Siddu Followers

  • Home
  • Siddu Followers

Siddu Followers ನಮ್ಮ ನಡೆ ಸಿದ್ದರಾಮಯ್ಯನವರ ಹಿಂದೆ.. we follow siddaramaiah..
(1)

07/10/2022
ರಂಜಾನ್ ಹಬ್ಬದ ಪ್ರಯುಕ್ತ ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಸಿದ್ದರಾಮಯ...
27/04/2022

ರಂಜಾನ್ ಹಬ್ಬದ ಪ್ರಯುಕ್ತ ಆಹಾರ ಪದಾರ್ಥಗಳ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಜರಿದ್ದರು.

ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ  #ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ  #ಮೋದಿಯವರಿಗೆ ಮನುಷ್ಯತ್ವವೇ ಇಲ್ಲ ಎಂದ...
29/06/2020

ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ #ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ #ಮೋದಿಯವರಿಗೆ ಮನುಷ್ಯತ್ವವೇ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ #ಸಿದ್ದರಾಮಯ್ಯ ಅವರು #ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರನ್ನು ರಾಕ್ಷಸೀ ಪ್ರವೃತ್ತಿ. ಅವರಿಗೆ ಮಾನವೀಯತೆ ಎಂಬುದೇ ಇಲ್ಲ ಎಂದು ಅವರು ಕಿಡಿ ಕಾರಿದ್ದಾರೆ.ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಸೈಕಲ್ ಚಳವಳಿ ಮತ್ತು ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಅವರು ಮಾತನಾಡಿದರು.
ಡಾ. ಮನಮೋಹನಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ತೈಲ ದರವನ್ನು ಕೊಂಚ ಏರಿಸಿದ್ದರೂ ಬಿಜೆಪಿಯವರು ತಲೆಯ ಮೇಲೆ ಗ್ಯಾಸ್ ಸಿಲಿಂಡರ್‍ಗಳನ್ನು ಹೊತ್ತು ಬೀದಿಗೆ ಇಳಿಯುತ್ತಿದ್ದರು. ಇದೀಗ ಪೆಟ್ರೋಲ್, ಡೀಸೆಲ್ ದರ ಗಗನ ಮುಟ್ಟಿದೆ ಆದರೂ ಬಿಜೆಪಿಯವರೇಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ್ ದರವನ್ನು ಏರಿಸಿ ಜನ ಸಾಮಾನ್ಯರಿಗೆ ತೊಂದರೆ ಕೊಡಬಾರದು ಎಂದು ಮನಮೋಹನಸಿಂಗ್ ಅವರು ಸಬ್ಸಿಡಿ ನೀಡುತ್ತಿದ್ದರು. ಆದರೆ, ನರೇಂದ್ರ ಮೋದಿಯವರಿಗೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರನ್ನು ಸುಲಿಗೆ ಮಾಡುವ ಜನ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದರು.
ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊರೊನಾ ಪರಿಣಾಮ ಉದ್ಯೋಗ ಇಲ್ಲದೆ ಪರದಾಡುತ್ತಿರುವ ಮಧ್ಯಮ ವರ್ಗದ ಜನತೆ ಹಾಗೂ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರು ಇದರಿಂದ ಭಾರಿ ಹೊಡೆತ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ದರ ಬ್ಯಾರಲ್‍ಗೆ 130 ಡಾಲರ್‍ನಂತೆ ಮಾರಾಟವಾಗುತ್ತಿದ್ದಾಗಲೇ ಅಂದಿನ ಯುಪಿಎ ಸರ್ಕಾರ ದರ ಏರಿಕೆಯನ್ನು ಈ ಪ್ರಮಾಣದಲ್ಲಿ ಮಾಡಿರಲಿಲ್ಲ. ಹೀಗಾಗಿ ಮೋದಿಯವರು ತಮ್ಮ ಬೆನ್ನು ತಾವೇ ನೋಡಿಕೊಳ್ಳಬೇಕು.ಕಚ್ಛಾ ತೈಲ ದರ ಇದೀಗ ಬ್ಯಾರಲ್‍ಗೆ 20-30 ಡಾಲರ್ ನಂತೆ ಮಾರಾಟವಾಗುತ್ತಿದೆ.ಹೀಗಿರುವಾಗ ಪೆಟ್ರೋಲ್, ಡೀಸೆಲ್ ಲೀಟರ್‍ಗೆ 25-30 ರೂ. ಪ್ರಕಾರ ಮಾರಾಟವಾಗಬೇಕಿತ್ತು. ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಯದ್ವಾತದ್ವ ಏರಿಕೆ ಮಾಡುವ ಮೂಲಕ 18 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹ ಮಾಡಿದೆ ಎಂದು ಹೇಳಿದರು. ಜನತೆಯ ರಕ್ತ ಹೀರುವ ಸರ್ಕಾರ ಕೇಂದ್ರದಲ್ಲಿದೆ. ಅಲ್ಲಿ ಆಡಳಿತ ನಡೆಸುತ್ತಿರುವವವರು ಮಾನವೀಯತೆಯನ್ನೇ ಮರೆತು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ಕಿಡಿ ಕಾರಿದರು.
ಸೈಕಲ್ ಚಳವಳಿಯ ಅಂಗವಾಗಿ ಸಿದ್ದರಾಮಯ್ಯ ಅವರು ಬೆಳಗ್ಗೆ ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿ ವರೆಗೆ ಸೈಕಲನಲ್ಲಿ ತೆರಳಿದರು. ಹಾಗೂ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಲುವು ಖಂಡಿಸಿ ಇಂದು ನನ್ನ ನಿವಾಸದಿಂದ ಪ್ರದೇಶ ಕಾಂಗ್ರೆಸ್ ಕಚೇರಿಗೆ ಸೈಕಲ್ ಮೂಲಕ ತೆರಳಿದೆ.ಕ...
29/06/2020

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಲುವು ಖಂಡಿಸಿ ಇಂದು ನನ್ನ ನಿವಾಸದಿಂದ ಪ್ರದೇಶ ಕಾಂಗ್ರೆಸ್ ಕಚೇರಿಗೆ ಸೈಕಲ್ ಮೂಲಕ ತೆರಳಿದೆ.
ಕಚ್ಚಾತೈಲ ಬೆಲೆ ಕುಸಿದಿದ್ದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿರಂತರ ಏರಿಸುತ್ತಾ ನರೇಂದ್ರ ಮೋದಿ ಅವರ ನೇತ್ರತ್ವದ ಬಿಜೆಪಿ ಸರ್ಕಾರ ದೇಶದ ಜನರ ಸುಲಿಗೆ ಮಾಡುತ್ತಿದೆ.
.

ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಅಭಿನಂದಿಸಿದೆ. ಈ ವೇಳೆ ನೂತನ ಅಧ್ಯಕ್ಷರಾದ ಕೃಷ್ಣ, ಪ್...
26/06/2020

ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ಅಭಿನಂದಿಸಿದೆ. ಈ ವೇಳೆ ನೂತನ ಅಧ್ಯಕ್ಷರಾದ ಕೃಷ್ಣ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮೂರ್ತಿ ಸೇರಿದಂತೆ ಇತರೆ 35 ಮಂದಿ ಪದಾಧಿಕಾರಿಗಳು ಹಾಜರಿದ್ದರು.

24/06/2020

ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುರೇಶ್ ಕುಮಾರ್ ಅವರ ಜವಾಬ್ದಾರಿ. ಮಕ್ಕಳ ಹೆತ್ತವರು ರಾಜ್ಯ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಭಂಗ ತರಬೇಡಿ.

ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಒತ್ತಡಕ್ಕೆ ಒಳಗಾಗಬೇಡಿ. ನೆನಪಿರಲಿ ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ.

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.
Good luck 👍

ಜುಲೈ 2ರಂದು ನಡೆಯಲಿರುವ ಪ್ರತಿಜ್ಞಾ ದಿನ‌ದ ಸಿದ್ಧತೆ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದೆ. ಈ ಸಭ...
23/06/2020

ಜುಲೈ 2ರಂದು ನಡೆಯಲಿರುವ ಪ್ರತಿಜ್ಞಾ ದಿನ‌ದ ಸಿದ್ಧತೆ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಇಂದು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದೆ.
ಈ ಸಭೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಆಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ...
23/06/2020

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ?

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ದಿನವೊಂದಕ್ಕೆ ಜನರಲ್ ವಾರ್ಡ್‌ನಲ್ಲಿ ರೂ,10,000, ಐಸೋಲೇಷನ್ ವಾರ್ಡ್ ನಲ್ಲಿ ರೂ.15,000 ಮತ್ತು ವೆಂಟಿಲೇಟರ್ ಸಹಿತ ಐಸಿಯುನಲ್ಲಿ ರೂ.25,000 ಶುಲ್ಕ ನಿಗದಿಪಡಿಸಿರುವ ಮುಖ್ಯಮಂತ್ರಿಗಳ ಉದ್ದೇಶ ಜನರ ಜೀವ ಉಳಿಸುವುದೋ? ಜೀವ ತೆಗೆಯುವುದೋ? ಕೊರೊನಾ ಸೋಂಕನ್ನು ನಿಯಂತ್ರಿಸಲು ಸಂಪೂರ್ಣ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ತಾವು ನಿರ್ವಹಿಸಬೇಕಾಗಿರುವ ಜವಾಬ್ದಾರಿಯನ್ನು ಖಾಸಗಿಯವರ ಹೆಗಲಿಗೆ ವರ್ಗಾಯಿಸಲು ಹೊರಟಿವೆ. ಈ ಮೂಲಕ ಬಡ-ಅಸಹಾಯಕ ಜನರನ್ನು ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬಲಿಪಶುಮಾಡಲು ನಿರ್ಧರಿಸಿದೆ.

ಕೊರೊನಾ ಸೋಂಕಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಕಣ್ಣುಮುಚ್ಚಿ ಅನುಮೋದಿಸಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಂತಿದೆ. ಮುಖ್ಯಮಂತ್ರಿಗಳು ನೆರವಾಗಲು ಹೊರಟಿರುವುದು ಸೋಂಕಿತರಿಗೋ? ಖಾಸಗಿ ಆಸ್ಪತ್ರೆಗಳಿಗೋ? ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು.

ಲಾಕ್‌ಡೌನ್‌ನಿಂದಾಗಿ ಜನರ ದುಡಿಮೆಯ ಅವಕಾಶಗಳೆಲ್ಲ ಮುಚ್ಚಿ ಹೋಗಿವೆ. ಅಸಂಖ್ಯಾತ ನೌಕರರನ್ನು ಕಾರ್ಖಾನೆ ಮತ್ತು ಕಂಪೆನಿಗಳು ಕೆಲಸದಿಂದ ತೆಗೆದು ಹಾಕಿವೆ. ಇದರಿಂದಾಗಿ ಜನರ ಬಳಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿರುವುದು ಅಮಾನವೀಯ. ಬಡ ಅಥವಾ ಮಧ್ಯಮ ವರ್ಗದ ಒಂದೇ ಕುಟುಂಬದ ನಾಲ್ಕೈದು ಜನ ಸದಸ್ಯರು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಉಂಟಾದರೆ 10-12 ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಟ್ಟಬೇಕು, ಇಷ್ಟು ದೊಡ್ಡ ಮೊತ್ತದ ಹಣ ಅವರಿಂದ ತುಂಬಲು ಸಾಧ್ಯವೇ?

ಸರ್ಕಾರದ ಅಧಿಸೂಚನೆ ಪ್ರಕಾರ 2-3 ಜನ ವಾರ್ಡ್‌ಗಳನ್ನು ಹಂಚಿಕೊಂಡು ಚಿಕಿತ್ಸೆ ಪಡೆದರೆ ಅವರಿಗೆ ಸಾಮಾನ್ಯ ದರದ ಜೊತೆಗೆ ಶೇ.25 ರವರೆಗೆ ಹೆಚ್ಚಿನ ದರಗಳನ್ನು ನಿಗದಿಪಡಿಸಬಹುದು. ಅದರ ಜೊತೆಗೆ ಸರ್ಕಾರ ನಿಗದಿಪಡಿಸಿರುವ ದರಗಳು ವಿಮಾ ಪ್ಯಾಕೇಜುಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಜಾಗವೇ ಇಲ್ಲದಂತಾ ಪರಿಸ್ಥಿತಿಯಿದೆ. ಸುಮಾರು 35,000 ವೆಂಟಿಲೇಟರ್ಗಳ ಸರಬರಾಜಿಗೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದರೆ, ಕೇವಲ 90 ವೆಂಟಿಲೇಟರ್ಗಳನ್ನು ಮಾತ್ರ ನೀಡಿದೆಯೆಂಬ ಮಾಹಿತಿ ಇದೆ. ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಬೇರೆ ಸಾಕ್ಷಿ ಬೇಕೇ?

On this  , start & continue practicing Yoga for healthy life and sound mind.
21/06/2020

On this , start & continue practicing Yoga for healthy life and sound mind.

ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಬಿಡಬೇಕು ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಡಿಸಿರುವ ಸುಗ್ರೀವಾಜ್ಞ...
19/06/2020

ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಬಿಡಬೇಕು ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಆಗ್ರಹಿಸುತ್ತೇನೆ.

June 16ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ...
19/06/2020

June 16ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನನ್ನನ್ನು ಭೇಟಿಯಾಗಿ ವಿಧಾನ ಪರಿಷತ್ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿ...
19/06/2020

ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆಗಳು.

ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್‌ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಸದ್ಯ ಪೆಟ್ರೋಲ್, ಡೀಸೆಲ್‌ ಲೀಟರ್ ಗೆ ರೂ. 25 - 30 ಇರಬೇಕಿತ್ತು. ಕೇಂದ್ರ ಸರ್ಕಾರ ಪದೇ ಪದೆ ದರ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜನರನ್ನು ಬಲಿ ಹಾಕುತ್ತಿದೆ. ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ.
ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ.

ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ಸಹ ನಡೆಸಲಾಗುವುದು.

My letter to Prime Minister Narendra Modi to reverse fuel price hike. The fuel price should be reduced in the interest o...
19/06/2020

My letter to Prime Minister Narendra Modi to reverse fuel price hike. The fuel price should be reduced in the interest of common man & to boost demand.

My best birthday wishes to Shri. Rahul Gandhi. I wish him happiness, good health & long life.His unwavering commitment t...
19/06/2020

My best birthday wishes to Shri. Rahul Gandhi. I wish him happiness, good health & long life.

His unwavering commitment to be the voice of common man, during these difficult times, has inspired millions.

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ಮುಖಂಡರಾದ ಬಿ.ಕೆ.ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ನಾನು...
19/06/2020

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ಮುಖಂಡರಾದ ಬಿ.ಕೆ.ಹರಿಪ್ರಸಾದ್ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ನಾನು ಸೇರಿದಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿಯವರು ಜೊತೆಗಿದ್ದೆವು.

ಪೆಟ್ರೋಲ್ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಗ್ರಾಹಕರಿಗೆ ರೂ.25 ಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕುವ ಮೂಲಕ ಪ್ರತಿಭಟನೆ ನ...
19/06/2020

ಪೆಟ್ರೋಲ್ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಗ್ರಾಹಕರಿಗೆ ರೂ.25 ಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಯಿತು.

19/06/2020
ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಈ ಅವಕಾಶವನ್ನು  ಖಾಸಗಿ...
16/06/2020

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಈ ಅವಕಾಶವನ್ನು ಖಾಸಗಿ ಆಸ್ಪತ್ರೆಗಳು ದುರ್ಬಳಕೆ ಮಾಡಿಕೊಂಡು ರೋಗಿಗಳ ಸುಲಿಗೆ ಮಾಡದ ರೀತಿಯಲ್ಲಿ ಮುಖ್ಯಮಂತ್ರಿಗಳು ನಿಗಾ ವಹಿಸಬೇಕು.

ಕರ್ನಾಟಕ ಆರೋಗ್ಯ ಸೇವಾ ಸಂಘಗಳ ಒಕ್ಕೂಟ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರ ದಿನದ ಚಿಕಿತ್ಸೆಗೆ ರೂ.15,000, ಆಮ್ಲಜನಕ ಪೂರೈಕೆ ಚಿಕಿತ್ಸೆಗೆ ರೂ.20,000,
ವೆಂಟಿಲೇಟರ್ ಸೇವೆಗೆ ರೂ.35,000 ರೂಪಾಯಿ ನಿಗದಿಪಡಿಸಿರುವ ಪ್ರಸ್ತಾವವನ್ನು ಮುಖ್ಯಮಂತ್ರಿಗಳು ಒಪ್ಪಿಕೊಂಡರೆ ಜನರನ್ನು ಸಾವಿನ ದವಡೆಗೆ ನೂಕಿದಂತೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದೆ. ಈ ವೇಳೆ ಕೆಪಿಸಿಸಿ...
13/06/2020

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭಿನಂದಿಸಿದೆ. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ‌ ಅಹಮದ್, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ ಅವರು ಜೊತೆಗಿದ್ದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63 ಸೆಕ್ಷನ್‌ಗಳನ್ನು ರದ್ದುಗೊಳಿಸಲು ಹೊರಟಿರುವ ಮುಖ್ಯಮಂತ್ರಿಗಳು ಉಳುವವರಿಂದ ಭೂ...
13/06/2020

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63 ಸೆಕ್ಷನ್‌ಗಳನ್ನು ರದ್ದುಗೊಳಿಸಲು ಹೊರಟಿರುವ ಮುಖ್ಯಮಂತ್ರಿಗಳು ಉಳುವವರಿಂದ ಭೂಮಿ ಕಿತ್ತುಕೊಂಡು ಉಳ್ಳವರನ್ನು ಭೂಮಿಯ ಒಡೆಯರನ್ನಾಗಿ ಮಾಡಲು ಹೊರಟಿದೆ.

ಕೃಷಿ ಭೂಮಿ ಹೊಂದಲು ಆದಾಯದ ಮಿತಿ ಹೇರಿದ್ದ ಸೆಕ್ಷನ್ 79ಎ, ಕೃಷಿಕರಲ್ಲದವರಿಗೆ ಭೂಮಿ ಖರೀದಿಸುವುದನ್ನು ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರ ಸಲ್ಲಿಸಿದವರಿಗೆ ದಂಡ ವಿಧಿಸಿದ್ದ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಭೂ ಖರೀದಿಗೆ ಗರಿಷ್ಠ ಮಿತಿ ವಿಧಿಸಿದ್ದ ಸೆಕ್ಷನ್ 63 ಅನ್ನು ರದ್ದುಪಡಿಸುವುದು ಭೂಮಿತಾಯಿಗೆ ಬಗೆವ ದ್ರೋಹ. ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಇನ್ನಷ್ಟು ಬಲಪಡಿಸಿ ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು. ಯಡಿಯೂರಪ್ಪ ಅವರ ಸರ್ಕಾರ ಉಳುವವನನ್ನು ಒಕ್ಕಲೆಬ್ಬಿಸಲು ಹೊರಟಿದೆ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವ ತಿದ್ದುಪಡಿ, ಪ್ರಮುಖ ಬೆಳೆಗಳನ್ನು ಅಗತ್ಯವಸ್ತುಗಳ ಕಾಯ್ದೆಯಿಂದ ಹೊರಗಿಡುವ ತಿದ್ದುಪಡಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್ ಟಿ.. ಹೀಗೆ ರೈತರ ಮೇಲೆ ಪ್ರಹಾರ ಮಾಡುತ್ತಾ ಬಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗ ರೈತರಿಂದ ಭೂಮಿಯನ್ನೇ ಕಿತ್ತುಕೊಳ್ಳಲು ಹೊರಟಿವೆ. ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ರೈತರ ಹಿತದೃಷ್ಟಿಯ ಲವಲೇಶವೂ ಇಲ್ಲ.

ಹಸಿರು ಶಾಲು ಹೊದ್ದುಕೊಂಡು ತಾನೊಬ್ಬ ರೈತ ನಾಯಕ ಎಂದು ಹೇಳುತ್ತಲೇ ಅಧಿಕಾರಕ್ಕೆ ಬಂದಿರುವ ಬಿ.ಎಸ್ ಯಡಿಯೂರಪ್ಪ ಅವರ ಮುಖವಾಡ ಕಳಚಿ ಬಿದ್ದಿದೆ. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರನ್ನು ಗುಂಡಿಕ್ಕಿ ಕೊಂದರು, ಈಗ ಅವರಿಂದ ಭೂಮಿ ಕಿತ್ತುಕೊಂಡು ಸಾಯಿಸಲು ಹೊರಟಿದ್ದಾರೆ. ಈ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ನಮ್ಮ ಪಕ್ಷ ಸದನದ ಒಳಗೆ ಮತ್ತು ಹೊರಗೆ ಬಲವಾಗಿ ವಿರೋಧಿಸಲಿದೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ರೈತರಿಗೆ ತಿಳುವಳಿಕೆ ನೀಡಿ ಗ್ರಾಮೀಣ ಮಟ್ಟದಿಂದಲೇ ಹೋರಾಟವನ್ನು ರೂಪಿಸಲು ನಿರ್ಧರಿಸಿದ್ದೇವೆ. ಬಿಜೆಪಿಯ ರೈತವಿರೋಧಿ ನೀತಿಯನ್ನು ಮನೆಮನೆಗೂ ಮುಟ್ಟಿಸುವ ಕೆಲಸವನ್ನು ನಾವು ಮಾಡಲಿದ್ದೇವೆ.

#ರೈತವಿರೋಧಿಬಿಜೆಪಿ

5ನೇ ತರಗತಿವರೆಗೆ ಸರ್ಕಾರ ಆನ್‌ಲೈನ್ ತರಗತಿಗಳನ್ನು ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ ಮತ್ತು ಅದನ್ನು ಪಿಯುಸಿ ವರೆಗೆ ವಿಸ್ತರಿಸಬೇಕು ಎಂ...
11/06/2020

5ನೇ ತರಗತಿವರೆಗೆ ಸರ್ಕಾರ ಆನ್‌ಲೈನ್ ತರಗತಿಗಳನ್ನು ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ ಮತ್ತು ಅದನ್ನು ಪಿಯುಸಿ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸುತ್ತೇನೆ. ರಾಜ್ಯದಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ, ನಂತರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ ತೆರೆಯುವ ಬಗ್ಗೆ ಚಿಂತಿಸಬಹುದು, ಈ ಬಗ್ಗೆ ಅವಸರ ಬೇಡ.

Address


Website

Alerts

Be the first to know and let us send you an email when Siddu Followers posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Videos
  • Claim ownership or report listing
  • Want your business to be the top-listed Media Company?

Share