಯೂಟಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.

ಹಳ್ಳಿ ಸೊಗಡು...ಸೋಮು ಬ್ಯಾಂಡು...ಹೇಗಿದೆ ಸೂರಿ ಶಿಷ್ಯನ ಚೊಚ್ಚಲ ಸಿನಿಮಾದ ಟೈಟಲ್ ಟ್ರ್ಯಾಕ್?ಸೋಮು ಸೌಂಡ್ ಇಂಜಿನಿಯರ್ ಸಿನಿಮಾದ ಮೊದಲ ಹಾಡು ಅನಾ...
09/09/2023

ಹಳ್ಳಿ ಸೊಗಡು...ಸೋಮು ಬ್ಯಾಂಡು...ಹೇಗಿದೆ ಸೂರಿ ಶಿಷ್ಯನ ಚೊಚ್ಚಲ ಸಿನಿಮಾದ ಟೈಟಲ್ ಟ್ರ್ಯಾಕ್?

ಸೋಮು ಸೌಂಡ್ ಇಂಜಿನಿಯರ್ ಸಿನಿಮಾದ ಮೊದಲ ಹಾಡು ಅನಾವರಣ... ಇದು ಸೂರಿ ಶಿಷ್ಯನ ಚೊಚ್ಚಲ ಪ್ರಯತ್ನ

ಉತ್ತರ ಕರ್ನಾಟಕದ ಸೊಗಡಿನ ಸಿನಿಮಾ ಸೋಮು ಸೌಂಡ್ ಇಂಜಿನಿಯರ್...ಸುಕ್ಕ ಸೂರಿ ಗರಡಿಯಲ್ಲಿ ಪಳಗಿರುವ ಅಭಿ ಚೊಚ್ಚಲ ಹೆಜ್ಜೆ ಇದು. ವಿಭಿನ್ನ ಶೀರ್ಷಿಕೆ ಜೊತೆಗೆ ವಿಭಿನ್ನ ಕಥಾಹಂದರ ಹೊಂದಿರುವ ಸೋಮು ಸೌಂಡ್ ಇಂಜಿನಿಯರ್ ಸಿನಿಮಾದ ಮೊದಲ ಗಾನಲಹರಿ ಅನಾವರಣಗೊಂಡಿದೆ.

ಎ2 ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಸೋಮು ಸೌಂಡ್ ಇಂಜಿನಿಯರ್ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.
ಧನಂಜಯ್ ರಂಜನ್ ಕ್ಯಾಚಿ ಮ್ಯಾಚಿ ಸಾಹಿತ್ಯದ ಹಾಡಿಗೆ ಸ್ವರೂಪ್ ಖಾನ್ ಧ್ವನಿಯಾಗಿ, ಚರಣ್ ರಾಜ್ ಟ್ಯೂನ್ ಹಾಕಿದ್ದಾರೆ. ನಾಯಕ ಸೋಮು ಹಾವ-ಭಾವ, ವರ್ತನೆಯನ್ನು ಈ ಹಾಡಿನಲ್ಲಿ ಸೊಗಸಾಗಿ ಕಟ್ಟಿಕೊಡಲಾಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿರುವ ಹಾಡಿಗೆ ಚರಣ್ ಅದ್ಭುತವಾದ ಮ್ಯೂಸಿಕ್ ಟಚ್ ಕೊಟ್ಟಿದ್ದು, ಶ್ರೇಷ್ಠ ಅಭಿನಯ ಅಮೋಘವಾಗಿದೆ.

ಸಲಗದ ಕೆಂಡ ಖ್ಯಾತಿಯ ಶ್ರೇಷ್ಠ ನಾಯಕನಾಗಿ, ಶೃತಿ ಪಾಟೀಲ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜಹಾಂಗೀರ್, ಅಪೂರ್ವ,ಯಶ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ.

ವೈದ್ಯರಾಗಿರುವ ಕ್ರಿಸ್ಟೋಪರ್ ಕಿಣಿ ಸೋಮ ಸೌಂಡ್ ಇಂಜಿನಿಯರ್ ಗೆ ಹಣ ಹಾಕಿದ್ದು, ಮಾಸ್ತಿ ಮಾತು ಪೊಣಿಸಿದ್ದಾರೆ. ಶಿವಸೇನಾ ಕ್ಯಾಮೆರಾ ಕೈಚಳಕ, ಚರಣ್ ಸಂಗೀತದ ಪುಳಕ ಚಿತ್ರದ ಫ್ಲಸ್ ಪಾಯಿಂಟ್. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಇಳಕಲ್ ಗಂಜಿಹಾಳ ಕೂಡಲಸಂಗಮದ ಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಕಡ್ಡಿಪುಡಿ, ಕೆಂಡಸಂಪಿಗೆ, ದೊಡ್ಡಮನೆ ಹುಡುಗ, ಟಗರು ಚಿತ್ರಗಳಿಗೂ ಡೈರೆಕ್ಟರ್ ಅಭಿ ಸಹ ನಿರ್ದೇಶಕರಾಗಿ ದುಡಿದಿದ್ದ ಅಭಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಸೋಮು ಸೌಂಡ್ ಇಂಜಿನಿಯರ್ ಬಳಗ ರೀ ರೆಕಾರ್ಡಿಂಗ್ ಕೆಲಸದಲ್ಲಿ ಬ್ಯುಸಿಯಾಗಿದೆ.

https://youtu.be/LieyRrxbsNI?si=meG6dQ5EiZa04DfB

ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’ ರಿಲೀಸ್ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ...
09/09/2023

ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’ ರಿಲೀಸ್

ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ 'ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ. ಅಂದ್ರೆ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿ…

09/09/2023

ಆಕಾಶದಲ್ಲಿ ಮಿಂಚಿದ ಕಿಚ್ಚ ಬರ್ತಡೇಗೆ ಡ್ರೋನ್ ಸ್ಪೆಷಲ್ ಶೋ-Kiccha Sudeep | Birthday Drone Show | Akhada

ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್...
07/09/2023

ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್

ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.

ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಲವರ್ ಬಾಯ್ ಆಗಿ ಮಿಂಚಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಸ್ಕಂದ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಕನ್ನಡತಿ ಶ್ರೀಲೀಲಾ, ರಾಮ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್‌ಎಸ್ ಮ್ಯೂಸಿಕ್ ಕಿಕ್ ಈ ಚಿತ್ರಕ್ಕಿದೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಸ್ಕಂದ ಸಿನಿಮಾವನ್ನು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಸೆಪ್ಟೆಂಬರ್ 28ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಸ್ಕಂದ ಸಿನಿಮಾ ತೆರೆ ಕಾಣುತ್ತಿದೆ.

ಹೊಸಬರ ‘ಹೊಸ ದಿನಚರಿ’ ಒಟಿಟಿ ಎಂಟ್ರಿ.. ಇಲ್ಲಿದೆ ಮಾಹಿತಿ ಸಾಫ್ಟ್ ವೇರ್ ಹಿನ್ನೆಲೆಯಿಂದ ಬಂದಿರುವ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾರವರ ಚ...
07/09/2023

ಹೊಸಬರ ‘ಹೊಸ ದಿನಚರಿ’ ಒಟಿಟಿ ಎಂಟ್ರಿ.. ಇಲ್ಲಿದೆ ಮಾಹಿತಿ

ಸಾಫ್ಟ್ ವೇರ್ ಹಿನ್ನೆಲೆಯಿಂದ ಬಂದಿರುವ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾರವರ ಚೊಚ್ಚಲ ಹೆಜ್ಜೆ 'ಹೊಸ ದಿನಚರಿ'. ಒಂದಷ್ಟು ಕಿರುಚಿತ್ರಗಳನ್ನು ನಿರ್ಮಿಸಿದ್ದ ಕೀರ್ತಿ, ಹೊಸ ದಿನಚರಿ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಇವರಿಗೆ ವೈಶಾಖ್ ಕೂಡ ಸಾಥ್ ಕೊಟ್ಟಿದ್ದರು. ಇವರಿಬ್ಬರ ಸಾರಥ್ಯದಲ್ಲಿ ಮೂಡಿಬಂದಿದ್ದ ಈ ಸಿನಿಮಾ ಕಳೆದ ಡಿಸೆಂಬರ್ ನಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿತ್ತು. ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದ್ದ ಹೊಸ ದಿನಚರಿ ಚಿತ್ರವೀಗ ಒಟಿಟಿಗೆ ಲಗ್ಗೆ ಇಟ್ಟಿದೆ.

ಸೆಪ್ಟೆಂಬರ್ 4 (ಸೋಮವಾರ) ರಿಂದ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್
ಎಲ್ಲರ ಜೀವನದಲ್ಲೂ ಪ್ರೀತಿ ಇದೇ ಇರುತ್ತದೆ. ಆದರೆ ಪ್ರೀತಿಸಿದ ವ್ಯಕ್ತಿ ಕೊನೆಯವರೆಗೂ ಇರುತ್ತಾರಾ? ಅವರಿಲ್ಲದೇ ಬೇರೊಬ್ಬರು ಜೀವನದಲ್ಲಿ ಬಂದಾಗ ಏನಾಗುತ್ತದೆ ಎಂಬ ಕಥಾಹಂದರ ಹೊಂದಿರುವ ಹೊಸ ದಿನಚರಿ ಸಿನಿಮಾ ಈಗ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.

ಹೊಸ ದಿನಚರಿ ಸಿನಿಮಾಗೆ ಗಂಗಾಧರ್ ಸಾಲಿಮಠ ಹಣ ಹಾಕಿದ್ದು, ಮೃತ್ಯುಂಜಯ ಶುಕ್ಲಾ ಹಾಗೂ ಅಲೋಕ್ ಚೌರಾಸಿಯಾ ಅವರು ಕೂಡ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ಬಾಬು ಹಿರಣ್ಣಯ್ಯ ಮತ್ತು ಅರುಣಾ ಬಾಲರಾಜ್ ಜೊತೆಗೆ ಬಹುತೇಕ ಹೊಸಬರ ನಟಿಸಿದ್ದಾರೆ. ಉಳಿದಂತೆ, ದೀಪಕ್ ಸುಬ್ರಹ್ಮಣ್ಯ, ಚೇತನ್ ವಿಕ್ಕಿ, ಮಂದಾರ, ವರ್ಷ, ಶ್ರೀಪ್ರಿಯಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ವೈಶಾಖ್ ವರ್ಮಾ ಅವರ ಸಂಗೀತ, ಸಾಹಿತ್ಯ, ಅಶ್ವಿನ್ ಹೇಮಂತ್ ಅವರ ಹಿನ್ನೆಲೆ ಸಂಗೀತ, ರಂಜಿತ್ ಸೇತು ಸಂಕಲನ ಈ ಚಿತ್ರಕ್ಕಿದೆ.

*ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್..ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ*ಮೂರು ಬಾರಿ ಗ್ರ್ಯಾಮಿ ಪ್ರ...
11/08/2023

*ಹೊಸ ಇತಿಹಾಸ ಸೃಷ್ಟಿಸಿದ ರಿಕ್ಕಿ ಕೇಜ್..ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ*

ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ. ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.

ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

*ವಿಶ್ವದಲ್ಲೇ ಮೊದಲ ಬಾರಿಗೆ ಎಡಗೈ ಬಳಸುವವರಿಗಾಗಿಯೇ ಹೆಲ್ಮೆಟ್ ಲಾಂಚ್.* *ಇದು ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಇಂಪ್ಯಾಕ್ಟ್**ಎಡಗೈ ಬಳಸುವವರಿಗ...
11/08/2023

*ವಿಶ್ವದಲ್ಲೇ ಮೊದಲ ಬಾರಿಗೆ ಎಡಗೈ ಬಳಸುವವರಿಗಾಗಿಯೇ ಹೆಲ್ಮೆಟ್ ಲಾಂಚ್.* *ಇದು ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಇಂಪ್ಯಾಕ್ಟ್*

*ಎಡಗೈ ಬಳಸುವವರಿಗೆ ಇಲ್ಲಿದೆ ಸಿಹಿ ಸುದ್ದಿ: ಅಂತರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಗಿಫ್ಟ್..*

*ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್..ಎಡಗೈ ಅಪಘಾತ ಕಾರಣ ಸಿನಿಮಾಗೆ ವೇಗ ಹೆಲ್ಮೆಟ್ ಕಂಪನಿ ಸಾಥ್*

ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ. ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಸ್ ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ? ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಕಂಪನಿ ಎಗಡೈ ಬಳಸುವವರರಿಗಾಗಿ ಹೊಸ ಹೆಲ್ಮೆಟ್ ಲಾಂಚ್ ಮಾಡುತ್ತಿದೆ. ಇದೆ ಅಲ್ವಾ ಒಂದು ಸಿನಿಮಾದ ಸೋಷಿಯಲ್ ಇಂಪ್ಯಾಕ್ಟ್ ಅಂದರೆ..

ಕನ್ನಡ ಸಿನಿಮಾಗಳ ಮಾರುಕಟ್ಟೆ ಈಗ ವಿಸ್ತರಿಸಿದೆ. ವಿಭಿನ್ನ ಬಗೆಯ ಕಥಾಹಂದರದ ಕನ್ನಡ ಚಿತ್ರಗಳು ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಎಡಗೈ ಅಪಘಾತ ಕಾರಣಕ್ಕೆ ಸಿನಿಮಾದ ಐಡಿಯಾ, ಕಾನ್ಸೆಪ್ಟ್ ವೇಗ ಹೆಲ್ಮೆಟ್ ಕಂಪನಿಯರನ್ನು ತಲುಪಿದೆ ಅಂದ್ರೆ ಇಡೀ ಚಿತ್ರತಂಡ ಮಾತ್ರವಲ್ಲ ಇಡೀ ಇಂಡಸ್ಟ್ರೀಯೇ ಖುಷಿಪಡಬೇಕಾದ ವಿಚಾರ..ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದ ಜೊತೆ ವೇಗ ಹೆಲ್ಮೆಟ್ ಕಂಪನಿ ಕೈ ಜೋಡಿಸಿದ್ದಾರೆ. ಎಡಗೈ ಬಳಸುವವರಿಗೆ ಹೊಸ ಹೆಲ್ಮೆಟ್ ಪರಿಚಯಿಸುತ್ತಿದೆ.

ಅಂದಹಾಗೇ ಸಮರ್ಥ್ ಬಿ ಕಡಕೊಳ್ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್....ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮ...
10/08/2023

ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್....ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.

ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.

ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

*ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್....ನನ್ಬನ್ ಎಂಟರ್ಟೈನ್ಮೆಂಟ್ ಶುರು**ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್...ನನ್ಬನ್ ಎಂಟರ್ಟೈನ್...
08/08/2023

*ಸಿನಿಮಾ ನಿರ್ಮಾಣಕ್ಕಿಳಿದ ನನ್ಬನ್ ಗ್ರೂಪ್....ನನ್ಬನ್ ಎಂಟರ್ಟೈನ್ಮೆಂಟ್ ಶುರು*

*ಮನರಂಜನಾ ಕ್ಷೇತ್ರದತ್ತ ನನ್ಬನ್ ಗ್ರೂಪ್...ನನ್ಬನ್ ಎಂಟರ್ಟೈನ್ಮೆಂಟ್ ಶುರು*

ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನನ್ಬನ್ ಗ್ರೂಪ್ ಭಾರತದ ರಾಯಭಾರಿ ನಟ ಆರಿ ಅರ್ಜುನನ್ ನನ್ಬನ್ ಸಂಸ್ಥೆ ಒಡನಾಟದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಂತರ ಮಾತನಾಡಿದ ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ನಿಮ್ಮೆಲ್ಲರ ಸಹಭಾಗಿತ್ವ ಮತ್ತು ಸಹಕಾರ ಇಲ್ಲದಿದ್ದರೆ ಈ ಕಾರ್ಯಕ್ರಮ ಇಷ್ಟು ಅದ್ಧೂರಿಯಾಗಿ ನಡೆಯುತ್ತಿರಲಿಲ್ಲ.

"ನನ್ಬನ್ ಗ್ರೂಪ್ ಹಲವಾರು ಸಾಮಾಜಿಕ ಕಾರಣಗಳಿಗಾಗಿ ಸಹಾಯ ಹಸ್ತವನ್ನು ನೀಡುತ್ತಿದೆ. ನನ್ಬನ್ ಗ್ರೂಪ್ ಅನ್ನು ಪ್ರಾರಂಭಿಸಲು ಮುಖ್ಯ ಕಾರಣ ಸ್ನೇಹ. ನಾವು ಯಾವ ರೀತಿಯ ಜೀವನವನ್ನು ನಡೆಸುತ್ತೇವೆ ಮತ್ತು ನಾವು ಎಲ್ಲಿದ್ದೇವೆ ಎಂಬುದರ ಹೊರತಾಗಿಯೂ, ಸ್ನೇಹ ಸುತ್ತಮುತ್ತಲಿನವರಿಗೆ ಪ್ರೀತಿಯಿಂದ ಬೇಷರತ್ತಾದ ಸಹಾಯವನ್ನು ನೀಡುತ್ತದೆ. ನಮ್ಮಲ್ಲಿ, ಸ್ನೇಹ ಜಾತಿ, ಮತ, ಸಮುದಾಯ ಅಥವಾ ಲಿಂಗದ ಆಧಾರದ ಮೇಲೆ ಜನರ ನಡುವೆ ವ್ಯತ್ಯಾಸವನ್ನು ಹೊಂದಿಲ್ಲ ಎಂದರು.

ನನ್ಬನ್ ಗ್ರೂಪ್ ಒಂದು ಲಾಭರಹಿತ ಸಂಸ್ಥೆಯಾಗಿದೆ. ನಾವೀಗ ಈ ಗುಂಪಿನಿಂದ ನನ್ಬನ್ ಎಂಟರ್‌ಟೈನ್‌ಮೆಂಟ್ ಎಂಬ ಹೊಸ ಉದ್ಯಮ ಪ್ರಾರಂಭಿಸಿದ್ದೇವೆ. ಈ ಸಂಸ್ಥೆಯು ಸಿನಿಮಾ ನಿರ್ಮಾಣದತ್ತ ಗಮನಹರಿಸುತ್ತದೆ.‌ ಮೊದಲು ತಮಿಳು ಸಿನಿಮಾ ನಿರ್ಮಾಣ, ನಂತರ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಗುರಿ ಹೊಂದಿದ್ದೇವೆ. . ಹೊಸದಾಗಿ ಪ್ರಾರಂಭಿಸಲಾದ ನನ್ಬನ್ ಎಂಟರ್ಟೈನ್ಮೆಂಟ್ ನಡಿ ಪ್ರತಿಭಾವಂತರಿಗೆ ಅವಕಾಶಗಳನ್ನು ನೀಡುತ್ತೇವೆ. ಈ ವೇದಿಕೆ ಮೂಲಕ ಅವರು ತಮ್ಮ ಪ್ರತಿಭೆ ಪ್ರದರ್ಶಿಸಬಹುದು ಎಂದರು.

ನನ್ಬನ್ ಗ್ರೂಪ್ ಸಿನಿಮಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿದೆ. ನನ್ಬನ್ ಎಂಟರ್ಟೈನ್ಮೆಂಟ್ ಮೂಲಕ ಯುವ ಪ್ರತಿಭೆಗಳ‌ ಕನಸಿಗೆ ವೇದಿಕೆ ನಿರ್ಮಿಸಿದೆ. ಸದಾ ಅಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಗುರಿ ಹೊಂದಿದೆ ನನ್ಬನ್ ಎಂಟರ್ಟೈನ್ಮೆಂಟ್.

*ತುಂಗಾ ಹಾಸ್ಟೆಲ್ ಬಾಯ್ಸ್ ಹವಾ…ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊ...
08/08/2023

*ತುಂಗಾ ಹಾಸ್ಟೆಲ್ ಬಾಯ್ಸ್ ಹವಾ…ಮೂರನೇ ವಾರವೂ ಹಾಸ್ಟೆಲ್ ಹುಡುಗರು ಬೇಕಿದ್ದಾರೆ ಸಿನಿಮಾ ಹೌಸ್ ಫುಲ್ ಪ್ರದರ್ಶನ..ಫ್ರೀ ಟಿಕೆಟ್ ಬಂಪರ್ ಆಫರ್..ಹೊಸಬರಿಗೆ ಅನುಶ್ರೀ ಸಾಥ್*

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಕಂ ನಿರೂಪಕಿ ಅನುಶ್ರೀ ಸಾಥ್ ಕೊಟ್ಟಿದ್ದಾರೆ. ಕಳೆದ ಭಾನವಾರ ವೀರೇಶ್ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಅನುಶ್ರೀ ಟಿಕೆಟ್ ವಿತರಿಸಿದರು. ಅಭಿಮಾನಿಯಾಗಿ ಈ ಸಿನಿಮಾದ ಸಕ್ಸಸ್ ಸೆಲೆಬ್ರೇಟ್ ಮಾಡುವುದಾಗಿ ತಿಳಿಸಿದರು.

ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ಸಿನಿಮಾ ಗೆಲ್ಲೋದಿಕ್ಕೆ ಕಾರಣ ರಿಪೀಟ್ ಆಡಿಯನ್ಸ್. ಡೈಲಾಗ್ ಮಿಸ್ ಆಗಿದ್ದಕ್ಕೆ ಸುಮಾರು ಜನ 2-3 ಬಾರಿ ನೋಡಿದ್ದಾರೆ. ನಮಗೆ ಫಸ್ಟ್ 2 ವೀಕ್ ಸೇರಿ 12 ಲಕ್ಷ ಜನ ನೋಡಿದ್ದಾರೆ. ಇನ್ನೂ 20 ಲಕ್ಷ ಜನ ನೋಡ್ತಾರೆ ಎಂಬ ಭರವಸೆ ಇದೆ. ಹೊಸ ಸಿನಿಮಾಗೆ ಅದ್ಭುತ ರೆಸ್ಪಾನ್ಸ್. ಅಪ್ಪು ಸರ್ ಆಶೀರ್ವಾದ, ಇಡೀ ತಂಡದ ಎಫರ್ಟ್ ಗೆ ಸಿನಿಮಾ ಹೌಸ್ ಫುಲ್ ಓಡುತ್ತಿದೆ. ಬುಕ್ ಮೈ ಶೋ ನಲ್ಲಿ 2 ಟಿಕೆಟ್ ತೆಗೆದುಕೊಂಡರೆ 1 ಉಚಿತವಾಗಿ ಕೊಡುತ್ತಿದ್ದೇವೆ ಎಂದರು.

ನಿರ್ಮಾಪಕ ವರುಣ್ ಗೌಡ ಮಾತನಾಡಿ, ನಮ್ಮ ಸಿನಿಮಾ ತುಂಬಾ ಚೆನ್ನಾಗಿ ಓಡುತ್ತಿದೆ. ಈ ಚಿತ್ರ ಶುರು ಮಾಡಲು ಕಾರಣ ಅಪ್ಪು ಸರ್. ಅವರ ಆಶೀರ್ವಾದದಿಂದ ಶುರು ಮಾಡಿದ್ದು, ಅವರ ಆಶೀರ್ವಾದಿಂದ ಚಿತ್ರ ತುಂಬಾ ಚೆನ್ನಾಗಿ ಹೋಗುತ್ತಿದೆ. ಪರವಃ, ಜೀ ಸ್ಟುಡಿಯೋಸ್ ಧನ್ಯವಾದ ಎಂದರು.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆಗೆ ಚಿತ್ರತಂಡ ಖುಷಿಯಾಗಿದೆ. ಇದೇ ಕಾರಣಕ್ಕೆ ಮತ್ತಷ್ಟು ಜನ ಸಿನಿಮಾ ನೋಡಲಿ ಎನ್ನುವ ಕಾರಣ ಫ್ರೀ ಟಿಕೆಟ್ ಆಫರ್ ಕೊಡುತ್ತಿದೆ. ಆಗಸ್ಟ್ 7ರ ಮಧ್ಯಾಹ್ನದಿಂದ ಗುರುವಾರ ಸಂಜೆಯವರೆಗೆ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರದ 2 ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್ ಫ್ರೀ ಕೊಡಲಾಗುತ್ತಿದೆ. "ಇಡೀ ಥಿಯೇಟರ್ ತುಂಬ್ಕೊಂಡು ಎಲ್ಲರೂ ನಗಾಡ್ಕೊಂಡು ತೇಲಾಡ್ಕೊಂಡು ಖುಷಿಖುಷಿಯಾಗಿ ಇರ್ಬೇಕು ಅಂತ ನಮ್ ಆಸೆ" ಎಂದು ಚಿತ್ರತಂಡ ಹೇಳಿದೆ.

ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿಗೆ ಹೊರ ರಾಜ್ಯ ಹಾಗೂ ವಿದೇಶಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ.

*ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’* ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್...
07/08/2023

*ಹಾಡಿನಲ್ಲಿ ಫೈಟ್ ಮಾಡಿರೋ ‘ಅನ್‌ಲಾಕ್ ರಾಘವ’*

ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ "ಅನ್‌ಲಾಕ್ ರಾಘವ" ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ.
“ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ ಅರ್ಧ ಫೈಟ್ ಒಂದು ಹಾಡಿನ ನಡುವೆ ಬರುತ್ತದೆ.. ಚಿತ್ರಕತೆಯ ಹಂತದಲ್ಲಿ ಈ ಹಾಡನ್ನು ನಾವು ಸೇರಿಸಿರಲಿಲ್ಲ. ಬಳಿಕ, ಆ ಸೀಕ್ವೆನ್ಸ್ ನಲ್ಲಿ ಒಂದು ಹಾಡಿದ್ದರೆ ಹೇಗೆ ಎಂಬ ಆಲೋಚನೆ ಬಂತು. ಅದನ್ನು ಇನ್ ಕಾರ್ಪೋರೇಟ್ ಮಾಡಿದಾಗ ಈ ಸೀಕ್ವೆನ್ಸ್ ತುಂಬಾ ಬ್ಯೂಟಿಫುಲ್ ಆಗಿ ಮೂಡಿಬಂದಿದೆ. ನಮ್ಮ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಡಬ್ಬಿಂಗ್ ಸಮಯದಲ್ಲಿ ಆ ಹಾಡನ್ನು ನೋಡಿ, ಬಹಳ ಮೆಚ್ಚಿದ್ದಾರೆ. ಜೊತೆಗೆ ಆ ಹಾಡು, ಸಿನಿಮಾದ ಟ್ರಂಪ್ ಕಾರ್ಡ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಈ ಆಲೋಚನೆಗೆ ಸಾಥ್ ಕೊಟ್ಟ ನಿರ್ಮಾಪಕರಾದ ಮಂಜುನಾಥ ಡಿ ಅವರು, ಸಂಗೀತ ನಿರ್ದೇಶಕರಾದ ಅನೂಪ್ ಸೀಳಿನ್, ಡಿಒಪಿ ಲವಿತ್, ಸಾಹಸ ನಿರ್ದೇಶಕರಾದ ಅರ್ಜುನ್ ಮಾಸ್ಟರ್, ನೃತ್ಯ ನಿರ್ದೇಶಕರಾದ ಮುರುಳಿ ಮಾಸ್ಟರ್, ಎಡಿಟರ್ ಅಜಯ್ ಎಲ್ಲರಿಗೂ ತುಂಬಾ ಥ್ಯಾಂಕ್ಸ್.. ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ಹಾಡಿರುವ ಸಾಯಿ ವಿಘ್ನೇಶ್ ಈ ಹಾಡನ್ನು ಹಾಡಿರುವುದು ಮತ್ತೊಂದು ವಿಶೇಷ” ಎಂದಿದ್ದಾರೆ ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ.
ಎಡಿಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗುವ ಮುನ್ನ ಅನ್‌ಲಾಕ್ ರಾಘವ ಸಿನಿಮಾವನ್ನು ನೋಡಿರುವ ಚಲನಚಿತ್ರ ನಿರ್ಮಾಪಕರು ಹಾಗೂ ಚಿತ್ರ ತಂಡ ಸಂತೋಷ ಪಟ್ಟಿದ್ದಾರೆ. “ಈ ವರ್ಷದ ನಿರೀಕ್ಷಿತ ಚಲನಚಿತ್ರಗಳಲ್ಲಿ, ನಮ್ಮ "ಅನ್‌ಲಾಕ್ ರಾಘವ" ಸಿನಿಮಾ ಸೇರುವುದರಲ್ಲಿ ಯಾವುದೇ ಅನುಮಾನವೇ ಇಲ್ಲ” ಎಂದು ನಿರ್ಮಾಪಕರು ಹರ್ಷ ವ್ಯಕ್ತಪಡಿಸಿದ್ದಾರೆ.
“ಇಡೀ ಸಿನಿಮಾದಲ್ಲಿ ನಾಯಕರಾದ ಮಿಲಿಂದ್ ಗೌತಮ್ ಅವರು ತುಂಬಾ ಹ್ಯಾಂಡ್ಸಮ್ ಆಗಿ ಮಿಂಚಿದ್ದಾರೆ. ಬಹಳ ಮುಖ್ಯವಾಗಿ ಸಾಹಸ ಸೀಕ್ವೆನ್ಸ್ ಗಳನ್ನು ನೋಡಿದಾಗ ನಮ್ಮ ಕನ್ನಡಕ್ಕೆ ಪ್ರಾಮಿಸಿಂಗ್ ಕಮರ್ಷಿಯಲ್ ಹೀರೋ ಆಗುವುದರಲ್ಲಿ ಅನುಮಾನವೇ ಇಲ್ಲ. ಜೊತೆಗೆ ಬ್ಯೂಟಿಫುಲ್ ಆಗಿರೋ ನಾಯಕಿ ರೇಚಲ್ ಡೇವಿಡ್ ಅವರೊಂದಿಗಿನ ಎಲ್ಲಾ ಸೀನ್‌ಗಳು ಮ್ಯಾಜಿಕಲ್ ಆಗಿ ಮೂಡಿಬಂದಿವೆ” ಎನ್ನುತ್ತಿದೆ ಚಿತ್ರ ತಂಡ.
ಇಲ್ಲಿಯವರೆಗೂ ನಮಗೆ ಸಿಕ್ಕಿರುವ ಮಾಹಿತಿಯಂತೆ ‘ಅನ್‌ಲಾಕ್ ರಾಘವ’ ಚಿತ್ರ ಕಲರ್‌ಫುಲ್ ಆಗಿದ್ದು, ಹ್ಯೂಮರಸ್ ಮಜವನ್ನು ಉಣ ಬಡಿಸೋ ಕಮರ್ಷಿಯಲ್ ಸಿನಿಮಾ ಆಗಿದೆ. ಈಗಾಗಲೇ ಎಡಿಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ ನ ಉಳಿದ ಹಂತಗಳಲ್ಲಿ ತೊಡಗಿಸಿಕೊಂಡಿರುವ ‘ಅನ್‌ಲಾಕ್ ರಾಘವ’ ಬೇಗನೇ ತೆರೆಗಪ್ಪಳಿಸಿ, ಚಿತ್ರಪ್ರೇಮಿಗಳಿಗೆ ಮನರಂಜನೆ ಉಣಬಡಿಸಲಿದ್ದಾನೆ ಎಂಬ ಕಾತುರದಲ್ಲಿ ಸಿನಿಪ್ರೇಮಿಗಳಿದ್ದಾರೆ.
‘ಅನ್‌ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್‌ ನಡಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಮುರಳಿ ಮಾಸ್ಟರ್ ಹಾಗೂ ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

ಮಿಲಿಂದ್ ಗೌತಮ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ

07/08/2023

Hostel Hudugaru Bekagiddare Movie Success Celebration at Veeresh Theatre | Akhada | ಅಖಾಡ

*’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್*ಶೋಕ್ದಾರ್ ...
07/08/2023

*’ವಾಮನ’ ಸಿನಿಮಾಗೆ ಯಂಗ್ ರೆಬಲ್ ಸ್ಟಾರ್ ಸಾಥ್..ಧ್ವನೀರ್-ರೀಷ್ಮಾ ಜೋಡಿಯ ಮುದ್ದು ರಾಕ್ಷಸಿ ಹಾಡು ರಿಲೀಸ್ ಮಾಡಿದ ಅಭಿಷೇಕ್ ಅಂಬರೀಶ್*

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ಇತ್ತೀಚೆಗೆಷ್ಟೇ ರಿಲೀಸ್ ಆಗಿದ್ದ ವಾ..ವಾ..ವಾ..ವಾಮನ ಮಾಸ್ ನಂಬರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ವಾಮನ ಅಂಗಳದಿಂದ ಮುದ್ದು ರಾಕ್ಷಸಿ ಎಂಬ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಹಾಡಿಗೆ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಕಂಠ ಕುಣಿಸಿದ್ದಾರೆ. ಮುದ್ದು ರಾಕ್ಷಸಿ ಹಾಡಿಗೆ ಧನ್ವೀರ್ ಹಾಗೂ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ "ಚೇತನ್‌ ಗೌಡ" ಅದ್ಧೂರಿಯಾಗಿ ನಿರ್ಮಿಸಿರುವ ವಾಮನ ಸಿನಿಮಾವನ್ನು ಯುವ ನಿರ್ದೇಶಕ "ಶಂಕರ್‌ ರಾಮನ್‌" ರಚಿಸಿ ನಿರ್ದೇಶಿಸಿದ್ದಾರೆ. ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಮುದ್ದು ರಾಕ್ಷಸಿ ಮೆಲೋಡಿ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ರಿಲೀಸ್ ಮಾಡಿ ಗೆಳೆಯನ ಚಿತ್ರಕ್ಕೆ ಸಾಥ್ ಕೊಟ್ಟರು.

ಅಭಿಷೇಕ್ ಅಂಬರೀಷ್, ನಾನು ಈಗಷ್ಟೇ ಮುದ್ದು ರಾಕ್ಷಸಿ ಹಾಡು ನೋಡಿದೆ. ಒಂದು ಸಾಂಗ್ ಹಿಟ್ ಆಗಬೇಕು ಅಂದರೆ ಅದರ ಕ್ರೆಡಿಟ್ ಹೀರೋಗೂ ಅಲ್ಲ ಹೀರೋಯಿನ್ ಗೂ ಅಲ್ಲ. ಮ್ಯೂಸಿಕ್ ಡೈರೆಕ್ಟರ್, ಲಿರಿಕ್ಸಿಸ್ಟ್ ಗೆ. ಅವರ ಎಫರ್ಟ್ ಜಾಸ್ತಿ ಇರುತ್ತದೆ. ನಮ್ಮ ಗೆಳೆಯ ಧನ್ವೀರ್ ಇಷ್ಟು ಚೆನ್ನಾಗಿ ರೋಮ್ಯಾನ್ಸ್ ಮಾಡ್ತಾನೆ ಗೊತ್ತಿರಲಿಲ್ಲ. ಬೈ ಟು ಲವ್ ಸಿನಿಮಾದಲ್ಲಿ ಸ್ವಲ್ಪ ನೋಡಿದ್ದೇವು. ಈಗ ವಾಮನ ಮುಖಾಂತರ ಕಂಪ್ಲೀಟ್ ಕಮರ್ಷಿಯಲ್ ಪ್ಯಾಕೇಜ್, ಕ್ಯೂಟ್ ಲವರ್ ಬಾಯ್ ರೀತಿ ಕಾಣಿಸುತ್ತಿದ್ದಾನೆ ಎಂದರು.

ಧ್ವನೀರ್ ಗೌಡ ಮಾತನಾಡಿ, ಒಂದೇ ಒಂದು ಫೋನ್ ಕಾಲ್ ಗೆ ಬಂದು ಮುದ್ದು ರಾಕ್ಷಸಿ ಹಾಡನ್ನು ಅಭಿಷೇಕ್ ಅಂಬರೀಶ್ ಅವರು ಲಾಂಚ್ ಮಾಡಿಕೊಟ್ಟಿದ್ದಾರೆ. ಭೂಷಣ್ ಮಾಸ್ಟರ್ ಕೊರಿಯೋಗ್ರಫಿಗೆ ಹೆಜ್ಜೆ ಹಾಕಿದ್ದೇನೆ ಎಂದರು.

ವಾಮನ ನಿರ್ಮಾಪಕ ಚೇತನ್ ಗೌಡ ಮಾತನಾಡಿ, ಎಲ್ಲರಿಗೂ ಧನ್ಯವಾದ..ಈ ಸಮಾರಂಭವನ್ನು ಇಷ್ಟು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಾ. ನಾನು ಮೊದಲ ಸಾಂಗ್ ಬಿಡುಗಡೆ ಟೈಮ್ ನಲ್ಲಿ ಸಿನಿಮಾ ಬಗ್ಗೆ ಎಲ್ಲವನ್ನೂ ಹೇಳಿದ್ದೇನೆ. ಈ ಹಾಡನ್ನು ನೋಡಿ ಸಪೋರ್ಟ್ ಮಾಡಿ. ಕನ್ನಡ ಸಿನಿಮಾಗಳನ್ನು ನೋಡಿ ಕನ್ನಡ ಚಿತ್ರರಂಗ ಬೆಳೆಸಿ ಎಂದರು.

ನಿರ್ದೇಶಕ ಶಂಕರ್ ರಾಮನ್ ಮಾತನಾಡಿ, ಮೊದಲ ಹಾಡಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಈ ಸಾಂಗ್ ನಿಮಗೆ ಡೆಡಿಕೇಟ್ ಗೆ ಮಾಡುತ್ತಿದ್ದೇವೆ. ಅಜನೀಶ್ ಲೋಕನಾಥ್ ಸಂಗೀತ, ವಿ ನಾಗೇಂದ್ರ ಪ್ರಸಾದ್ ಮುದ್ದಾದ ಸಾಹಿತ್ಯ, ವಿಜಯ್ ಪ್ರಕಾಶ್ ಹಾಗೂ ಹರ್ಷಿಕಾ ದೇವನಾಥ್ ಧ್ವನಿ ಕೂಡಿಸಿದ್ದು, ಭೂಷಣ್ ಮಾಸ್ಟರ್ ಕೊರಿಯೋಗ್ರಫ್ ಮಾಡಿದ್ದಾರೆ. ಮನೆಗೆ ಹೋಗ್ತಾ ನೀವು ಮುದ್ದು ಮುದ್ದು ರಾಕ್ಷಸಿ ಹಾಡುತ್ತಾ ಹೋಗಿ ಎಂದರು.

ವಾಮನ ಸಿನಿಮಾದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಶಿವರಾಜ್ ಕೆಆರ್ ಪೇಟೆ, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೋಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್, ವಿಕ್ರಮ್ ಮೋರ್ ಮತ್ತು ಜಾಲಿ ಬಾಸ್ಟಿನ್ ಆಕ್ಷನ್, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ.

Address


Website

Alerts

Be the first to know and let us send you an email when Akhada Media and Entertainment posts news and promotions. Your email address will not be used for any other purpose, and you can unsubscribe at any time.

Videos

Shortcuts

  • Address
  • Alerts
  • Videos
  • Claim ownership or report listing
  • Want your business to be the top-listed Media Company?

Share